Breaking News

“ಗೋಕಾಕ ಡೆವಲಪರ್ಸ” ಸಮಾಜ ಮುಖಿಯಾಗಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ- ಆನಂದ ಹೆಗಡೆ!

Spread the love

“ಗೋಕಾಕ ಡೆವಲಪರ್ಸ” ಸಮಾಜ ಮುಖಿಯಾಗಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ- ಆನಂದ ಹೆಗಡೆ!

ಗೋಕಾಕ: ಶಿಕ್ಷಣ ಪ್ರತಿಯೊಬ್ಬರ ಮೂಲಭೂತ ಹಕ್ಕು ಪಾಲಕರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಅವರನ್ನು ಒಳ್ಳೆಯ ಪ್ರಜೆಗಳನ್ನಾಗಿ ಮಾಡಬೇಕು ಎಂದು ಗೋಕಾಕ ವಲಯ ಅರಣ್ಯ ಅಧಿಕಾರ ಆನಂದ ಹೆಗಡೆ ಹೇಳಿದರು.

ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಪರಿಕರಗಳನ್ನು ವಿತರಿಸುತ್ತಿರುವು.

78ನೇ ಸ್ವಾತಂತ್ರೋತ್ಸವದ ಅಂಗವಾಗಿ ನಗರದಲ್ಲಿ ಇಲ್ಲಿನ ಗೋಕಾಕ ಡೆವಲಪರ್ಸ ವತಿಯಿಂದ ಸರಕಾರಿ ಶಾಲೆಗಳ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಬ್ಯಾಗ್, ಕಂಪಾಸ ಬಾಕ್ಸ್, ಪೆನ್, ಬುಕ್ ಶಾಲಾ ಪರಿಕರ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಸ್ತುತ ವಿದ್ಯಮಾನದಲ್ಲಿ ಶಿಕ್ಷಣ ಅತ್ಯಂತ ಮಹತ್ತರ ಪಾತ್ರವಹಿಸಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ನಾವು ಶಕ್ತಿಮಿರಿ ಪ್ರಯತ್ನಿಸಬೇಕು. ಪ್ರತಿಭಾವಂತ ಮಕ್ಕಳನ್ನು ಗುರುತಿಸಲು ಸಮಾಜದಲ್ಲಿ ಹಲವು ಸಂಘಟನೆಗಳು ಮುಂಚೂಣಿಯಲ್ಲಿದ್ದು ಕಾರ್ಯ ನಿರ್ವಹಿಸುತ್ತಿವೆ ಅದರಲ್ಲಿ ಗೋಕಾಕ ಡೆವಲಪರ್ಸ ಕೂಡಾ ಒಂದು. ಜಾವೇದ ಗೋಕಾಕ ಅವರ ನೇತೃತ್ವದಲ್ಲಿ ಗೋಕಾಕ ಡೆವಲಪರ್ಸ ನವರು ಸಹ ಸಮಾಜ ಮುಖಿಯಾಗಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದರು. ಇಂತಹ ಸಮಾಜಮುಖಿ ಕಾರ್ಯಗಳು ಇವರಿಂದ ಹೆಚ್ಚು, ಹೆಚ್ಚಾಗಿ ನಡೆಯಲ್ಲಿ ಎಂದು ಹಾರೈಸಿದ ಅವರು ಕೊಡುವ ಕೈಗಳಿಗಿಂತ ಪಡೆಯು ಕೈ ಶ್ರೇಷ್ಠ , ಇಂದು ಪಡೆಯುವ ಕೈ ನಾಳೆ ಕೊಡುವ ಕೈಯಾಗಲಿದ್ದು, ಶಾಲಾ ಪರಿಕರಗಳನ್ನು ಪಡೆದ ಎಲ್ಲರೂ ಇದರ ಸದುಪಯೋಗ ಪಡೆದುಕೊಂಡು ವಿದ್ಯಾವಂತರಾಗಬೇಕು ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಪ್ರಾಚಾರ್ಯ ಎಂ.