ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಯಂತ್ರೋಪಕರಣಗಳನ್ನು ಅಳವಡಿಸಿಕೊಂಡು ಆರ್ಥಿಕವಾಗಿ ಪ್ರಗತಿ ಸಾಧಿಸಿ-ಶಾಸಕ ರಮೇಶ ಜಾರಕಿಹೊಳಿ.!
ಗೋಕಾಕ: ರೈತ ಭಾಂದವರು ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಯಂತ್ರೋಪಕರಣಗಳನ್ನು ಅಳವಡಿಸಿಕೊಂಡು ಆರ್ಥಿಕವಾಗಿ ಪ್ರಗತಿ ಸಾಧಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅವರು, ಶುಕ್ರವಾರದಂದು ನಗರದ ತಮ್ಮ ಕಾರ್ಯಾಲಯದ ಆವರಣದಲ್ಲಿ ಕೃಷಿ ಇಲಾಖೆಯಿಂದ ನೀಡಲಾದ ಯಂತ್ರೋಪಕರಣಗಳನ್ನು ರೈತರಿಗೆ ವಿತರಿಸಿ ಮಾತನಾಡುತ್ತ ಇಲಾಖೆಯ ವಿವಿಧ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಿ. ದೇಶದ ಬೆನ್ನೆಲುಬಾದ ರೈತರ ಅಭಿವೃದ್ಧಿಗೆ ಸಹಕಾರ ನೀಡಲು ನಾನು ಸದಾ ಸಿದ್ಧನಿದ್ದೇನೆಂದು ಹೇಳಿದರು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯರಾದ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ಮುಖಂಡರಾದ ಭೀಮಗೌಡ ಪೋಲಿಸಗೌಡರ, ಸುರೇಶ ಸನದಿ, ಕಾಂತು ಎತ್ತಿನಮನಿ, ಸಹಕಾಯಕ ಕೃಷಿ ನಿರ್ದೇಶಕ ಎಮ್ ಎಮ್ ನದಾಫ, ಕೃಷಿ ಅಧಿಕಾರಿಗಳಾದ ವಿನಾಯಕ ತುರಾಯಿದಾರ, ಎಸ್ ಬಿ ಕರಗಣ್ಣಿ ಇದ್ದರು.