ರವಿವಾರ ರಮೇಶ ಜಾರಕಿಹೊಳಿ ಅವರ ನೇತ್ರತ್ವದಲ್ಲಿ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಭೆ.!
ಗೋಕಾಕ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಳಗಳ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಇದೆ ರವಿವಾರ ದಿ.೦7 ರಂದು ಬೆಳಿಗ್ಗೆ 11.೦೦ಕ್ಕೆ ಜರುಗಲಿದೆ.
ನಗರದ ಶಾಸಕ ರಮೇಶ ಜಾರಕಿಹೊಳಿ ಅವರ ಕಾರ್ಯಾಲಯದ ಆವರಣದಲ್ಲಿ ನಡೆಯಲಿರುವ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಜಗದೀಶ ಶೇಟ್ಟರ ಪರ ಚುನಾವಣಾ ಪ್ರಚಾರ, ಕೇಂದ್ರ ಸರಕಾರದ ಸಾಧನೆಗಳನ್ನು ಮತದಾರರಿಗೆ ತಲುಪಿಸುವ ನಿಟ್ಟಿನಲ್ಲಿ ಚುನಾವಣೆ ಎದುರಿಸಲು ಕಾರ್ಯಕರ್ತರನ್ನು ಜಾಗೃತಗೊಳಿಸಲು ಆಯೋಜಿಸಲಾಗಿದೆ.
ಈಗಾಗಲೇ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶದ ಭವ್ಯ ವೇದಿಕೆಯ ಸಿದ್ಧತೆ ನಡೆದಿದ್ದು ನಾಳೆ ಬಿಜೆಪಿ ಅಭ್ಯರ್ಥಿ ಜಗದೀಶ ಶೇಟ್ಟರ ಗೋಕಾಕ ವಿಧಾನಸಭಾ ಕ್ಷೇತ್ರದ ಮೂಲಕ ಚುನಾವಣಾ ರಣಕಹಳೆ ಮೊಳಗಿಸಲಿದ್ದಾರೆ.
ಶಾಸಕ ರಮೇಶ ಜಾರಕಿಹೊಳಿ ನೇತ್ರತ್ವದಲ್ಲಿ ನಡೆಯುವ ಸಭೆಯಲ್ಲಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಜಗದೀಶ ಶೇಟ್ಟರ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲಕುಮಾರ, ರಾಜ್ಯ ಉಪಾಧ್ಯಕ್ಷ ಅನಿಲ ಬೆಣಕೆ, ಚುನಾವಣಾ ಸಹ ಪ್ರಭಾರಿ ಸಂಜಯ ಪಾಟೀಲ, ಬೆಳಗಾವಿ ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಸುಭಾಸ ಪಾಟೀಲ ಸೇರಿದಂತೆ ಬಿಜೆಪಿಯ ಶಾಸಕರು, ಮಾಜಿ ಶಾಸಕರು ಸೇರಿದಂತೆ ಬಿಜೆಪಿಯ ರಾಜ್ಯ ಹಾಗೂ ಜಿಲ್ಲೆಯ ಮುಖಂಡರುಗಳು, ಕಾರ್ಯಕರ್ತರು ಆಗಮಿಸಲಿದ್ದಾರೆ ಎಂದು ಬಿಜೆಪಿ ನಗರಾಧ್ಯಕ್ಷ ಭೀಮಶಿ ಭರಮನ್ನವರ ಹಾಗೂ ಗ್ರಾಮೀಣಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.