ವೃತಿ ನಿರತ ಹಾಗೂ ಪತ್ರಿಕಾ ಛಾಯಾಗ್ರಾಹಕ ಬಿ.ಪ್ರಭಾಕರ (ಪ್ರವೀಣ)ಗೆ ಛಾಯಾಶ್ರೀ ಪ್ರಶಸ್ತಿ.!
ಗೋಕಾಕ: ನಗರದ ವೃತಿ ನಿರತ ಹಾಗೂ ಪತ್ರಿಕಾ ಛಾಯಾಗ್ರಾಹಕ ಬಿ.ಪ್ರಭಾಕರ (ಪ್ರವೀಣ) ಅವರು ಕರ್ನಾಟಕ ಪೋಟೋಗ್ರಾರ್ಫರ ಅಸೋಸಿಯೇಷನ್ ಕೊಡಮಾಡುವ ಛಾಯಾಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬೆಂಗಳೂರಿನಲ್ಲಿ ಇದೆ ತಿಂಗಳು ೨೦,೨೧,೨೨ ರಂದು ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ನಡೆಯಲಿರುವ ಕರ್ನಾಟಕ ಪೋಟೋಗ್ರಾರ್ಫರ ಅಸೋಸಿಯೇಷನ್‌ನ ದಶಮಾನೋತ್ಸವ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಡುವುದು ಎಂದು ಕೆಪಿಎ ನಿರ್ದೇಶಕ ಮಲ್ಲಿಕಾರ್ಜುನ ಕೆ.ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಶಸ್ತಿಗೆ ಆಯ್ಕೆಯಾಗಿದಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವೃತ್ತಿ ನಿರತ ಛಾಯಾಗ್ರಾಹಕರ ಸಂಘ ಹಾಗೂ ಇತರ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಅಭಿಮಾನಿಗಳು, ಹಿತೈಷಿಗಳು ಶುಭ ಹಾರೈಸಿದ್ದಾರೆ.