ಧಾರ್ಮಿಕ ಕಾರ್ಯಕ್ರಮಗಳು ಸಂತಸ ವೃದ್ಧಿsಸಿ, ಸಂಸ್ಕೃತಿ ಉಳಿಸುವಲ್ಲಿ ಸಹಕಾರಿಯಾಗಿವೆ-ಜಯಾನಂದ ಹುಣಚ್ಯಾಳ.!
ಗೋಕಾಕ: ಆಧುನಿಕತೆಯ ಅಬ್ಬರದ ಮಧ್ಯೆಯೂ ನಡೆಯುವ ಜಾತ್ರೆ, ಮಹಾತ್ಮರ ಜಯಂತಿಗಳು ಸೇರಿದಂತೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ಸಂತಸ ವೃದ್ಧಿಸಿ, ಸಂಸ್ಕೃತಿ ಉಳಿಸುವಲ್ಲಿ ಸಹಕಾರಿಯಾಗಿವೆ ಎಂದು ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ ಹೇಳಿದರು.
ಅವರು, ನಗರದ ನಗರಸಭೆ ಸಮುದಾಯ ಭವನದಲ್ಲಿ ಇಸ್ಕಾನ ಸಂತ್ಸAಗ ಸಮೀತಿ ಗೋಕಾಕ ಇವರ ಸಹಯೋಗದಲ್ಲಿ ಜರುಗಿದ ಶ್ರೀ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಪ್ರತಿಯೊಬ್ಬರೂ ಮಾನವ ಧರ್ಮದ ನೆಲೆಗಟ್ಟಿನ ಮೇಲೆ ಬದುಕು ಸಾಗಿಸುತ್ತಿದ್ದಾರೆ. ಜನರ ಭಾವನೆಗಳಿಗೆ ಅನುಸಾರವಾಗಿ ಹುಟ್ಟಿಕೊಂಡಿರುವ ಎಲ್ಲ ಜಾತಿಗಳು ಧರ್ಮ ಬೋಧನೆ ನಡೆಸುತ್ತಿವೆ. ವಿವಿಧ ಧರ್ಮಗಳು ನಾಡಿನಲ್ಲಿದ್ದರೂ ಕೊನೆಗೆ ಐಕ್ಯಸ್ಥಾನ ಮಾತ್ರ ಒಂದೇ ಆಗಿದೆ. ನೊಂದ ಜೀವಗಳನ್ನು ಹಸನು ಮಾಡುವ ಶಕ್ತಿಯುಳ್ಳ ನಮ್ಮ ಸಂಸ್ಕೃತಿ ಅರ್ಥೈಸಿಕೊಳ್ಳಲು ವಿದೇಶಿಗರು ಒಲವು ತೋರುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.
ಬೆಳಗಾವಿಯ ಇಸ್ಕಾನ ಬ್ರಹ್ಮಚಾರಿಗಳಾದ ಶ್ರೀ ಹರಿರಾಮ ಪ್ರಭುಜಿ ಆಶೀರ್ವಚನ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ನಾಗೇಂದ್ರ ಪ್ರಭುಜಿ, ಕಮಕೇರಿ ಗುರುಕುಲದ ಶ್ರೀ ಗೋಪೇಶ್ವರ ಪ್ರಭುಜಿ, ಗೋ ಶಾಲಾ ಪ್ರಮುಖ ಸದಾಶಿವ ಮಹಾಂತನವರ, ಮುಖಂಡರಾದ ದುರ್ಗಪ್ಪ ಶಾಸ್ತಿçಗೊಲ್ಲರ, ಯಲ್ಲಪ್ಪ ಹಳ್ಳೂರ, ವಿಶ್ವನಾಥ ಬಿಳ್ಳೂರ, ಬಾಬು ಮುಳಗುಂದ ಸೇರಿದಂತೆ ಅನೇಕರು ಇದ್ದರು.