Breaking News

ಅಂಬೇಡ್ಕರ್ ಪವಿತ್ರ ಗ್ರಂಥವಾದ ಸಂವಿಧಾನದ ಹಿಂದಿನ ದೊಡ್ಡ ಶಕ್ತಿಯಾಗಿದ್ದಾರೆ-ರಮೇಶ ಜಾರಕಿಹೊಳಿ.!

Spread the love

ಅಂಬೇಡ್ಕರ್ ಪವಿತ್ರ ಗ್ರಂಥವಾದ ಸಂವಿಧಾನದ ಹಿಂದಿನ ದೊಡ್ಡ ಶಕ್ತಿಯಾಗಿದ್ದಾರೆ-ರಮೇಶ ಜಾರಕಿಹೊಳಿ.!

ಗೋಕಾಕ: ಡಾ. ಬಿ. ಆರ್. ಅಂಬೇಡ್ಕರ್ ಭಾರತ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರು. ನಮ್ಮ ದೇಶದ ಪ್ರತಿಯೊಬ್ಬರ ಪಾಲಿನ ಪವಿತ್ರ ಗ್ರಂಥವಾದ ಸಂವಿಧಾನದ ಹಿಂದಿನ ದೊಡ್ಡ ಶಕ್ತಿಯಾಗಿದ್ದಾರೆ ಎಂದು ಮಾಜಿ ಸಚಿವ ಹಾಗು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅವರು, ನಗರದ ತಮ್ಮ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದಿAದ ಹಮ್ಮಿಕೊಂಡ ಡಾ. ಬಿ. ಆರ್. ಅಂಬೇಡ್ಕರ್ ಅವರ ಜನ್ಮಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.
ಸಮಾನತೆ, ಪ್ರಗತಿಯ ಕನಸು ಕಂಡ ಮೇರು ನಾಯಕ ನಮ್ಮ ಹೆಮ್ಮೆಯ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಬದುಕು ಎಲ್ಲರಿಗೂ ಸ್ಫೂರ್ತಿ. ಇವರ ಆದರ್ಶ ಎಲ್ಲರ ಜೀವನಕ್ಕೆ ದಾರಿ. ಛಲ ಸಾಧನೆಯ ಮೂಲಕ ಭವ್ಯ ಭಾರತದ ಕನಸು ಕಾಣುತ್ತಾ ಕಷ್ಟದ ನಡುವೆಯೂ ಬೆಳೆದ ಅಂಬೇಡ್ಕರ್ ಅವರು ನಮ್ಮ ದೇಶದ ಅದ್ಭುತ ನಾಯಕರಲ್ಲಿ ಒಬ್ಬರಾಗಿ ರೂಪುಗೊಂಡರು. ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಎಲ್ಲರಿಗೂ ಅಂಬೇಡ್ಕರ್ ಪ್ರೇರಣೆಯಾಗಿದ್ದಾರೆ ಎಂದರು.
ಎಲ್ಲರನ್ನು ಸಮಾನವಾಗಿ ಕಾಣುವ ಸಮಾಜದ ನಿರ್ಮಾಣಕ್ಕಾಗಿ ಅವಿರತವಾಗಿ ಶ್ರಮಿಸಿದವರು ಅಂಬೇಡ್ಕರ್. ಶೋಷಿತರು, ಕಾರ್ಮಿಕರು, ಮಹಿಳೆಯರ ಉನ್ನತಿಗೆ ಹೋರಾಡಿ, ಅಸಹಾಯಕರ ಧ್ವನಿಯಾಗಿ, ಸಮಾನತೆಯ ಕನಸು ಕಂಡ ಮಹಾನ್ ನಾಯಕ ಡಾ. ಬಿ. ಆರ್. ಅಂಬೇಡ್ಕರ್ ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು.
ಕಾರ್ಯಕ್ರಮದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಮಡ್ಡೆಪ್ಪ ತೋಳಿನವರ, ಲಕ್ಕಪ್ಪ ತಹಶೀಲದಾರ, ರಾಜೇಶ್ವರಿ ಒಡೆಯರ, ಮಂಜುನಾಥ ಮಾವರಕರ, ಮಲ್ಲಿಕಜಾನ ತಳವಾರ, ಸುರೇಶ ಪತ್ತಾರ, ಶ್ರೀರಂಗ ನಾಯ್ಕ, ಕಿರಣ ಡಮಾಮಗರ, ಪವನ ಮಹಾಲಿಂಗಪೂರ, ಬಸವರಾಜ ಮೇತ್ರಿ, ಗೋವಿಂದ ಕಳ್ಳಿಮನಿ, ರವಿ ಕಡಕೋಳ, ಶ್ರೀದೇವಿ ತಡಕೋಡ, ರಮೇಶ ಭಂಡಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಇದ್ದರು.


Spread the love

About Yuva Bharatha

Check Also

ಗೋಕಾಕ ಮತಕ್ಷೇತ್ರದಲ್ಲಿ ಝಣಝಣ ಕಾಂಚಾಣ ಸದ್ದು, ಕಾಂಗ್ರೇಸ್ ಅಭ್ಯರ್ಥಿಯಿಂದ ಮತದಾರರಿಗೆ ಹಣದ ಆಮಿಷ.!

Spread the loveಗೋಕಾಕನಲ್ಲಿ ಪ್ರತಿ ಮನೆಗೆ 1000, ಅಲ್ಪಸಂಖ್ಯಾತರಿಗೆ 500 ಕಾಂಗ್ರೇಸ್ ಕಾಂಚಾಣ ಸದ್ದು.! ಗೋಕಾಕ: ಲೋಕಸಭಾ ಚುನಾವಣೆ ಇನ್ನು …

Leave a Reply

Your email address will not be published. Required fields are marked *

9 + fourteen =