Breaking News

ಮಹಾನಾಯಕನ ದರ್ಪ, ವಿಷಕನ್ಯೆಯ ಸೋಕ್ಕಿನಿಂದ ಸೌಮ್ಯಸ್ವಭಾವದ ಜಗದೀಶ ಶೆಟ್ಟರ ಗೆಲುವು-ರಮೇಶ ಜಾರಕಿಹೊಳಿ.!

Spread the love

ಮಹಾನಾಯಕನ ದರ್ಪ, ವಿಷಕನ್ಯೆಯ ಸೋಕ್ಕಿನಿಂದ ಸೌಮ್ಯಸ್ವಭಾವದ ಜಗದೀಶ ಶೆಟ್ಟರ ಗೆಲುವು-ರಮೇಶ ಜಾರಕಿಹೊಳಿ.!


ಗೋಕಾಕ: ಮಹಾನಾಯಕನ ದರ್ಪ, ವಿಷಕನ್ಯೆಯ ಸೋಕ್ಕಿನ ರಾಜಕಾರಣಕ್ಕೆ ಜನ ಬೇಸತ್ತು ಸೌಮ್ಯಸ್ವಭಾವದ ಜಗದೀಶ ಶೆಟ್ಟರ ಅವರನ್ನು ಗೆಲ್ಲಿಸುವ ಮೂಲಕ ಜನತೆ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಅವರು, ಗುರುವಾರದಂದು ನಗರದ ಶಾಸಕರ ಕಛೇರಿ ಎದುರು ಬಿಜೆಪಿ ನಗರ ಮತ್ತು ಗ್ರಾಮೀಣ ಮಂಡಳ ವತಿಯಿಂದ ನೂತನ ಸಂಸದ ಜಗದೀಶ್ ಶೆಟ್ಟರ್ ಅವರ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಗೆಲುವು ಬೆಳಗಾವಿ ಲೋಕಸಭೆ ಮತಕ್ಷೇತ್ರದ ಕಾರ್ಯಕರ್ತರ ಹಾಗೂ ಜನರ ಗೆಲುವಾಗಿದೆ. ಈ ಲೋಕಸಭೆ ಚುನಾವಣೆಯಲ್ಲಿ ನಾನು ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ ಇದರಲ್ಲಿ ರಮೇಶ ಜಾರಕಿಹೊಳಿ ಅವರ ಪಾತ್ರ ಇಲ್ಲ. ಎಲ್ಲ ಕಾರ್ಯಕರ್ತರ ಸಹಕಾರವಿದೆ ಎಂದರು.


ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ದಬ್ಬಾಳಿಕೆ, ಭೂ ಕಬಳಿಕೆ ಅಂತಹ ಘಟನೆಗಳಿಂದ ಬಿಜೆಪಿಗೆ ೫೦ಸಾವಿರ ಲೀಡ್ ಸಿಕ್ಕಿದೆ. ದುರಹಂಕಾರ ಹಾಗೂ ಸ್ವಾರ್ಥ ರಾಜಕಾರಣ ಶಾಶ್ವತವಲ್ಲ. ಜನತೆ ಬುದ್ಧಿವಂತರಿದ್ದು ಸಮಯಕ್ಕೆ ಸರಿಯಾಗಿ ತಕ್ಕ ಪಾಠ ಕಲಿಸುತ್ತಾರೆ. ನಾವು ಬಡವರ ಕಾಳಜಿಯಿಂದ ಸತತವಾಗಿ ಆಯ್ಕೆಯಾಗಿ ಬರುತ್ತಿದ್ದೇವೆ. ವಿಧಾನಸಭೆ ಚುನಾವಣೆಯಲ್ಲಿ ನಮಗೆ ಹಿನ್ನಡೆಯಾಗಿದ್ದರಿಂದ ಸ್ವಲ್ಪ ನಾನು ನೊಂದಿದ್ದೆ. ಜನರು ನನ್ನ ಮೇಲೆ ಇಟ್ಟ ಪ್ರೀತಿ ಮತ್ತು ಅಭಿಮಾನದಿಂದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿದ್ದು ನನಗೆ ಸಂತಸ ತಂದಿದೆ. ದೇಶದಲ್ಲಿ ಎಲ್ಲ ಸಮುದಾಯದವರು ಶಾಂತಿ ಸೌಹಾರ್ದತೆಯಿಂದ ಬದುಕಲು ನರೇಂದ್ರ ಮೋದಿಯಂತವರ ನಾಯಕತ್ವದಿಂದ ಮಾತ್ರ ಸಾಧ್ಯ. ನಾವೆಲ್ಲರೂ ಪಕ್ಷವನ್ನು ಬಲಿಷ್ಠಗೊಳಿಸಲು ಶ್ರಮಿಸೋಣ ಎಂದರು.