ಬಿ.ಬಳಗಾರ ಮಾತನಾಡಿ ಸಾಮಾಜಿಕ ಸಮಾನತೆ ತರುವಲ್ಲಿ ಶಿಕ್ಷಣ ಮಹತ್ತರ ಪಾತ್ರ ವಹಿಸಿದೆ.ವಿದ್ಯಾರ್ಥಿಗಳಿಗೆ ಓದುವ ಹವ್ಯಾಸ ಇರಬೇಕು. ಕಠಿಣ ಪರಿಶ್ರಮದಿಂದ ಯಶಸ್ಸು ಸಾಧ್ಯ. ಉನ್ನತ ಶಿಕ್ಷಣ ಪಡೆದುಕೊಳ್ಳುವತ್ತ ವಿಶೇಷ ತಯಾರಿ ಮಾಡಿಕೊಳ್ಳಬೇಕು. ಗ್ರಾಮೀಣ ಭಾಗದ ವಿದ್ಯಾರ್ಥಿಗಳತ್ತ ಶಿಕ್ಷಕರು ವಿಶೇಷ ಗಮನ ಹರಿಸಬೇಕು. ರಾಷ್ಟ್ರಪ್ರೇಮ, ಸಾಮಾಜಿಕ ಸಮಾನತೆ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು’ ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಸಾನಿಧ್ಯವನ್ನು ಕಪರಟ್ಟಿ -ಕಳ್ಳಿಗುದ್ದಿಯ ಶ್ರೀ ಬಸವರಾಜ ಸ್ವಾಮಿಗಳು ವಹಿಸಿ ಆರ್ಶಿವಚನ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಂಜುಮನ್-ಏ-ಇಸ್ಲಾA ಕಮಿಟಿಯ ಅಧ್ಯಕ್ಷ ಜಾವೇದ ಗೋಕಾಕ ವಹಿಸಿದ್ದರು.ಈ ಸಂದರ್ಭದಲ್ಲಿ ಹಿರಿಯ ನಗರಸಭೆ ಸದಸ್ಯ ಕುತುಬುದ್ದೀನ ಗೋಕಾಕ, ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯ ಅಧಿಕಾರಿ ಇಮ್ರಾನ್ ಮುಲ್ಲಾ, ಎಸ್.ಕೆ. ಮಠದ, ಸಾದಿಕ ಹಲ್ಯಾಳ, ಇಸ್ಮಾಯಿಲ್ ಗೋಕಾಕ, ಸಲೀಂ ಗೋಕಾಕ, ಯೂಸುಫ್ ಗೋಕಾಕ ಉಪಸ್ಥಿತರಿದ್ದರು

 


Spread the love

About Yuva Bharatha

Check Also

ಮೋದಿಯವರ ಹುಟ್ಟು ಹಬ್ಬದ ನಿಮಿತ್ಯ ಹಮ್ಮಿಕೊಂಡ ಬೃಹತ್ ರಕ್ತದಾನ ಶಿಭಿರದಲ್ಲಿ ಯುವನಾಯಕ ಅಮರನಾಥ ಜಾರಕಿಹೊಳಿ ಅವರಿಂದ ರಕ್ತದಾನ.!

Spread the loveಮೋದಿಯವರ ಹುಟ್ಟು ಹಬ್ಬದ ನಿಮಿತ್ಯ ಹಮ್ಮಿಕೊಂಡ ಬೃಹತ್ ರಕ್ತದಾನ ಶಿಭಿರದಲ್ಲಿ ಯುವನಾಯಕ ಅಮರನಾಥ ಜಾರಕಿಹೊಳಿ ಅವರಿಂದ ರಕ್ತದಾನ.! …

Leave a Reply

Your email address will not be published. Required fields are marked *

18 − 5 =