Breaking News

ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೋಳುವದರಿಂದ ಮನಸ್ಸು ಉಲ್ಲಾಸದೊಂದಿಗೆ ಆರೋಗ್ಯವು ವೃದ್ಧಿಯಾಗುತ್ತದೆ.- ಜಿಪಂ ಮಾಜಿ ಸದಸ್ಯ ಟಿ.ಆರ್.ಕಾಗಲ್.!

Spread the love

ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೋಳುವದರಿಂದ ಮನಸ್ಸು ಉಲ್ಲಾಸದೊಂದಿಗೆ ಆರೋಗ್ಯವು ವೃದ್ಧಿಯಾಗುತ್ತದೆ.- ಜಿಪಂ ಮಾಜಿ ಸದಸ್ಯ ಟಿ.ಆರ್.ಕಾಗಲ್.!

ಗೋಕಾಕ: ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೋಳುವದರಿಂದ ಮನಸ್ಸು ಉಲ್ಲಾಸದೊಂದಿಗೆ ಆರೋಗ್ಯವು ವೃದ್ಧಿಯಾಗುತ್ತದೆ ಎಂದು ಜಿಪಂ ಮಾಜಿ ಸದಸ್ಯ ಟಿ.ಆರ್.ಕಾಗಲ್ ಹೇಳಿದರು.
ಶನಿವಾರದಂದು ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕು ಪಂಚಾಯತ್ ಗೋಕಾಕ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲ ವೃಂದದ ಸಂಘಗಳ ಸಂಯುಕ್ತಾಶ್ರಯದಲ್ಲಿ ೨೦೨೨-೨೩ನೇ ಸಾಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಆರೋಗ್ಯ ತಪಾಸಣಾ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗದ ಸರಕಾರದ ಸೌಲಭ್ಯಗಳನ್ನು ತಲುಪಿಸಲು ಶ್ರಮಿಸುತ್ತಿರುವ ನೌಕರರು ಹಾಗೂ ಸಿಬ್ಬಂದಿಗಳಿಗೆ ಈ ಕ್ರೀಡೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಒತ್ತಡ ನಿವಾರಿಸುವಲ್ಲಿ ಸಹಕಾರಿಯಾಗುತ್ತವೆ. ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚು ಹೆಚ್ಚು ಪಾಲ್ಗೋಳ್ಳುದರೊಂದಿಗೆ ಸದೃಢ ಆರೋಗ್ಯವಂತರಾಗಿ ಜನತೆಗೆ ಹೆಚ್ಚಿನ ಸೇವೆಯನ್ನು ಸಲ್ಲಿಸಿ. ಸರಕಾರಿ ಯೋಜನೆಗಳು ಯಶಸ್ಸುಯಾಗಲು ನಿಮ್ಮೆಲ್ಲರ ಪಾತ್ರ ಮಹತ್ವದಾಗಿದ್ದು, ಅದನ್ನು ನಿಭಾಯಿಸಿ ಗ್ರಾಮೀಣ ಭಾಗದ ಜನರ ಕನಸುನ್ನು ನನಸಾಗಿಸಿ ಈ ನಿಮ್ಮ ಕಾರ್ಯಕ್ಕೆ ಶಾಸಕರ ಸಹಕಾರ ಸದಾ ನಿಮಗೆ ಇದೆ ಎಂದು ಹೇಳಿದರು.
ಕ್ರೀಡಾಕೂಟವನ್ನು ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಉದ್ಘಾಟಿಸಿದರು.
ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಮತ್ತು ಕುಂದರಗಿ ಅಡವಿಸಿದ್ದೇಶ್ವರ ಮಠದ ಶ್ರೀ ಅಮರಸಿದ್ದೇಶ್ವರ ಮಹಾಸ್ವಾಮಿಗಳು ವಹಿಸಿ ಆರ್ಶಿವರ್ಚನ ನೀಡಿದರು.
ವೇದಿಕೆಯಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮುರಳೀಧರ ದೇಶಪಾಂಡೆ, ಪೌರಾಯುಕ್ತ ಶಿವಾನಂದ ಹಿರೇಮಠ, ಮಡೆಪ್ಪ ತೋಳಿನವರ, ಬಿಇಒ ಜಿ.ಬಿ.ಬಳಗಾರ, ಡಾ.ರವೀಂದ್ರ ಅಂಟಿನ, ಡಾ.ಎಂ.ಎಸ್.ಕೊಪ್ಪದ, ದೈಹಿಕ ದೈಹಿಕ ಶಿಕ್ಷಣಾಧಿಕಾರಿ ಕೆ.ಎಲ್.ತೋರಣಗಟ್ಟಿ, ಐ.ಎಂ.ದಫೇದಾರ, ಸಂಘಟಕರಾದ ಸುಧೀರ್ ಜಮಖಂಡಿ, ವಿನಾಯಕ ಮಾಳಿ, ವೀರಭದ್ರ ಗುಂಡಿ ಯಲ್ಲಪ್ಪ ಮೂಡಲಗಿ, ಸುನೀಲ್ ನಾಯಿಕ, ಸತೀಶ ಸುಣಗಾರ, ಉಮೇಶ್ ಮನಗೂಳಿ, ಶ್ರೀಮತಿ ಸಾಯಿಶ್ವರಿ ಮೆಣಸಿನಕಾಯಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು


Spread the love

About Yuva Bharatha

Check Also

ಅಂಜಲಿ ಹತ್ಯೆ ಪ್ರಕರಣ ಖಂಡಿಸಿ ಆರೋಪಿಗೆ ಕಠೀಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಗೋಕಾಕನಲ್ಲಿ ಪ್ರತಿಭಟನೆ.!

Spread the loveಅಂಜಲಿ ಹತ್ಯೆ ಪ್ರಕರಣ ಖಂಡಿಸಿ ಆರೋಪಿಗೆ ಕಠೀಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಗೋಕಾಕನಲ್ಲಿ ಪ್ರತಿಭಟನೆ.! ಗೋಕಾಕ: ಹುಬ್ಬಳ್ಳಿಯಲ್ಲಿ …

Leave a Reply

Your email address will not be published. Required fields are marked *

8 − three =