Breaking News

ವಿಕಲತೆ ಹೊಂದಿರುವ ಅಂಗವಿಕಲ ಮಕ್ಕಳನ್ನು ಸಮಾನತೆ ಹಾಗೂ ಮಾನವಿಯತೆಯಿಂದ ನೋಡಿ-ಸರ್ವೋತ್ತಮ ಜಾರಕಿಹೊಳಿ.!

Spread the love

ವಿಕಲತೆ ಹೊಂದಿರುವ ಅಂಗವಿಕಲ ಮಕ್ಕಳನ್ನು ಸಮಾನತೆ ಹಾಗೂ ಮಾನವಿಯತೆಯಿಂದ ನೋಡಿ-ಸರ್ವೋತ್ತಮ ಜಾರಕಿಹೊಳಿ.!


ಗೋಕಾಕ: ವಿಕಲತೆ ಹೊಂದಿರುವ ಅಂಗವಿಕಲ ಮಕ್ಕಳನ್ನು ಸಮಾನತೆ ಹಾಗೂ ಮಾನವಿಯತೆಯಿಂದ ನೋಡುವಂತೆ ಯುವ ಧುರೀಣ ಲಕ್ಷಿö್ಮÃ ಎಜ್ಯುಕೇಷನ ಟ್ರಸ್ಟನ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು.

ಅವರು, ಶನಿವಾರದಂದು ನಗರದ ಎನ್‌ಎಸ್‌ಎಫ್ ವಸತಿ ಪ್ರೌಢಶಾಲೆಯಲ್ಲಿ ಗೋಕಾಕ ಹಾಗೂ ಮೂಡಲಗಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಮತ್ತು ಅಲಿಮ್ಕೊ ಸಂಸ್ಥೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ವಿಕಲಚೇತನ ಮಕ್ಕಳಿಗಾಗಿ ಉಚಿತ ವೈದ್ಯಕೀಯ ಮೌಲ್ಯಾಂಕನ ಶಿಭಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ದಿವ್ಯಚೇತನ ಮಕ್ಕಳಿಗೆ ಪಾಲಕರೆ ದೇವರಾಗಿದ್ದು, ಅವರನ್ನು ಪ್ರೋತ್ಸಾಹಿಸಿ ಮಾನಸಿಕ ಹಾಗೂ ದೈಹಿಕವಾಗಿ ಸದೃಢರನ್ನಾಗಿ ಮಾಡಿ ಸಮಾಜದ ಮುಖ್ಯವಾಹಿನಿಗೆ ತರಬೇಕು. ಈ ನಿಮ್ಮ ಕಾರ್ಯಕ್ಕೆ ಸರಕಾರ ಸಂಘ ಸಂಸ್ಥೆಗಳು ಸೇರಿದಂತೆ ನಮ್ಮೆಲ್ಲರ ಸಹಕಾರವು ಇದೆ. ಸರಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು.

ಮೂಡಲಗಿ ವಲಯ ಕ್ಷೇತ್ರಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಮಾತನಾಡುತ್ತ, ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಲವಾರು ಯೋಜನೆಗಳೊಂದಿಗೆ ವಿಕಲಚೇತನ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿವೆ. ಸರ್ವಶಿಕ್ಷಣ ಅಭಿಯಾನ ಯೋಜನೆಯಡಿ ಎಲ್ಲ ವೀಕಲಚೇತನ ಮಕ್ಕಳಿಗೆ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಪಿಜಿಯೊ ಥೇರಪಿ ಚಿಕಿತ್ಸೆ, ವಿಶೇಷ ಭತ್ತೆಗಳು, ವಿವಿಧ ಸಾಧನ ಸಲಕರಣೆಗಳನ್ನು ವಿತರಿಸಲಾಗುತ್ತಿದ್ದು ಇವುಗಳನ್ನು ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪಾಲಕರು ಉಪಯೋಗಿಸುವಂತೆ ತಿಳಿಸಿದರು.

ವೇದಿಕೆಯ ಮೇಲೆ ನಗರಸಭೆ ಅಧ್ಯಕ್ಷ ಪ್ರಕಾಶ ಮುರಾರಿ, ಗೋಕಾಕ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಗಾರ, ಕ್ಷೇತ್ರ ಸಮನ್ವಯಾಧಿಕಾರಿ ಎಸ್ ಬಿ ಕುಲಕರ್ಣಿ, ಡಾ.ಎಸ್ ಕೆ ಹುಕ್ಕೇರಿ, ಮುಖ್ಯೋಪಾಧ್ಯಾಯನ ಎ ಜಿ ಕೋಳಿ, ಸಂಪನ್ಮೂಲ ವ್ಯಕ್ತಿಗಳಾದ ಐ ಬಿ ಸಂಪಗಾAವಿ, ಎಚ್ ಎಚ್ ಕೌಜಗೇರಿ, ಎಸ್ ಬಿ ಕೊಂತಿ, ಎ ಬಿ ದಳವಾಯಿ ಇದ್ದರು.


Spread the love

About Yuva Bharatha

Check Also

ಗೋಕಾಕನಲ್ಲಿ ಬಿಜೆಪಿಯಿಂದ ಕಾಂಗ್ರೇಸ್ ವಿರುದ್ಧ ಪ್ರತಿಭಟನೆ.!

Spread the loveಗೋಕಾಕನಲ್ಲಿ ಬಿಜೆಪಿಯಿಂದ ಕಾಂಗ್ರೇಸ್ ವಿರುದ್ಧ ಪ್ರತಿಭಟನೆ.! ಗೋಕಾಕ: ವಿಜಯಪುರ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿಯ ಹಿಂದು ಧಾರ್ಮಿಕ …

Leave a Reply

Your email address will not be published. Required fields are marked *

19 − seventeen =