Breaking News

ರಾಜ್ಯದಲ್ಲೂ ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ-ಲಕ್ಷ್ಮಣ ತಪಸಿ.!

Spread the love

  1. ರಾಜ್ಯದಲ್ಲೂ ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ-ಲಕ್ಷ್ಮಣ ತಪಸಿ.!


ಗೋಕಾಕ: ಈಶಾನ್ಯ ರಾಜ್ಯಗಳಾದ ತ್ರಿಪುರಾ, ಮಣಿಪುರ ಮತ್ತು ನಾಗಾಲ್ಯಾಂಡಗಳಿಗೆ ಬಿಜೆಪಿ ಪಕ್ಷ ಬಹುಮತಗಳಿಂದ ಅಧಿಕಾರಕ್ಕೆ ಬಂದಿದ್ದು ಅದರಂತೆಯೇ ರಾಜ್ಯದಲ್ಲೂ ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಓಬಿಸಿ ಮೋರ್ಚಾ ರಾಷ್ಟಿçÃಯ ಕರ‍್ಯಕಾರಿಣಿ ಸದಸ್ಯ ಲಕ್ಷ್ಮಣ ತಪಸಿ ಹೇಳಿದರು.
ಅವರು, ಗುರುವಾರದಂದು ಸಂಜೆ ನಗರದ ಬಸವೇಶ್ವರ ವೃತ್ತದಲ್ಲಿ ಮೂರು ರಾಜ್ಯಗಳಿಗೆ ಬಿಜೆಪಿ ಅಧಿಕಾರ ಗೆಲುವು ಹಾಗೂ ತ್ರಿಪುರಾದಲ್ಲಿ ಬಿಜೆಪಿ ಸಿಎಮ್ ಪ್ರಮಾಣ ವಚನ ಸ್ವೀಕರಿಸಿದ ಹಿನ್ನಲೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿ ಮಾತನಾಡಿದರು.
ರಾಜ್ಯದಲ್ಲಿ ಬಿಜೆಪಿ ಗಾಳಿ ಬೀಸುತ್ತಿದೆ. ರಾಜ್ಯ ಹಾಗೂ ಕೇಂದ್ರ ಸರಕಾರದ ಅಭಿವೃದ್ಧಿಪರ ಯೋಜನೆಗಳು ಜನರ ಮನೆ-ಮನಗಳಿಗೆ ತಲುಪಿವೆ ಹೀಗಾಗಿ ರಾಜ್ಯದಲ್ಲಿ ೨೦೨೩ರಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವದು ನಿಷ್ಚಿತವೆಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಸಂಭ್ರಮಾಚರಣೆಯಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ರೈತ ಮೋರ್ಚಾ ಅಧ್ಯಕ್ಷ ಸುರೇಶ ಪತ್ತಾರ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಕೊಲ್ಹಾರ, ಓಬಿಸಿ ಮೋರ್ಚಾ ಅಧ್ಯಕ್ಷ ಲಕ್ಷö್ಮಣ ಖಡಕಬಾವಿ, ಮಹಿಳಾ ಮೋರ್ಚಾ ಅಧ್ಯಕ್ಷೆ ರಾಜೇಶ್ವರಿ ಒಡೆಯರ, ಯುವ ಮೋರ್ಚಾ ಅಧ್ಯಕ್ಷ ಮಂಜುನಾಥ ಪ್ರಭುನಟ್ಟಿ, ಎಸ್‌ಸಿ ಮೋರ್ಚಾ ಅಧ್ಯಕ್ಷ ಮಂಜುನಾಥ ಮಾವರಕರ, ಎಸ್‌ಟಿ ಮೋರ್ಚಾ ಅಧ್ಯಕ್ಷ ರವಿ ಮಡ್ಡೆಪ್ಪನವರ, ವಿಶಾಲ ಪಟಗುಂದಿ, ಶ್ರೀದೇವಿ ತಡಕೋಡ, ರಂಗಪ್ಪ ನಂದಿ, ಪ್ರಕಾಶ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About Yuva Bharatha

Check Also

ಮೋದಿಯವರ ಹುಟ್ಟು ಹಬ್ಬದ ನಿಮಿತ್ಯ ಹಮ್ಮಿಕೊಂಡ ಬೃಹತ್ ರಕ್ತದಾನ ಶಿಭಿರದಲ್ಲಿ ಯುವನಾಯಕ ಅಮರನಾಥ ಜಾರಕಿಹೊಳಿ ಅವರಿಂದ ರಕ್ತದಾನ.!

Spread the loveಮೋದಿಯವರ ಹುಟ್ಟು ಹಬ್ಬದ ನಿಮಿತ್ಯ ಹಮ್ಮಿಕೊಂಡ ಬೃಹತ್ ರಕ್ತದಾನ ಶಿಭಿರದಲ್ಲಿ ಯುವನಾಯಕ ಅಮರನಾಥ ಜಾರಕಿಹೊಳಿ ಅವರಿಂದ ರಕ್ತದಾನ.! …

Leave a Reply

Your email address will not be published. Required fields are marked *

13 + nineteen =