ಶಾಸಕ ರಮೇಶ ಜಾರಕಿಹೊಳಿ ಅವರು ವಿವಿಧ ಕಾಮಗಾರಿಗಳಿಗೆ ಶನಿವಾರದಂದು ಚಾಲನೆ.!
ಗೋಕಾಕ: ಗೋಕಾಕ ನಗರ ಹಾಗೂ ತಾಲೂಕಿನ ಅಂಕಲಗಿ ಪಟ್ಟಣ ಪಂಚಾಯತ ವ್ಯಾಪ್ತಿಯಯಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರು ವಿವಿಧ ಕಾಮಗಾರಿಗಳಿಗೆ ಶನಿವಾರದಂದು ಚಾಲನೆ ನೀಡುವರು.
10 ಕೋಟಿ ರೂಗಳ ವೆಚ್ಚದಲ್ಲಿ ನಗರದ ಶ್ರೀ ಛತ್ರಪತಿ ಶಿವಾಜಿ ಮಹಾರಾಜ ವೃತ್ತದಿಂದ ಮಹರ್ಷಿ ಶ್ರೀ ವಾಲ್ಮೀಕಿ ವೃತ್ತದ ವರೆಗೆ ರಸ್ತೆ ಕಾಮಗಾರಿಗೆ ಚಾಲನೆ ಮತ್ತು ಅಂಕಲಗಿ ಪಟ್ಟಣ ಪಂಚಾಯತ ವ್ಯಾಪ್ತಿಯಯ 65ಕೋಟಿ ವೆಚ್ಚದಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು 24/7, ಬೀದಿ ದೀಪ, ಚರಂಡಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ಮಲ್ಲಾಪೂರ ಪಿಜಿ, ಧುಪದಾಳ (ಘಟಪ್ರಭಾ) 30ಕೋಟಿ ರೂ ವೆಚ್ಚದಲ್ಲಿ ಕೊಳವೆಮಾರ್ಗ, ಜಲಶುದ್ಧೀಕರಣ ಘಟಕ, ೪೦ಲಕ್ಷ ಲೀಟರ ಸಾಮರ್ಥ್ಯದ ನೆಲಮಟ್ಟದ ಜಲಸಂಗ್ರಹಗಾರ, ಮನೆಗಳಿಗೆ ನೀರಿನ ಸಂಪರ್ಕ ಸೇರಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡುವರು.
ಬೆಳಗ್ಗೆ 10.30ಕ್ಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜಿಲ್ಲಾ ಪಂಚಾಯತ ಮತ್ತು ತಾಲೂಕು ಪಂಚಾಯತ ಚುನಾವಣೆಯ ಹಿನ್ನಲೆ ಬಿಜೆಪಿ ಕಾರ್ಯಕರ್ತರ ಪೂರ್ವಭಾವಿ ಸಭೆ(ಸಮಾವೇಶ)ಯಲ್ಲಿ ಭಾಗವಹಿಸುವರು. ಇದೇ ಸಮಾವೇಶದಲ್ಲಿ ಅಂಕಲಗಿ ಗ್ರಾಮಸ್ಥರು ಶಾಸಕರಿಗೆ ಸನ್ಮಾನ ನೆರವೇರಿಸಲಿದ್ದಾರೆ, ಸಭೆಯಲ್ಲಿ ಬಿಜೆಪಿ ಬೆಳಗಾವಿ ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಸುಭಾಸ ಪಾಟೀಲ, ಮಾಜಿ ಶಾಸಕ ಸಂಜಯ ಪಾಟೀಲ, ಬಿಜೆಪಿ ಹಿರಿಯ ಪದಾಧಿಕಾರಿಗಳು, ಮಂಡಲ ಅಧ್ಯಕ್ಷರು ಭಾಗವಹಿಸಲಿದ್ದಾರೆ ಎಂದು ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.