ಘಟ್ಟಿ ಬಸವಣ್ಣ ಯಾತ ನೀರಾವರಿ ಯೋಜನೆ ನಿಲ್ಲಿಸಲು ಮಹಾನಾಯಕ ಪ್ಲಾನ್: ನಗರದ ಯೋಗಿಕೋಳ್ಳ ಪ್ರದೇಶದಲ್ಲಿ ೬ಟಿಎಂಸಿ ನೀರು ನಿಲ್ಲಿಸಲು ಉದ್ದೇಶಿಸಿ ಮಾಡಲಾದ ಘಟ್ಟಿ ಬಸವಣ್ಣ ಡ್ಯಾಂ ನಿರ್ಮಾಣ ಯೋಜನೆಯನ್ನು ನಿಲ್ಲಿಸಲು ಮಹಾನಾಯಕ ಪ್ಲಾನ್ ಮಾಡಿ ಅಧಿಕಾರಿಗಳಿಂದ ಸತೀಶ ಜಾರಕಿಹೊಳಿ ಅವರ ಹೆಸರು ಹೇಳಿಸಿದ್ದ ಆದರೆ ನಾನು ಸತೀಶ ಜಾರಕಿಹೊಳಿ ಅವರೊಂದಿಗೆ ಮಾತನಾಡಿ ಇದರ ಬಗ್ಗೆ ಕೇಳಿದಾಗ ಆ ಯೋಜನೆಯನ್ನು ನಿಲ್ಲಿಸುವ ಉದ್ದೇಶ ನನ್ನದಿಲ್ಲ ಎಂದಿದ್ದಾರೆ. ಮಹಾನಾಯಕ ಸುಳ್ಳು ಹೇಳಿ ಯೋಜನೆ ನಿಲ್ಲಿಸುವ ಹುನ್ನಾರ ನಡೆಸಿದ್ದ ಆದರೆ ಅದು ಸಾಧ್ಯವಾಗಲಿಲ್ಲ ಮುಂದಿನ ದಿನಗಳಲ್ಲಿ ಅದನ್ನು ಅನುಷ್ಠಾನಗೊಳಿಸಿ ಈ ಭಾಗದ ರೈತ ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ಸಿದ್ದರಾಮಯ್ಯ ಸಿಎಂ ಇರುವವರೆಗೆ ಕಾಂಗ್ರೆಸ್ ಸರಕಾರ ಇರುತ್ತದೆೆ ಸಿದ್ದರಾಮಯ್ಯ ಅವಧಿ ಮುಗಿದ ನಂತರ ಹೇಳಲಾಗಲ್ಲ ಎಂದು ಕಾಂಗ್ರೆಸ್ ಸರಕಾರದ ವಿರೋದ್ಧ ವಾಗ್ದಾಳಿ ನಡೆಸಿದರು.

ಸ್ನೇಹಿತರ ಬಳಿ ಚಾಲೆಂಜ್ ಮಾಡಿ ಜಗದೀಶ ಶೆಟ್ಟರ ಅವರು ೧.೫೦ಲಕ್ಷ ಕ್ಕಿಂತ ಕಡಿಮೆ ಮತದಿಂದ ಗೆದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವದಾಗಿ ತಿಳಿಸಿದ್ದೆ. ಆದರೆ ಜನರು ಬಿಜೆಪಿಯನ್ನು ಗೆಲ್ಲಿಸಿ ನನಗೆ ಗೌರವ ನೀಡಿದ್ದಾರೆ. ಮುಖ್ಯವಾಗಿ ಗ್ರಾಮೀಣ ಭಾಗದಲ್ಲಿ ಪಕ್ಷಕ್ಕೆ ಹೆಚ್ಚಿಗೆ ಮತ ಬಂದಿದ್ದು ಸಂತೋಷ ಉಂಟಾಗಿದೆ.
ಸನ್ಮಾನ ಸ್ವೀಕರಿಸಿ ಮಾತನಾಡಿದ ಸಂಸದ ಜಗದೀಶ್ ಶೆಟ್ಟರ್ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಜನ ಜಾತಿ ಮತ ಪಂಥ ನೋಡಿ ಮತಹಾಕಿಲ್ಲ, ಬದಲಾಗಿ ಅಭಿವೃದ್ಧಿ ಬಲ ಗೆದ್ದಿದೆ. ಹಣವನ್ನು ದಿಕ್ಕರಿಸಿ ಪ್ರಾಮಾಣಿಕತೆ ಜಯ ಸಿಕ್ಕಿದೆ ಇದು ಜನರ, ಕಾರ್ಯಕರ್ತರ ವಿಜಯವಾಗಿದೆ. ನಾನು ಚುನಾವಣೆ ಗೆಲ್ಲಲಿಕ್ಕೆ ರಮೇಶ ಜಾರಕಿಹೊಳಿ ಅವರು ಅವಿರತ ಪರಿಶ್ರಮ ಪಟ್ಟಿದ್ದಾರೆ. ಜನರು ತಿರ್ಮಾಣ ಮಾಡಿ ೧.೭೦ ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆಲ್ಲಿಸಿದ್ದಾರೆ. ನನಗೆ ಜನರ ಸಮಸ್ಯೆ ಆಲಿಸುವುದು ಮುಖ್ಯ ಹಾಗಾಗಿ ಸನ್ಮಾನ, ಆಭಿನಂದನೆ ಬಿಟ್ಟು ಬರುವ ದಿನಗಳಲ್ಲಿ ಜನಪರವಾದ ಸೇವೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶ ಸುರಕ್ಷತೆವಾಗಿದೆ. ಪ್ರಧಾನಿ ಆದ ಮರುದಿನವೆ ತಮ್ಮ ಕೆಲಸವನ್ನು ಪ್ರಾರಂಭ ಮಾಡಿರುವ ಅವರು ದೇಶ ಅಭಿವೃದ್ಧಿ ಪಥದತ್ತ ಸಾಗಲು ಮುನ್ನುಡಿ ಬರೆದಿದ್ದಾರೆ. ಇದನ್ನು ಕಾಂಗ್ರೆಸ್‌ಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಗ್ಯಾರಂಟಿ ಯೋಜನೆಗಳನ್ನು ಜನ ಮೆಚ್ಚಿಲ್ಲಾ, ಕಾಂಗ್ರೆಸನ ಶಾಸಕರು ಸಹ ಗ್ಯಾರಂಟಿ ವಿರುದ್ಧ ಬಂಡಾಯ ಎದ್ದಿದ್ದಾರೆ. ಮುಂದೆ ಗ್ಯಾರಂಟಿ ಬಂದ್ ಮಾಡಿದರು ಆಶ್ಚರ್ಯ ಪಡಬೇಕಾಗಿಲ್ಲ. ಗ್ಯಾರಂಟಿಯAತಹ ಯೋಜನೆಗಳು ತಾತ್ಕಾಲಿಕವಾಗಿವೆ. ಗ್ಯಾರಂಟಿಯಿAದ ಖಜಾನೆ ಖಾಲಿ ಆದ ಪರಿಣಾಮ ತೈಲ ಬೆಲೆ ಏರಿಸಿದ್ದಾರೆ. ಒಂದು ಕಡೆ ಕೊಟ್ಟು ಇನ್ನೋಂದು ಕಡೆ ಜಗ್ಗುವ ಕಾರ್ಯ ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದು ಆಪಾಧಿಸಿದರು.

