Breaking News

ಶಾಸಕರಾದ ರಮೇಶ ಜಾರಕಿಹೊಳಿ ಅವರು ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಅವುಗಳ ಸದುಪಯೋಗಪಡಿಸಿಕೊಳ್ಳಿ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!

Spread the love

ಶಾಸಕರಾದ ರಮೇಶ ಜಾರಕಿಹೊಳಿ ಅವರು ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಅವುಗಳ ಸದುಪಯೋಗಪಡಿಸಿಕೊಳ್ಳಿ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!


ಗೋಕಾಕ: ನಗರದ ಜನತೆಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಶಾಸಕರಾದ ರಮೇಶ ಜಾರಕಿಹೊಳಿ ಅವರು ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು ಅವುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು.
ಅವರು, ಬುಧವಾರದಂದು ನಗರದ ವಾರ್ಡ ನಂ೧೧ರ ಶ್ರೀ ಬಾವಿಕರೇಮ್ಮ ದೇವಸ್ಥಾನದ ಹತ್ತಿರ ನಗರಸಭೆಯಿಂದ ೧.ಕೋಟಿ ೨೦ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಒಳಚರಂಡಿ ಹಾಗೂ ರಸ್ತೆ ನಿರ್ಮಾಣ ಕಾಮಗಾರಿಯ ಪೂಜಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.
ಬೆಳೆಯುತ್ತಿರುವ ನಗರದ ಜನತೆಗೆ ಅನುಗುಣವಾಗಿ ದೂರದೃಷ್ಠಿ ಯೋಜನೆಗಳನ್ನು ರೂಪಿಸಿ ಅವುಗಳನ್ನು ಕಾರ್ಯಗತಗೊಳಿಸಲು ಶಾಸಕರು ಶ್ರಮಿಸುತ್ತಿದ್ದಾರೆ. ಶುದ್ಧಕುಡಿಯುವ ನೀರು, ರಸ್ತೆಗಳು, ಒಳಚರಂಡಿಗಳು, ಉದ್ಯಾನವನಗಳು, ವಿದ್ಯುತ್ ಸೇರಿದಂತೆ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸುತ್ತಿದ್ದಾರೆ. ಅವರ ಕಾರ್ಯಗಳಿಗೆ ಜನತೆ ಬೆಂಬಲಿಸಿ ಅವರ ಕೈ ಬಲಪಡಿಸುವಂತೆ ಕೋರಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಉಪಾಧ್ಯಕ್ಷ ಬಸವರಾಜ ಆರೇನ್ನವರ, ಸ್ಥಾಯಿ ಸಮಿತಿ ಚೇರಮನ ಸಿದ್ದಪ್ಪ ಹುಚ್ಚರಾಮಪ್ಪಗೋಳ, ಸದಸ್ಯರಾದ ಶ್ರೀಶೈಲ ಯಕ್ಕುಂಡಿ, ಸಂತೋಷ ಮಂತ್ರನ್ನವರ, ಮುಖಂಡರಾದ ದುರ್ಗಪ್ಪ ಶಾಸ್ತಿçಗೊಲ್ಲರ, ಕ್ಷೇತ್ರ ಶಿP್ಪ್ಷಣಾಧಿಕಾರಿ ಜಿ ಬಿ ಬಳಗಾರ, ಎಸ್ ಆರ್ ನಲವಡೆ, ಬಿ ಬಿ ಕೊಪ್ಪದ, ಆರ್ ಡಿ ಖತೀಬ, ಉದಯ ಹುಕ್ಕೇರಿ, ಎಸ್ ಆರ್ ಬೊಂಗಾಳೆ, ಪವನ ಮಹಾಲಿಂಗಪೂರ, ಜ್ಯೋತಿಭಾ ಚಿಕ್ಕೊರ್ಡೆ, ಬಂಡು ಜರತಾರಕರ, ಸಂದೀಪ ಆನಗೋಳ ಸೇರಿದಂತೆ ಅನೇಕರು ಇದ್ದರು.


Spread the love

About Yuva Bharatha

Check Also

ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ ಪರಮ ಪೀಠಾಚಾರ್ಯರಾದ ಶ್ರೀ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರರ ಸಾನ್ನಿಧ್ಯದಲ್ಲಿ ಜಾತ್ರಾ ಮಹೋತ್ಸವ

Spread the loveಸಾಮಾಜಿಕ ಸೌಹಾರ್ದತೆ ಸಾರುವ ಶ್ರೀ ಉಜ್ಜಯಿನಿ ಮರುಳಸಿದ್ಧೇಶ್ವರ ಜಾತ್ರಾ ಮಹೋತ್ಸವ.! ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ …

Leave a Reply

Your email address will not be published. Required fields are marked *

5 × 2 =