Breaking News

ಬಿಜೆಪಿ ಸದಸ್ಯತ್ವ ಈ ಬಾರಿ ಅತಿ ಹೆಚ್ಚಿನ ಸಾಮಾನ್ಯ ಸದಸ್ಯರನ್ನು ಸೇರ್ಪಡೆಗೊಳಿಸಿ-ರಮೇಶ ಜಾರಕಿಹೊಳಿ.!

Spread the love

ಬಿಜೆಪಿ ಸದಸ್ಯತ್ವ ಈ ಬಾರಿ ಅತಿ ಹೆಚ್ಚಿನ ಸಾಮಾನ್ಯ ಸದಸ್ಯರನ್ನು ಸೇರ್ಪಡೆಗೊಳಿಸಿ-ರಮೇಶ ಜಾರಕಿಹೊಳಿ.!


ಗೋಕಾಕ: ವಿಶ್ವದಲ್ಲಿ ಅತಿ ಹೆಚ್ಚು ಸದಸ್ಯತ್ವ ಹೊಂದಿದ ರಾಜಕೀಯ ಪಕ್ಷವಾಗಿರುವ ಬಿಜೆಪಿ ಕಾರ್ಯಕರ್ತರ ಪಕ್ಷವಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅವರು, ನಗರದ ತಮ್ಮ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಸಂಬAಧಿಸಿದ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಹಿಂದೆ ನಡೆದ ನೋಂದಣಿ ಅಭಿಯಾನಕ್ಕಿಂತಲೂ ಈ ಬಾರಿ ಅತಿ ಹೆಚ್ಚಿನ ಸಾಮಾನ್ಯ ಸದಸ್ಯರನ್ನು ಸೇರ್ಪಡೆಗೊಳಿಸುವ ಜವಾಬ್ದಾರಿ ಬೂತ್ ಮಟ್ಟದ ಅಧ್ಯಕ್ಷರು ಮತ್ತು ಕಾರ್ಯಕರ್ತರ ಜವಾಬ್ದಾರಿಯಾಗಿದ್ದು ಹೆಚ್ಚಿನ ಆಸಕ್ತಿ ವಹಿಸಿ ಕೆಲಸ ನಿರ್ವಹಿಸಬೇಕು ಎಂದರು.
ಪರಿಣಾಮಕಾರಿಯಾಗಿರುವ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನ ಪರಿಕಲ್ಪನೆಗೆ ಹೆಚ್ಚು ಮಹತ್ವ ದೊರೆತಿರುವ ಕಾರಣಕ್ಕೆ ಕಾಂಗ್ರೆಸ್‌ನವರು ಬಿಜೆಪಿ ಮಾದರಿಯನ್ನು ನಕಲು ಮಾಡುತ್ತಿರುವುದೇ ಸಾಕ್ಷಿಯಾಗಿದೆ. ಗೋಕಾಕ ವಿಧಾನಸಭಾ ಕ್ಷೇತ್ರದ ಎಲ್ಲ ಬೂತ್‌ಗಳಲ್ಲಿ ಕನಿಷ್ಠ ೩೦೦ಕ್ಕೂ ಅಧಿಕ ಸದಸ್ಯತ್ವವನ್ನು ಮಾಡುವ ಮೂಲಕ ದಾಖಲೆ ನಿರ್ಮಿಸುವಂತೆ ತಿಳಿಸಿದರು.
ಬಿಜೆಪಿ ಜಿಲ್ಲಾ ಗ್ರಾಮೀಣ ಅಧ್ಯಕ್ಷ ಸುಭಾಸ ಪಾಟೀಲ ಮಾತನಾಡಿ, ಕಳೆದ ಬಾರಿ ೧೧ಕೋಟಿಗೂ ಹೆಚ್ಚು ಸದಸ್ಯರನ್ನು ಬಿಜೆಪಿ ವಿಶ್ವದಲ್ಲಿ ಹೊಂದಿದ್ದು, ಈ ಬಾರಿ ಅದಕ್ಕಿಂತಲೂ ಹೆಚ್ಚಿನ ಸದಸ್ಯತ್ವವನ್ನು ನಾವೆಲ್ಲರೂ ಮಾಡಬೇಕಿದೆ. ಸೆ.೨ ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ನವದೆಹಲಿಯಲ್ಲಿ ಚಾಲನೆ ನೀಡಲಿದ್ದಾರೆ. ಎರಡು ಹಂತಗಳಲ್ಲಿ ಈ ಅಭಿಯಾನ ಜರುಗಲಿದೆ. ಸೆ.೨ ರಿಂದ ೨೫ರ ತನಕ ಒಂದು ಹಂತವಾದರೆ, ಎರಡನೇ ಹಂತವು ಅ.೧ ರಿಂದ ೧೫ ರವರೆಗೆ ನಡೆಯಲಿದ್ದು, ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಕೋರಿದರು.