ಗೋಕಾಕ ಕ್ಷೇತ್ರದಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಅವರು ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಗೋಕಾಕ ಜಲಪಾತ ಅಭಿವೃದ್ಧಿ ಪಡಿಸಿ ಉತ್ತಮ ಪ್ರವಾಸಿತಾಣವನ್ನಾಗಿ ಮಾಡಬೇಕಾಗಿದೆ. ಎಲ್ಲರ ಸಹಕಾರದಿಂದ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಸುವ ಕಾರ್ಯ ಮಾಡಲಾಗುವುದಲ್ಲದೆ ಬೆಳಗಾವಿ, ಕಿತ್ತೂರ ಧಾರವಾಡ ಮಾರ್ಗದ ರೈಲ್ವೆ ಕಾರ್ಯವಾಗಿಲ್ಲ, ಅದಕ್ಕೂ ಸಹ ಚಾಲನೆ ನೀಡಲಾಗುವುದು. ಒಟ್ಟಿನಲ್ಲಿ ಬೆಳಗಾವಿ ಜನರ ವಿಶ್ವಾಸಕ್ಕೆ ದಕ್ಕೆಯಾಗದಂತೆ ಕಾರ್ಯ ಮಾಡುತ್ತೇನೆ ಎಂದ ಅವರು ಕಳಸಾ ಬಂಡೂರಿ ಯೋಜನೆಯನ್ನು ಸಹ ಅನುಷ್ಟಾನಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ, ಮಾಜಿ ಶಾಸಕ ಎಮ್ ಎಲ್ ಮುತ್ತೆನ್ನವರ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಮುಖಂಡರಾದ ಕಿರಣ ಜಾಧವ, ಲಕ್ಷ್ಮಣ್ ತಪಸಿ, ಅಶೋಕ ಪಾಟೀಲ ಉಪಸ್ಥಿತರಿದ್ದರು.


Spread the love

About Yuva Bharatha

Check Also

ಮಕ್ಕಳ ವ್ಯಕ್ತಿತ್ವ ನಿರ್ಮಾಣ ಮಾಡುವಲ್ಲಿ ತಂದೆ-ತಾಯಿಗಳಷ್ಟೇ ಶಿಕ್ಷಕರ ಪಾತ್ರವು ಮಹತ್ವದ್ದಾಗಿದೆ- ಗಜಾನನ ಮನ್ನಿಕೇರಿ.!

Spread the loveಮಕ್ಕಳ ವ್ಯಕ್ತಿತ್ವ ನಿರ್ಮಾಣ ಮಾಡುವಲ್ಲಿ ತಂದೆ-ತಾಯಿಗಳಷ್ಟೇ ಶಿಕ್ಷಕರ ಪಾತ್ರವು ಮಹತ್ವದ್ದಾಗಿದೆ- ಗಜಾನನ ಮನ್ನಿಕೇರಿ.! ಗೋಕಾಕ: ಮಕ್ಕಳ ವ್ಯಕ್ತಿತ್ವ …

Leave a Reply

Your email address will not be published. Required fields are marked *

three × 5 =