Breaking News

ಅಟಲ್ ಜಿ ಸವಾಲುಗಳ ನಡುವೆಯೂ ದೇಶದ ಆರ್ಥಿಕತೆಗೆ ಸ್ಥಿರತೆಯನ್ನು ತಂದಿತ್ತರು- ಶಾಸಕ ರಮೇಶ ಜಾರಕಿಹೊಳಿ.!

Spread the love

ಅಟಲ್ ಜಿ ಸವಾಲುಗಳ ನಡುವೆಯೂ ದೇಶದ ಆರ್ಥಿಕತೆಗೆ ಸ್ಥಿರತೆಯನ್ನು ತಂದಿತ್ತರು- ಶಾಸಕ ರಮೇಶ ಜಾರಕಿಹೊಳಿ.!

 

ಗೋಕಾಕ: ಒಂಬತ್ತು ಬಾರಿ ಲೋಕಸಭೆ, ಎರಡು ಬಾರಿ ರಾಜ್ಯಸಭೆಯ ಸದಸ್ಯರಾಗಿದ್ದ ಅಟಲ್ ಜಿ ಅವರು ಪ್ರಧಾನಮಂತ್ರಿಯಾಗಿ ದೇಶವನ್ನು ಅಭಿವೃದ್ಧಿ ಪಥದಲ್ಲಿ ಯಶಸ್ವಿಯಾಗಿ ಮುನ್ನಡೆಸಿದ್ದರು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

 


ಅವರು, ರವಿವಾರದಂದು ನಗರದ ಶಾಸಕ ಕಛೇರಿಯಲ್ಲಿ ಭಾರತೀಯ ಜನತಾ ಪಾರ್ಟಿ ಗೋಕಾಕ ವಿಧಾನಸಭಾ ಕ್ಷೇತ್ರ ಹಾಗೂ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಳ ವತಿಯಿಂದ ಹಮ್ಮಿಕೊಂಡ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ೯೮ ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು. ಅವರ ಆಡಳಿತ ಅವಧಿಯಲ್ಲಿ ಬರಗಾಲ, ಚಂಡ ಮಾರುತ, ಭೂಕಂಪ, ಕಾರ್ಗಿಲ್ ಯುದ್ಧ, ಸಂಸತ್ ಭವನದ ಮೇಲಿನ ದಾಳಿ ಮುಂತಾದ ಹಲವು ದುರ್ಘಟನೆ, ಸವಾಲುಗಳ ನಡುವೆಯೂ ದೇಶದ ಆರ್ಥಿಕತೆಗೆ ಸ್ಥಿರತೆಯನ್ನು ತಂದಿತ್ತರು. ಇದರೊಂದಿಗೆ ವಿತ್ತೀಯ ಹೊಣೆಗಾರಿಕೆ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ಸರಕಾರಗಳ ಹಣಕಾಸು ನಿರ್ವಹಣೆಯಲ್ಲಿ ಶಿಸ್ತನ್ನು ತಂದರು. ಭಾರತದ ಪ್ರಮುಖ ಮಹಾನಗರಗಳನ್ನು ಸಂಪರ್ಕಿಸುವ ಸುವರ್ಣ ಚತುಷ್ಪಥ ಹೆದ್ದಾರಿಯ ಮೂಲಕ ದೇಶದ ಆರ್ಥಿಕ ಅಭಿವೃದ್ಧಿಗೆ ಹೊಸ ಆಯಾಮ ಕಲ್ಪಿಸಿದರು. ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯ ಮೂಲಕ ಹಳ್ಳಿಹಳ್ಳಿಗೆ ರಸ್ತೆ ಸೌಲಭ್ಯ ಕಲ್ಪಿಸಿದರು. ಆ ಮೂಲಕ ರಸ್ತೆ ಸಂಪರ್ಕ ಜಾಲವನ್ನು ಬಲಪಡಿಸಿದರು.
ದೂರಸಂಪರ್ಕ ಕ್ಷೇತ್ರದಲ್ಲಿಯೂ ಹೊಸ ಸುಧಾರಣೆಗಳನ್ನು ಮಾಡುವ ಮೂಲಕ ಜನರಿಗೆ ಇನ್ನಷ್ಟು ಹತ್ತಿರವಾದರು. ಸರ್ವ ಶಿಕ್ಷಣ ಅಭಿಯಾನ, ಶಾಲೆಗಳಿಗೆ ಮೂಲಸೌಕರ್ಯ ಒದಗಿಸುವ ಮಹತ್ವದ ಯೋಜನೆಯಾಗಿತ್ತು. ಅವರ ಜನ್ಮದಿನವನ್ನು ‘ಸುಶಾಸನ ದಿವಸ’ ಎಂದು ಆಚರಿಸುತ್ತಿರುವುದು ಅತ್ಯಂತ ಔಚಿತ್ಯಪೂರ್ಣವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣ್ಣಚ್ಯಾಳಿ, ನಗರಸಭೆ ಉಪಾಧ್ಯಕ್ಷ ಬಸವರಾಜ ಆರೆನ್ನವರರ ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮನ್ನವರ, ಮಾಜಿ ನಗರ ಘಟಕ ಅಧ್ಯಕ್ಷ ಶಶಿಧರ ದೇಮಶೆಟ್ಟಿ, ಡಾ.ಸೂರ್ಯವಂಶಿ, ಹಿರಿಯ ನಗರಸಭೆ ಸದಸ್ಯರಾದ ಕುತುಬುದ್ದೀನ ಗೋಕಾಕ, ಅಬ್ಬಾಸ ದೇಸಾಯಿ, ಪ್ರಮೋದ ಜೋಶಿ, ಜಗದೀಶ್ ಸದರಜೋಶಿ, ಶ್ರೀರಂಗ ನಾಯಿಕ, ಲಕ್ಷ್ಮೀಕಾಂತ ಎತ್ತಿನಮನಿ, ಸುರೇಶ ಸನದಿ, ಶಫೀ ಜಮಾದಾರ, ಪ್ರಕಾಶ ಮುರಾರಿ, ದುರ್ಗಪ್ಪ ಶಾಸ್ತ್ರೀಗೋಲ್ಲರ, ಲಕ್ಷ್ಮಣ ಖಡಕಬಾಂವಿ, ಬಸವರಾಜ ಮಾಳಗಿ, ಅಬ್ದುಲ್ ಸತ್ತಾರ ಶಾಬಾಶಖಾನ ಶ್ರೀಮತಿ ಶ್ರೀದೇವಿ ತಡಕೋಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

20 + 5 =