ಬಿಜೆಪಿ ಸದಸ್ಯತ್ವ ಅಭಿಯಾನ ಪ್ರಮುಖ ಡಾ.ಕೆ ವಿ ಪಾಟೀಲ ಅವರು ಮಾತನಾಡಿ, ಸದಸ್ಯತ್ವವನ್ನು ನಮೋ ಯ್ಯಾಪ್, ಕ್ಯೂ ಆರ್ ಕೋಡ ಬಳಸಿ ಹಾಗೂ ೮೮೦೦೦೦೨೦೨೪ಗೆ ಮಿಸ್ ಕಾಲ್ ಮಾಡುವ ಮೂಲಕ ನೊಂದಾಯಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಗೋಕಾಕ ನಗರ ಮಂಡಲ ಹಾಗೂ ಗ್ರಾಮೀಣ ಮಂಡಲದಿAದ ಸದಸ್ಯತ್ವ ಸಂಚಾಲಕರನ್ನು ನೇಮಿಸಲಾಗಿದ್ದು ಅವರನ್ನು ಸಂಪರ್ಕಿಸಿ ಮತ್ತು ನಗರ ಹಾಗು ಗ್ರಾಮೀಣ ಮಂಡಲದ ಅಧ್ಯಕ್ಷರನ್ನು ಸಂಪರ್ಕಿಸಿ ನೊಂದಾಯಿಸಿಕೊಳ್ಳುವAತೆ ತಿಳಿಸಿದರು.
ಬಿಜೆಪಿ ರಾಷ್ಟಿçÃಯ ಓಬಿಸಿ ಮೋರ್ಚಾ ಕರ‍್ಯಕಾರಿಣಿ ಸದಸ್ಯ ಲಕ್ಷö್ಮಣ ತಪಸಿ ಸದಸ್ಯತ್ವ ಅಭಿಯಾನ ಕುರಿತು ಮಾತನಾಡಿದರು.
ವೇದಿಕೆಯ ಮೇಲೆ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ, ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ನಗರಸಭೆ ಅಧ್ಯಕ್ಷ ಪ್ರಕಾಶ ಮುರಾರಿ, ಕೊಣ್ಣೂರ ಪುರಸಭೆ ಅಧ್ಯಕ್ಷ ವಿನೋದ ಕರನಿಂಗ, ಪದಾಧಿಕಾರಿಗಳಾದ ಎಸ್ ವ್ಹಿ ದೇಮಶೆಟ್ಟಿ, ಶಾಮಾನಂದ ಪೂಜಾರಿ, ಬಸವರಾಜ ಹಿರೇಮಠ, ಗುರುಪಾದ ಕಳ್ಳಿ, ಶಿವಾನಂದ ಪಾಟೀಲ, ದಯಾನಂದ ಇದ್ದರು.
ಕಿರಣ ಡಮಾಮಗರ ಸ್ವಾಗತಿಸಿದರು, ರಾಜೇಶ್ವರಿ ಒಡೆಯರ ನಿರೂಪಿಸಿದರು, ಪುಂಡಲೀಕ ವಣ್ಣೂರ ವಂದಿಸಿದರು.


Spread the love

About Yuva Bharatha

Check Also

ಮಕ್ಕಳ ವ್ಯಕ್ತಿತ್ವ ನಿರ್ಮಾಣ ಮಾಡುವಲ್ಲಿ ತಂದೆ-ತಾಯಿಗಳಷ್ಟೇ ಶಿಕ್ಷಕರ ಪಾತ್ರವು ಮಹತ್ವದ್ದಾಗಿದೆ- ಗಜಾನನ ಮನ್ನಿಕೇರಿ.!

Spread the loveಮಕ್ಕಳ ವ್ಯಕ್ತಿತ್ವ ನಿರ್ಮಾಣ ಮಾಡುವಲ್ಲಿ ತಂದೆ-ತಾಯಿಗಳಷ್ಟೇ ಶಿಕ್ಷಕರ ಪಾತ್ರವು ಮಹತ್ವದ್ದಾಗಿದೆ- ಗಜಾನನ ಮನ್ನಿಕೇರಿ.! ಗೋಕಾಕ: ಮಕ್ಕಳ ವ್ಯಕ್ತಿತ್ವ …

Leave a Reply

Your email address will not be published. Required fields are marked *

7 − five =