ಸಂ ಕ ನೌಕರ ಸಂಘದ ಅಧ್ಯಕ್ಷರಾಗಿ ಅವಿರೋಧ ಆಯ್ಕೆ
ಯುವ ಭಾರತ ಸುದ್ದಿ ಹುಬ್ಬಳ್ಳಿ: ಹುಬ್ಬಳ್ಳಿ, ದಾವಣಗೆರೆ ಮತ್ತು ಕಲಬುರ್ಗಿ ಆವೃತ್ತಿಯ ಸಂಯುಕ್ತ ಕರ್ನಾಟಕ ನೌಕರ ಸಂಘದ ಅಧ್ಯಕ್ಷರಾಗಿ ಬೆಳಗಾವಿಯ ಮುಖ್ಯವರದಿಗಾರ ವಿಲಾಸ ಜೋಶಿ ಅವಿರೋಧ ಆಯ್ಕೆಯಾದರು.
ಅಧ್ಯಕ್ಷ ಸ್ಥಾನಕ್ಕೆ ನಾಲ್ವರು ನಾಮಪತ್ರ ಸಲ್ಲಿಸಿದ್ದರು. ಅದರಲ್ಲಿ ಇಬ್ಬರ ನಾಮಪತ್ರ ತಿರಸ್ಕೃತವಾಯಿತು. ಕಣದಲ್ಲಿದ್ದ ಓರ್ವರು ತಮ್ಮ ನಾಮಪತ್ರವನ್ನು ವಾಪಸ್ಸು ತೆಗೆದುಕೊಂಡಿದ್ದರಿಂದ ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆಯಿತು. ಚುನಾವಣಾಧಿಕಾರಿ ವಿದ್ಯಾ ಕೂಡ್ಲಕೆರಿ ಅವರು ಈ ಘೋಷಣೆ ಮಾಡಿದರು.
ನಂತರ ಗೌರವಾಧ್ಯಕ್ಷರಾಗಿ ಸುಧೀಂದ್ರ ಹುಲಗೂರ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಬಸವರಾಜ ಯರಿಬೈಲ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.