Breaking News

ಶೈಕ್ಷಣಿಕ ಪ್ರಗತಿಯಲ್ಲಿ ಅಡುಗೆ ಸಿಬ್ಬಂದಿಗಳ ಪಾತ್ರವೂ ಸಹ ಬಹುಮುಖ್ಯವಾಗಿದೆ- ಜಿಪಂ ಮಾಜಿ ಸದಸ್ಯ ಟಿ.ಆರ್.ಕಾಗಲ.!

Spread the love

ಶೈಕ್ಷಣಿಕ ಪ್ರಗತಿಯಲ್ಲಿ ಅಡುಗೆ ಸಿಬ್ಬಂದಿಗಳ ಪಾತ್ರವೂ ಸಹ ಬಹುಮುಖ್ಯವಾಗಿದೆ- ಜಿಪಂ ಮಾಜಿ ಸದಸ್ಯ ಟಿ.ಆರ್.ಕಾಗಲ.!


ಗೋಕಾಕ: ಶೈಕ್ಷಣಿಕ ಪ್ರಗತಿಯಲ್ಲಿ ಅಡುಗೆ ಸಿಬ್ಬಂದಿಗಳ ಪಾತ್ರವೂ ಸಹ ಬಹುಮುಖ್ಯವಾಗಿದೆ ಎಂದು ಜಿಪಂ ಮಾಜಿ ಸದಸ್ಯ ಟಿ.ಆರ್.ಕಾಗಲ ಹೇಳಿದರು.
ರವಿವಾರದಂದು ನಗಯದ ಶ್ರೀ ಲಕ್ಷ್ಮೀ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಬೆಳಗಾವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚಿಕ್ಕೋಡಿ, ಪಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ (ಎಮ್ ಡಿ.ಎಮ್) ಹಾಗೂ ತಾಲೂಕು ಪಂಚಾಯತ್ ಗೋಕಾಕ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಅಡುಗೆ ಸಿಬ್ಬಂದಿಗಳ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಗೋಕಾಕ ವಲಯ ಚಿಕ್ಕೋಡಿ ಶೈಕ್ಷಣಿಕ ವಲಯದಲ್ಲಿ ತನ್ನದೇ ಆದ ಛಾಪು ಹೊಂದಿದೆ. ಸಿಬ್ಬಂದಿಗಳು ತಮ್ಮ ಇಚ್ಚಾಶಕ್ತಿಯನ್ನು ಪ್ರದರ್ಶಿಸಿ ಕಾರ್ಯಮಾಡಿ ಸರಕಾರದ, ಗ್ರಾಮ ಪಂಚಾಯಿತಿ, ಎಸ್.ಡಿ.ಎಂ.ಸಿ ಸದಸ್ಯರ ಹಾಗೂ ಶಾಲೆಯ ಇತರ ಸಿಬ್ಬಂದಿಗಳ ಸಹಕಾರ ಮತ್ತು ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ಉತ್ತಮ ಅಡುಗೆ ಮಾಡಿ ಮಕ್ಕಳಿಗೆ ಉಣಬಡಿಸುವ ಅಡುಗೆ ಸಿಬ್ಬಂದಿಗಳು ಅನ್ನಪೂರ್ಣೇಶ್ವರಿಯಾಗಿ ಕಾರ್ಯ ಮಾಡುತ್ತಿದ್ದಾರೆ. ಸರಕಾರಿ ಶಾಲೆಗಳೆಂದರೆ ದಶಕದ ಹಿಂದೆ ಅಸೂಯೆ ಪಡುವ ಪರಿಸ್ಥಿತಿ ಇತ್ತು ಆದರೆ ಶಾಸಕ ರಮೇಶ ಜಾರಕಿಹೊಳಿ ಅವರ ಪ್ರಯತ್ನದಿಂದ ಗೋಕಾಕ ವಲಯ ಈಗ ಶೈಕ್ಷಣಿಕವಾಗಿ ಪ್ರಗತಿ ಹೊಂದಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಹ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ ಕಾರ್ಯನಿರ್ವಸುತ್ತಿದೆ. ಅಡುಗೆ ಸಿಬ್ಬಂದಿಗಳು ಸಹ ಸಹಕಾರ ನೀಡಿ ಶಾಸಕರಿಗೆ ಬೆನ್ನಲುಬಾಗಿ ಕಾರ್ಯನಿರ್ವಹಿಸಬೇಕು ಎಂದು ವಿನಂತಿಸಿದ ಅವರು ರುಚಿಕರವಾದ ಅಡುಗೆ ಮಾಡುವ ಜೊತೆಗೆ ಸುರಕ್ಷತೆ ಕಡೆಗೆ ಹೆಚ್ಚಿನ ಗಮನವನ್ನು ಹರಿಸಿ ಯಾವುದೇ ಅನಾಹುತಗಳಾಗಂತೆ ನಿಘಾವಹಿಸಿ ಕಾರ್ಯಮಾಡಬೇಕು ಎಂದು ಹೇಳಿದರು.


