ಗೋಕಾಕ ಮತಕ್ಷೇತ್ರದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ-ಶಾಸಕ ರಮೇಶ ಜಾರಕಿಹೊಳಿ.!
ಗೋಕಾಕ: ಗೋಕಾಕ ಮತಕ್ಷೇತ್ರದ ವಿವಿಧ ಸರಕಾರಿ ಶಾಲೆಗಳಿಗೆ ಹೆಚ್ಚುವರಿ ೪೧ ಶಾಲಾ ಕೋಠಡಿ ನಿರ್ಮಿಸಲು ೪.೫೧ ಕೋಟಿ ರೂಪಾಯಿ ಅನುದಾನ ಸರಕಾರದಿಂದ ಬಿಡುಗಡೆಯಾಗಿದ್ದು ಶೀಘ್ರವೇ ಕಾಮಗಾರಿ ಕೈಗೆತ್ತಿಕೊಂಡು ಸರಕಾರಿ ಶಾಲೆಗಳ ಅಭಿವೃದ್ಧಿ ಪಡಿಸಲಾಗುವದು ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದರು.
ಅವರು, ತಾಲೂಕಿನ ಅಂಕಲಗಿ ಗ್ರಾಮದ ಸರಕಾರಿ ಪ್ರೌಢಶಾಲೆಯ ಹೆಚ್ಚುವರಿ ಶಾಲಾ ಕೋಠಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಶೈಕ್ಷಣಿಕ ಪ್ರಗತಿಯಿಂದ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ. ಹೀಗಾಗಿ ಗೋಕಾಕ ಮತಕ್ಷೇತ್ರದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿP್ಪ್ಷಣಾಧಿಕಾರಿ ಜಿ ಬಿ ಬಳಗಾರ, ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಗೌಡರ, ಅಕೀಲ ಕೊತವಾಲ, ಹುಸೇನಸಾಬ ದೇಸಾಯಿ, ಮಹ್ಮದಖಾನ ಗಣಾಚಾರಿ, ಪಾಪುಲ್ ದೇಸಾಯಿ, ಮಲ್ಲೇಶ ನಭಾಪೂರೆ, ಬಸವರಾಜ ಪಟ್ಟಣಶೆಟ್ಟಿ, ರೇಹಮಾನ ಹವಾಲ್ದಾರ, ಅನೀಸ ದೇಸಾಯಿ, ನಿಸಾರಹ್ಮದ ಯರಗಟ್ಟಿ ಸೇರಿದಂತೆ ಅಂಕಲಗಿ ಗ್ರಾಮದ ಹಿರಿಯರು, ಗ್ರಾಮಸ್ಥರು ಉಪಸ್ಥಿತರಿದ್ದರು.