Breaking News

ರೈತರು ಕೃಷಿ ಜೊತೆಗೆ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಿ ಆರ್ಥಿಕವಾಗಿ ಸಬಲರಾಗಿ-ಶಾಸಕ ರಮೇಶ ಜಾರಕಿಹೊಳಿ.!

Spread the love

ರೈತರು ಕೃಷಿ ಜೊತೆಗೆ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಿ ಆರ್ಥಿಕವಾಗಿ ಸಬಲರಾಗಿ-ಶಾಸಕ ರಮೇಶ ಜಾರಕಿಹೊಳಿ.!

ಗೋಕಾಕ: ರೈತರು ಕೃಷಿ ಜೊತೆಗೆ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಿ ಆರ್ಥಿಕವಾಗಿ ಸಬಲರಾಗುವಂತೆ ಶಾಸಕ ರಮೇಶ ಜಾರಕಿಹೊಳಿ ಕರೆ ನೀಡಿದರು.
ಅವರು, ಶುಕ್ರವಾರದಂದು ತಾಲೂಕಿನ ಶಿವಾಪೂರ (ಕೊಣ್ಣೂರ) ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ಹಾಲು ಉತ್ಪಾದಕರು ಉತ್ತಮ ಗುಣಮಟ್ಟದ ಹಾಲನ್ನು ಉತ್ಪಾದಿಸುವುದರ ಮೂಲಕ ಗರಿಷ್ಠ ಬೆಲೆಯನ್ನು ಪಡೆದುಕೊಳ್ಳಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಹಸುಗಳ ಆರೋಗ್ಯಕ್ಕೆ ಹೆಚ್ಚಿನ ಗಮನ ನೀಡಬೇಕು. ಆರೋಗ್ಯವಂತ ಹಸುವಿನಿಂದ ಮಾತ್ರ ಉತ್ತಮ ಗುಣಮಟ್ಟದ ಹಾಲು ಸಿಗಲು ಸಾಧ್ಯವಾಗುತ್ತದೆ. ರೋಗ ರುಜಿನ ಬರದಂತೆ ಕಾಲ ಕಾಲಕ್ಕೆ ಸರಿಯಾಗಿ ತಜ್ಞ ಪಶುವೈದ್ಯರಿಂದ ಲಸಿಕೆ ಕೊಡಿಸಬೇಕು. ಹೈನುಗಾರಿಕೆಯಿಂದ ಆರ್ಥಿಕ ಆದಾಯ ವೃದ್ಧಿಸಿಕೊಳ್ಳುವಂತೆ ತಿಳಿಸಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕುಂದರಗಿ ಅಡವಿಸಿದ್ಧೇಶ್ವರ ಮಠದ ಶ್ರೀ ಅಮರಸಿದ್ಧೇಶ್ವರ ಶ್ರೀಗಳು ವಹಿಸಿ ಆಶೀರ್ವಚನ ನೀಡಿದರು.
ದಿ.ಶಿವಾಪೂರ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಆತ್ಮೀಯವಾಗಿ ಸತ್ಕರಿಸಿದರು.
ವೇದಿಕೆಯ ಮೇಲೆ ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ, ಸಹಕಾರ ಸಂಘಗಳ ಸಹಾಯಕ ನಿಬಂಧಕ ಶ್ರೀಮತಿ ಶಾಹೀನ ಅಕ್ತರ, ವಿ ಕೆ ಜೋಶಿ, ನಿತೇಶ ಜಾಧವ, ರಮೇಶ ಕಬಾಡಗಿ, ಬಸಗೌಡ ಪಾಟೀಲ ಸೇರಿದಂತೆ ಇತರರು ಇದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

13 − nine =