ತರಬೇತಿ ಕಾರ್ಯಾಗಾರವನ್ನು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರ ವತಿಯಿಂದ ಅಡುಗೆ ಸಿಬ್ಬಂದಿಗಳಿಗೆ ಸಿರೆಗಳನ್ನು ಉಡುಗೊರೆಯನ್ನಾಗಿ ವಿತರಿಸಲಾಯಿತು.
ಅಗ್ನಿಶಾಮಕ ದಳ ಮತ್ತು ಮಲ್ಲಿಕಾರ್ಜುನ ಗ್ಯಾಸ್ ಏಜೆನ್ಸಿ ಸಿಬ್ಬಂದಿಗಳು ಅಡುಗೆ ಸಿಬ್ಬಂದಿಗಳಿಗೆ ಆಕಸ್ಮಿಕ ಅಗ್ನಿ ಅವಘಡ ತಪ್ಪಿಸಲು ಅಗ್ನಿ ನಿಂದಿಸುವ ಪ್ರಾತ್ಯಕ್ಷಿಕೆ ತೋರಿಸಿದರು.
ವೇದಿಕೆಯಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣ್ಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಪೌರಾಯುಕ್ತ ಶಿವಾನಂದ ಹಿರೇಮಠ, ಮಧ್ಯಾಹ್ನ ಬಿಸಿಯೂಟ ಸಹಾಯಕ ನಿರ್ದೇಶಕ ಎ.ಬಿ ಮಲಬನ್ನವರ, ಜಿಪಂ ಮಾಜಿ ಸದಸ್ಯ ಮಡೆಪ್ಪ ತೋಳಿನವರ, ಎಂ ಡಿ ಚುನಮರಿ, ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಲೋಕನ್ನವರ, ಅಗ್ನಿಶಾಮಕ ದಳದ ಎಂ ಎಂ ಮೆಳವಂಕಿ, ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ, ದೈಹಿಕ ಪರಿವಿಕ್ಷೀಕ ವಾಯ್. ಬಿ.ತೋರಣಗಟ್ಟಿ, ಸಂಪನ್ಮೂಲ ವ್ಯಕ್ತಿ ಎಂ.ಬಿ.ಪಾಟೀಲ ಪ್ರಾಥಮಿಕ, ಪ್ರೌಢಶಾಲೆಯ ವಿವಿಧ ಸಂಘಗಳ ಮುಖ್ಯಸ್ಥರು ಉಪಸ್ಥಿತರಿದ್ದರು.


Spread the love

About Yuva Bharatha

Check Also

ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾರಾಗಿ, ಅಧಿಕಾರಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಕರೆ.!

Spread the loveಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾರಾಗಿ, ಅಧಿಕಾರಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಕರೆ.! ಗೋಕಾಕ: ಅಧಿಕಾರಿಗಳು ನದಿ ತೀರದ …

Leave a Reply

Your email address will not be published. Required fields are marked *

twenty − 4 =