Breaking News

ಮಹಾಕಾವ್ಯ ರಾಮಾಯಣ ಸರ್ವರಿಗೂ ಸರ್ವಕಾಲಕ್ಕೂ ದಾರಿದೀಪವಾಗಿದೆ-ಸರ್ವೋತ್ತಮ ಜಾರಕಿಹೊಳಿ.!

Spread the love

ಮಹಾಕಾವ್ಯ ರಾಮಾಯಣ ಸರ್ವರಿಗೂ ಸರ್ವಕಾಲಕ್ಕೂ ದಾರಿದೀಪವಾಗಿದೆ-ಸರ್ವೋತ್ತಮ ಜಾರಕಿಹೊಳಿ.!


ಗೋಕಾಕ: ಮಹರ್ಷಿ ವಾಲ್ಮೀಕಿ ರಚಿಸಿದ ಮಹಾಕಾವ್ಯ ರಾಮಾಯಣ ಸರ್ವರಿಗೂ ಸರ್ವಕಾಲಕ್ಕೂ ದಾರಿದೀಪವಾಗಿದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು.
ಅವರು, ರವಿವಾರದಂದು ನಗರದ ಮಹರ್ಷಿ ವಾಲ್ಮೀಕಿ ದೇವಸ್ಥಾನದ ಆವರಣದಲ್ಲಿ ತಾಲೂಕಾಡಳಿ ತಾಲೂಕ ಪಂಚಾಯತ, ನಗರಸಭೆ ಹಾಗೂ ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿ ಉತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಮಹಾನಗ್ರಂಥ ರಾಮಾಯಣದಲ್ಲಿ ನೀಡಿರುವ ಮಾನವೀಯ ಮೌಲ್ಯಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಂಡು ಅವುಗಳನ್ನು ಆಚರಣೆಗೆ ತರಬೇಕು. ಎಲ್ಲ ಮಹಾತ್ಮರ ಸಂದೇಶಗಳು ಮಾನವರ ನೆಮ್ಮದಿಯ ಬದುಕಿಗೆ ಉತ್ತಮ ಮಾರ್ಗಗಳಾಗಿವೆ ಎಂದ ಅವರು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ ಸುಶೀಕ್ಷಿತ ಸಮಾಜ ನಿರ್ಮಾಣಕ್ಕೆ ನಾವೆಲ್ಲ ಶ್ರಮಿಸೋಣ ಎಂದರು.
ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಉಪಾಧ್ಯಕ್ಷ ಬಸವರಾಜ ಆರೇನ್ನವರ, ಪೌರಾಯುಕ್ತ ಶಿವಾನಂದ ಹಿರೇಮಠ, ಗ್ರೇಡ್-೨ ತಹಶೀಲ್ದಾರ ಎಲ್ ಎಚ್ ಭೋವಿ, ಸಮಾಜ ಕಲ್ಯಾಣ ಅಧಿಕಾರಿ ಎಸ್ ವಿ ಕಲ್ಲಪ್ಪನವರ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಗಾರ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮುರಳಿಧರ ದೇಶಪಾಂಡೆ, ಎ.ಎಸ್.ಐ ಬಿ ಕೆ ರಂಗನ್ನವರ, ಮುಖಂಡ ಲಕ್ಕಪ್ಪ ಪೂಜೇರಿ ಉಪನ್ಯಾಸಕ ಮಹಾದೇವ ಜಿಡ್ಡಿಮನಿ ಸೇರಿದಂತೆ ಇತರರು ಇದ್ದರು.
ಇದೇ ಸಂದರ್ಭದಲ್ಲಿ ವಾಲ್ಮೀಕಿ ನಾಯಕ ಸಮಾಜದ ಪ್ರತೀಭಾನ್ವಿಯ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

1 + twelve =