1೦೦ಕೋಟಿ ರೂಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ರಮೇಶ ಜಾರಕಿಹೊಳಿ.!
ಗೋಕಾಕ: ನಮ್ಮ ಅಧಿಕಾರವಧಿಯಲ್ಲಿ ನೀರಾವರಿ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿರುವದಾಗಿ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅವರು, ತಾಲೂಕಿನ ಅಂಕಲಗಿ ಪಟ್ಟಣದಲ್ಲಿ ವಿವಿಧ ಕಾಮಗಾರಿಗಳಿಗೆ ಶನಿವಾರದಂದು ಚಾಲನೆ ನೀಡಿ ಮಾತನಾಡಿ, ಹಲವಾರು ಬೃಹತ್ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ಕ್ಷೇತ್ರವನ್ನು ಸಂಪೂರ್ಣ ನೀರಾವರಿಗೆ ಒಳಪಡಿಸಲಾಗಿದೆ. ಎಲ್ಲ ಗ್ರಾಮಗಳಿಗೆ ಕುಡಿಯುವ ನೀರು, ರಸ್ತೆ, ಶಾಲೆ, ಅಂಗನವಾಡಿ ಹಾಗೂ ಆರೋಗ್ಯ ಕೇಂದ್ರಗಳನ್ನು ಪ್ರಾರಂಭಿಸಿ ಜನತೆಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿದ್ದೆನೆ. ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಬೃಹತ್ ಯೋಜನೆಗಳನ್ನು ಅನುಷ್ಠಾನಗೊಳಿಸುವ ಗುರಿಯೊಂದಿಗೆ ಕಾರ್ಯಪ್ರವೃತ್ತನಾಗಿದ್ದೇನೆ. ವೈದ್ಯಕೀಯ ಮತ್ತು ಇಂಜನೀಯರಿAಗ ಕಾಲೇಜುಗಳನ್ನು ಸ್ಥಾಪಿಸುವ ಯೋಜನೆ ಇದ್ದು ಮುಂಬರುವ ದಿನಗಳಲ್ಲಿ ಪೂರ್ಣಗೊಳಿಸುವದಾಗಿ ತಿಳಿಸಿದ ಅವರು, ನಗರದ ಸರಕಾರಿ ಆಸ್ಪತ್ರೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿದೆ. ರೈತರು ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿಯನ್ನು ಅಳವಢಿಸಿಕೊಂಡು ಆರ್ಥಿಕವಾಗಿ ಸಧೃಢರಾಗಿರಿ ನಿಮ್ಮೆಲ್ಲರ ಆಶೀರ್ವಾಧದಿಂದ ನಮಗೆ ಈ ಕಾರ್ಯಗಳನ್ನು ಮಾಡಲು ಸಾಧ್ಯವಾಗುತ್ತಿದ್ದು ನಿಮ್ಮ ಆಶೀರ್ವಾಧ ಸದಾ ನನ್ನ ಮೇಲಿರಲಿ ಎಂದು ಕೇಳಿಕೊಂಡರು.
ಲೋಕೋಪಯೋಗಿ ಇಲಾಖೆಯಿಂದ ೧೦ ಕೋಟಿ ರೂಗಳ ವೆಚ್ಚದಲ್ಲಿ ನಗರದ ಶ್ರೀ ಛತ್ರಪತಿ ಶಿವಾಜಿ ಮಹಾರಾಜ ವೃತ್ತದಿಂದ ಮಹರ್ಷಿ ಶ್ರೀ ವಾಲ್ಮೀಕಿ ವೃತ್ತದ ವರೆಗೆ ರಸ್ತೆ ಕಾಮಗಾರಿ, ಅಂಕಲಗಿ ಪಟ್ಟಣ ಪಂಚಾಯತ ವ್ಯಾಪ್ತಿಯಯ ೬೫ಕೋಟಿ ವೆಚ್ಚದಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು ೨೪/೭, ಬೀದಿ ದೀಪ, ಚರಂಡಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿ ಹಾಗೂ ಮಲ್ಲಾಪೂರ ಪಿಜಿ, ಧುಪದಾಳ (ಘಟಪ್ರಭಾ) ೩೦ಕೋಟಿ ರೂ ವೆಚ್ಚದಲ್ಲಿ ಕೊಳವೆಮಾರ್ಗ, ಜಲಶುದ್ಧೀಕರಣ ಘಟಕ, ೪೦ಲಕ್ಷ ಲೀಟರ ಸಾಮರ್ಥ್ಯದ ನೆಲಮಟ್ಟದ ಜಲಸಂಗ್ರಹಗಾರ, ಮನೆಗಳಿಗೆ ನೀರಿನ ಸಂಪರ್ಕ ಸೇರಿ ಒಟ್ಟು ೧೦೦ಕೋಟಿ ರೂಗಳ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ಅಂಕಲಗಿ ಪಟ್ಟಣದಲ್ಲಿ ನಿರ್ಮಿಸಲಾದ ಉರ್ದು ಶಾಲೆಯ ನೂತನ ಕೋಠಡಿಗಳನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಅಂಕಲಗಿ-ಕುAದರಗಿ ಅಡವಿಸಿದ್ಧೇಶ್ವರ ಮಠದ ಶ್ರೀ ಡಾ.ಅಮರಸಿದ್ಧೇಶ್ವರ ಮಹಾಸ್ವಾಮಿಗಳು, ಯುವ ನಾಯಕ ಅಮರನಾಥ ಜಾರಕಿಹೊಳಿ, ನಗರಸಭೆ ಅಧ್ಯಕ್ಷ ಪ್ರಕಾಶ ಮುರಾರಿ, ತಹಶೀಲದಾರ ಡಾ.ಮೋಹನ ಭಸ್ಮೆ, ಪೌರಾಯುಕ್ತ ರಮೇಶ ಜಾಧವ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅನೀಲಕುಮಾರ ಶಿಂಘೆ, ಡಿವೈಎಸ್‌ಪಿ ಡಿ ಎಚ್ ಮುಲ್ಲಾ, ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಕೆಂಪಣ್ಣ ಪಾಟೀಲ, ಅಡಿವೆಪ್ಪ ನಾವಲಗಟ್ಟಿ, ವೀರುಪಾಕ್ಷಿ ಅಂಗಡಿ, ಮುನ್ನಾ ದೇಸಾಯಿ, ಆನಂದ ಅತ್ತುಗೋಳ, ರಾಜು ತಳವಾರ, ನಗರಸಭೆ, ಪಟ್ಟಣ ಪಂಚಾಯತ, ಗ್ರಾಪಂ, ಪಿಕೆಪಿಎಸ್ ಸದಸ್ಯರು ಹಾಗೂ ಮುಖಂಡರು ಇದ್ದರು.