Breaking News

ಗೋಕಾಕ ಮತಕ್ಷೇತ್ರದಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗಳಿಸಲು ಶ್ರಮಿಸಿ-ಭೀಮಶಿ ಭರಮನ್ನವರ.!

Spread the love

ಗೋಕಾಕ ಮತಕ್ಷೇತ್ರದಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗಳಿಸಲು ಶ್ರಮಿಸಿ-ಭೀಮಶಿ ಭರಮನ್ನವರ.!


ಗೋಕಾಕ: ಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರವನ್ನು ಹಿಡಿಯಬೇಕಾದರೆ, ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಬೇಕು. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಸಂಘಟಿತ ಪ್ರಯತ್ನ ನಡೆಸಬೇಕು ಎಂದು ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ ಹೇಳಿದರು.
ಅವರು, ರವಿವಾರದಂದು ನಗರದ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡ ಬಿಜೆಪಿ ನಗರ ಮತ್ತು ಗ್ರಾಮೀಣ ಯುವ ಮೋರ್ಚಾ ಕಾರ್ಯಕಾರಣಿ ಸಭೆಯಲ್ಲಿ ಭಾರತಾಂಭೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಉದ್ಘಾಟಿಸಿ ಮಾತನಾಡಿ, ಸ್ಥಳೀಯ ಶಾಸಕರ ಮಾರ್ಗದರ್ಶನದಲ್ಲಿ ಯುವ ಮೋರ್ಚಾ ಕಾರ್ಯಕರ್ತರು ಗೋಕಾಕ ಮತಕ್ಷೇತ್ರದಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗಳಿಸಲು ಶ್ರಮಿಸುವಂತೆ ಕರೆ ನೀಡಿದರು.
ಯುವ ಮೋರ್ಚಾ ಜಿಲ್ಲಾಧ್ಯಕ್ಷ ಬಸವರಾಜ ನೇಸರಗಿ ಮಾತನಾಡಿ, ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರಕಾರದ ಸಾಧನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ಮುಂದಾಗಬೇಕು. ಆ ಮೂಲಕ ಜನರಲ್ಲಿ ಪಕ್ಷದ ಬಗ್ಗೆ ಜಾಗೃತಿ ಮೂಡಿಸಿ. ಮುಂಬರುವ ತಾಪಂ ಮತ್ತು ಜಿಪಂ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಅತಿಹೆಚ್ಚು ಮತಗಳ ಅಂತರದಲ್ಲಿ ಗೆಲುವು ಸಾಧಿಸಲು ಕಾರ್ಯಪ್ರವತ್ತರಾಗಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕರ ಆಪ್ತ ಸಹಾಯಕರಾದ ಭೀಮನಗೌಡ ಪೋಲಿಸಗೌಡ್ರ, ಸುರೇಶ ಸನದಿ, ಯುವ ಮೋರ್ಚಾ ಅಧ್ಯಕ್ಷರುಗಳಾದ ಮಂಜುನಾಥ ಪ್ರಭುನಟ್ಟಿ, ಆನಂದ ಅತ್ತುಗೋಳ, ಪ್ರಧಾನ ಕಾರ್ಯದರ್ಶಿಗಳಾದ ರಮೇಶ ಬಂಢಿ, ವಿರೇಂದ್ರ ಎಕ್ಕೇರಿಮಠ, ಅಶೋಕ ಸನ್ನಸಟ್ಟಿ ಹಾಗೂ ಸುನೀಲ ಮಡ್ಡಿಮನಿ, ಚೇತನ ಪಾಟೀಲ, ಸುರೇಶ ಪಂಗನ್ನವರ, ರಾಜು ದಾಸಗೋಳ, ಅಜ್ಜು ದೊಡ್ಡಬಸನ್ನವರ, ಸೂರಜ ಗೊಮಟೆ, ಗುರುರಾಜ ಶಾಸ್ತಿçಗೊಲ್ಲರ, ವಿಶ್ವನಾಥ ಜೋಶಿ ಸೇರಿದಂತೆ ಇತರರು ಇದ್ದರು.


Spread the love

About Yuva Bharatha

Check Also

ಮೋದಿಯವರ ಹುಟ್ಟು ಹಬ್ಬದ ನಿಮಿತ್ಯ ಹಮ್ಮಿಕೊಂಡ ಬೃಹತ್ ರಕ್ತದಾನ ಶಿಭಿರದಲ್ಲಿ ಯುವನಾಯಕ ಅಮರನಾಥ ಜಾರಕಿಹೊಳಿ ಅವರಿಂದ ರಕ್ತದಾನ.!

Spread the loveಮೋದಿಯವರ ಹುಟ್ಟು ಹಬ್ಬದ ನಿಮಿತ್ಯ ಹಮ್ಮಿಕೊಂಡ ಬೃಹತ್ ರಕ್ತದಾನ ಶಿಭಿರದಲ್ಲಿ ಯುವನಾಯಕ ಅಮರನಾಥ ಜಾರಕಿಹೊಳಿ ಅವರಿಂದ ರಕ್ತದಾನ.! …

Leave a Reply

Your email address will not be published. Required fields are marked *

1 × 5 =