ಇಂದಿನ ಸ್ಫರ್ಧಾತ್ಮಕ ಯುಗದಲ್ಲಿ ಶಿಕ್ಷಣ ಮಹತ್ವದ ಪಾತ್ರವಹಿಸುತ್ತಿದೆ.-ಶಾಸಕ ರಮೇಶ ಜಾರಕಿಹೊಳಿ.!
ಗೋಕಾಕ: ಶ್ರಮಜೀವಿಗಳಾದ ಕಾರ್ಮಿಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ ಅವರ ಭವಿಷ್ಯವನ್ನು ಉಜ್ವಲಗೊಳಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅವರು, ಸೋಮವಾರದಂದು ನಗರದ ತಮ್ಮ ಕಾರ್ಯಾಲಯದ ಆವರಣದಲ್ಲಿ ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯವರು ನೀಡಲಾದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಮಗ್ರಿಗಳ ಕೀಟ್‌ಗಳನ್ನು ವಿತರಿಸಿ ಮಾತನಾಡುತ್ತಿದ್ದರು.
ಇಂದಿನ ಸ್ಫರ್ಧಾತ್ಮಕ ಯುಗದಲ್ಲಿ ಶಿಕ್ಷಣ ಮಹತ್ವದ ಪಾತ್ರವಹಿಸುತ್ತಿದೆ. ಕಾರ್ಮಿಕರು ಸರಕಾರ ನೀಡುವ ಸೌಲಭ್ಯಗಳ ಸದುಪಯೋಗದೊಂದಿಗೆ ತಮ್ಮ ಶ್ರಮದ ಗಳಿಕೆಯಲ್ಲೂ ಸ್ವಲ್ಪ ಹಣವನ್ನು ತಮ್ಮ ಮಕ್ಕಳ ಶಿಕ್ಷಣಕ್ಕೆ ಉಪಯೋಗಿಸಿ ಅವರನ್ನು ಪ್ರತಿಭಾನ್ವಿತರನ್ನಾಗಿ ಮಾಡುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯರಾದ ಟಿ ಆರ್ ಕಾಗಲ, ಎಮ್ ಎಲ್ ತೋಳಿನವರ, ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡ್ರ, ಲಕ್ಷಿö್ಮÃಕಾಂತ ಎತ್ತಿನಮನಿ, ನಗರಸಭೆ ಸದಸ್ಯ ಬಸವರಾಜ ಆರೇನ್ನವರ, ಕಾರ್ಮಿಕ ನೀರಿಕ್ಷಕ ಪಿ ವಿ ಮಾವರಕರ, ರುದ್ರಮುನಿ ಹಿರೇಮಠ, ಈರಪ್ಪ ಮಾಳೋಜಿ, ಸೇರಿದಂತೆ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.