Breaking News

ರೈತರು ಸರಕಾರದ ಸೌಲಭ್ಯ ಪಡೆದು ಪ್ರಗತಿ ಸಾಧಿಸಿ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!

Spread the love

ರೈತರು ಸರಕಾರದ ಸೌಲಭ್ಯ ಪಡೆದು ಪ್ರಗತಿ ಸಾಧಿಸಿ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!


ಗೋಕಾಕ: ರೈತರ ಅಭಿವೃದ್ಧಿಗಾಗಿ ಸರಕಾರ ನೀಡುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ರೈತರು ಆರ್ಥಿಕವಾಗಿ ಪ್ರಗತಿ ಸಾಧಿಸುವಂತೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು.
ಅವರು, ಶುಕ್ರವಾರದಂದು ನಗರದ ಶಾಸಕ ರಮೇಶ ಜಾರಕಿಹೊಳಿ ಅವರ ಕಾರ್ಯಾಲಯದ ಆವರಣದಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದಿಂದ ಗೋಕಾಕ ಮತಕ್ಷೇತ್ರದ 20 ಫಲಾನುಭವಿಗಳಿಗೆ ಪಂಪ್ ಸೇಟ್‌ಗಳನ್ನು ವಿತರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ಜಿಪಂ ಮಾಜಿ ಸದಸ್ಯ ಮಡ್ಡೆಪ್ಪ ತೋಳಿನವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಬಿಜೆಪಿ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ಸುರೇಶ ಸನದಿ, ಪುಂಡಲೀಕ ವಣ್ಣೂರ ಸೇರಿದಂತೆ ಅನೇಕರು ಇದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

14 − six =