Breaking News

ಮಕ್ಕಳ ವ್ಯಕ್ತಿತ್ವ ನಿರ್ಮಾಣ ಮಾಡುವಲ್ಲಿ ತಂದೆ-ತಾಯಿಗಳಷ್ಟೇ ಶಿಕ್ಷಕರ ಪಾತ್ರವು ಮಹತ್ವದ್ದಾಗಿದೆ- ಗಜಾನನ ಮನ್ನಿಕೇರಿ.!

Spread the love

ಮಕ್ಕಳ ವ್ಯಕ್ತಿತ್ವ ನಿರ್ಮಾಣ ಮಾಡುವಲ್ಲಿ ತಂದೆ-ತಾಯಿಗಳಷ್ಟೇ ಶಿಕ್ಷಕರ ಪಾತ್ರವು ಮಹತ್ವದ್ದಾಗಿದೆ- ಗಜಾನನ ಮನ್ನಿಕೇರಿ.!


ಗೋಕಾಕ: ಮಕ್ಕಳ ವ್ಯಕ್ತಿತ್ವ ನಿರ್ಮಾಣ ಮಾಡುವಲ್ಲಿ ತಂದೆ-ತಾಯಿಗಳಷ್ಟೇ ಶಿಕ್ಷಕರ ಪಾತ್ರವು ಮಹತ್ವದ್ದಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ಸಹ ನಿರ್ದೇಶಕ ಗಜಾನನ ಮನ್ನಿಕೇರಿ ಹೇಳಿದರು.
ಅವರು, ರವಿವಾರದಂದು ನಗರದ ಲಕ್ಷಿö್ಮÃ ಏಜ್ಯುಕೇಶನ ಟ್ರಸ್ಟನ ವಿವಿಧ ಅಂಗ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಶಿಕ್ಷಕ ದಿನಾಚರಣೆಯ ಸಮಾರಂಭದಲ್ಲಿ ಮುಖ್ಯಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತಿದ್ದರು.
ಶಿಕ್ಷಕರು ಯೋಗ್ಯ ನಾಗರಿಕರನ್ನು ನಿರ್ಮಾಣ ಮಾಡಿ ದೇಶ ಕಟ್ಟುವ ಶಿಲ್ಪಿಗಳಾಗಿದ್ದಾರೆ. ಶಿಕ್ಷಕ ವೃತ್ತಿಯಿಂದ ಉನ್ನತ ಹುದ್ದೆಗಳಾದ ಉಪರಾಷ್ಟçಪತಿ, ರಾಷ್ಟçಪತಿ ಸ್ಥಾನಗಳನ್ನು ಅಲಂಕರಿಸಿ, ದೇಶ ವಿದೇಶಗಳಲ್ಲಿ ಪ್ರಖ್ಯಾತರಾದ ಸರ್ವಪಲ್ಲೆ ಡಾ.ರಾಧಾ ಕೃಷ್ಣನ್ ಅವರ ಆಶಯದಂತೆ ಈ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಅವರ ಆದರ್ಶಗಳನ್ನು ಶಿಕ್ಷಕರು ಅಳವಡಿಸಿಕೊಳ್ಳಬೇಕು. ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರ ನೀಡಿ ಜೀವನವನ್ನು ಕಲಿಸಬೇಕು. ಸರಕಾರ ಹಾಗೂ ಸಂಸ್ಥೆಗಳು ಶೈಕ್ಷಣಿಕವಾಗಿ ಸಹಕಾರ ನೀಡುತ್ತಿದ್ದು ಇವುಗಳ ಸಹಕಾರದಿಂದ ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳಿಸಿ ಶಿಕ್ಷಕ ವೃತ್ತಿ ಮಹತ್ವ ಹೆಚ್ಚಿಸಿಕೊಳ್ಳುವಂತೆ ಹೇಳಿದ ಅವರು, ಈ ಸಂಸ್ಥೆ ಕೆಜಿಯಿಂದ ಪಿಜಿಯ ವರೆಗೂ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಿ ಈ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸುತ್ತಿದೆ. ತಾಲೂಕಿಗೆ ಜಾರಕಿಹೊಳಿ ಕುಟುಂಬ ಶೈಕ್ಷಣಿಕವಾಗಿ ನೀಡಿದ ಕೊಡುಗೆ ಅಪಾರವಾಗಿದೆ ಎಂದು ಶ್ಲಾಘಿಸಿದರು.
ಸಮಾರಂಭವನ್ನು ಸಂಸ್ಥೆಯ ಉಪಾಧ್ಯಕ್ಷೆ ಶ್ರೀಮತಿ ಸುವರ್ಣ ಭೀಮಶಿ ಜಾರಕಿಹೊಳಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ವಹಿಸಿದ್ದರು.
ವೇದಿಕೆಯ ಮೇಲೆ ಆಡಳಿತಾಧಿಕಾರಿ ಬಿ ಕೆ ಕುಲಕರ್ಣಿ, ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರುಗಳಾದ ಡಾ.ಎ ಬಿ ಪಾಟೀಲ, ಡಾ.ಜಿ ಆರ್ ನಿಡೋಣಿ, ಡಾ.ಐ ಎಸ್ ಪವಾರ, ಅರುಣ ಪೂಜೇರ, ಎಚ್ ಎಸ್ ಅಡಿಬಟ್ಟಿ, ಎ ಎಮ್ ಸರಕಾವಸ, ಪಿ ವಿ ಚಚಡಿ ಇದ್ದರು.
ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರು ಹಾಗೂ ಕ್ರೀಯಾಶೀಲ ಶಿಕ್ಷಕರು ಮತ್ತು ಸಿಬ್ಬಂಧಿಗಳನ್ನು ಸತ್ಕರಿಸಲಾಯಿತು.


Spread the love

About Yuva Bharatha

Check Also

ಮೋದಿಯವರ ಹುಟ್ಟು ಹಬ್ಬದ ನಿಮಿತ್ಯ ಹಮ್ಮಿಕೊಂಡ ಬೃಹತ್ ರಕ್ತದಾನ ಶಿಭಿರದಲ್ಲಿ ಯುವನಾಯಕ ಅಮರನಾಥ ಜಾರಕಿಹೊಳಿ ಅವರಿಂದ ರಕ್ತದಾನ.!

Spread the loveಮೋದಿಯವರ ಹುಟ್ಟು ಹಬ್ಬದ ನಿಮಿತ್ಯ ಹಮ್ಮಿಕೊಂಡ ಬೃಹತ್ ರಕ್ತದಾನ ಶಿಭಿರದಲ್ಲಿ ಯುವನಾಯಕ ಅಮರನಾಥ ಜಾರಕಿಹೊಳಿ ಅವರಿಂದ ರಕ್ತದಾನ.! …

Leave a Reply

Your email address will not be published. Required fields are marked *

eight + 16 =