Breaking News

ಕನ್ನಡ ನೆಲ, ಜಲ, ಭಾಷೆ ಸಮಸ್ಯೆಗಳು ಎದುರಾದಾಗ ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡಿ ಕನ್ನಡತನವನ್ನು ಮೆರೆಯಬೇಕಾಗಿದೆ.- ಬಾಲಚಂದ್ರ ಜಾರಕಿಹೊಳಿ.!

Spread the love

ಕನ್ನಡ ನೆಲ, ಜಲ, ಭಾಷೆ ಸಮಸ್ಯೆಗಳು ಎದುರಾದಾಗ ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡಿ ಕನ್ನಡತನವನ್ನು ಮೆರೆಯಬೇಕಾಗಿದೆ.- ಬಾಲಚಂದ್ರ ಜಾರಕಿಹೊಳಿ.!


ಗೋಕಾಕ(ಡಾ.ಬೆಟಗೇರಿ ಕೃಷ್ಣಶರ್ಮ ವೇದಿಕೆ, ಬೆಟಗೇರಿ): ಬೆಳಗಾವಿ ಎಂದೆAದಿಗೂ ನಮ್ಮದೇ. ಗಡಿ ವಿವಾದ ಮುಗಿದ ಅಧ್ಯಾಯ. ಗಡಿ ವಿಷಯದಲ್ಲಿ ಪ್ರತಿ ಚುನಾವಣೆ ಬಂದಾಗೊಮ್ಮೆ ಅನಾವಶ್ಯಕವಾಗಿ ಗಡಿ ಖ್ಯಾತೆ ತೆಗೆಯುತ್ತಿರುವವರಿಗೆ ಕನ್ನಡಿಗರಾದ ನಾವು ತಕ್ಕ ಉತ್ತರ ನೀಡುತ್ತಿದ್ದೇವೆ. ಕನ್ನಡ ನೆಲ, ಜಲ, ಭಾಷೆ ಸಮಸ್ಯೆಗಳು ಎದುರಾದಾಗ ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡಿ ಕನ್ನಡತನವನ್ನು ಮೆರೆಯಬೇಕಾಗಿದೆ ಎಂದು ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಶನಿವಾರದಂದು ತಾಲೂಕಿನ ಬೆಟಗೇರಿ ಗ್ರಾಮದ ವಿ.ವಿ. ದೇಯನ್ನವರ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ಜರುಗಿದ ಗೋಕಾಕ ತಾಲೂಕಾ ೬ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ಗಡಿ ವಿಷಯದಲ್ಲಿ ಮಹಾಜನ ವರದಿಯೇ ಅಂತಿಮವಾಗಿದೆ. ಈ ವಿಷಯದಲ್ಲಿ ಕೆಲವರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದಕ್ಕೋಸ್ಕರ ಬೆಳಗಾವಿ ನಮ್ಮದೆಂದು ವಾದಿಸುತ್ತಿದ್ದಾರೆ. ನಮ್ಮ ನೆಲವನ್ನು ಒಂದಿAಚೂ ಯಾರಿಗೂ ಬಿಟ್ಟು ಕೊಡುವುದಿಲ್ಲ ಎಂದು ಅವರು ಹೇಳಿದರು.
ಇಡೀ ದೇಶದಲ್ಲಿಯೇ ನಮ್ಮ ಕನ್ನಡ ಭಾಷೆ ಅತ್ಯಂತ ಸುಂದರ ಹಾಗೂ ಸರಳ ಭಾಷೆಯಾಗಿದೆ. ಕನ್ನಡ ನೆಲದಲ್ಲಿ ಹುಟ್ಟಿರುವವರು ನಾವೆಲ್ಲರೂ ಪುಣ್ಯವಂತರು. ಕನ್ನಡ ನಾಡು-ನುಡಿ, ನೆಲ-ಜಲ, ವಿಷಯಗಳಿಗೆ ಕಟಿಬದ್ಧರಾಗಿ ನಾವೆಲ್ಲರೂ ಹೋರಾಟ ಮಾಡಬೇಕಿದೆ. ಕನ್ನಡ ಭಾಷೆಯನ್ನು ಎಲ್ಲರೂ ಪ್ರೀತಿಸೋಣ. ಅದರಂತೆ ಬೇರೆ ಭಾಷೆಗಳ ಬಗ್ಗೆ ಗೌರವ ಇಟ್ಟುಕೊಳ್ಳೋಣ. ಕನ್ನಡ ಭಾಷೆಗೆ ಈಗಾಗಲೇ ೮ ಜ್ಞಾನಪೀಠ ಪ್ರಶಸ್ತಿಗಳು ದೊರಕಿರುವುದು ಈ ನೆಲದ ಪುಣ್ಯ. ಆದ್ದರಿಂದ ಕಡ್ಡಾಯವಾಗಿ ಎಲ್ಲರೂ ಮಾತೃ ಭಾಷೆ ಕನ್ನಡ ಮಾಧ್ಯಮದಲ್ಲಿಯೇ ತಮ್ಮ ಮಕ್ಕಳಿಗೆ ಶಿಕ್ಷಣ ನೀಡುವಂತೆ ಅವರು ಕೋರಿದರು.
ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಪ್ರಥಮ ಪ್ರಾಶಸ್ತö್ಯ ನೀಡುತ್ತಿದ್ದೇವೆ. ಶಿಕ್ಷಣದ ಸಮಗ್ರ ಬದಲಾವಣೆಯೇ ನಮ್ಮ ಪ್ರಮುಖ ಅಸ್ತçವಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಬೆಟಗೇರಿ ಸೇರಿದಂತೆ ಮೂಡಲಗಿ, ಖಾನಟ್ಟಿ, ಕುಲಗೋಡ ಗ್ರಾಮಗಳಲ್ಲಿ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯಗಳನ್ನು ಆರಂಭಿಸಲು ಈಗಾಗಲೇ ಸರ್ಕಾರ ಅನುಮತಿ ನೀಡಿದೆ. ಅದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಅವರು ಹೇಳಿದರು.
ಕನ್ನಡ ಕಸ್ತೂರಿ ಭಾಷೆ. ಇದಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಮಕ್ಕಳಿಗೆ ಕಡ್ಡಾಯವಾಗಿ ಕನ್ನಡ ಮಾಧ್ಯಮದಲ್ಲಿಯೇ ಶಿಕ್ಷಣ ನೀಡಬೇಕೆಂಬುದು ಸರ್ಕಾರದ ಆಶಯವಾಗಿದೆ. ಈ ದಿಸೆಯಲ್ಲಿ ನಮ್ಮ ವಲಯದಲ್ಲಿ ಸುಮಾರು ೫೦ ಸಾವಿರ ಮಕ್ಕಳು ಸರ್ಕಾರಿ ಕನ್ನಡ ಶಾಲೆಗಳಲ್ಲಿ ಕಲಿಯುತ್ತಿದ್ದಾರೆ ಎಂದು ಹೇಳಿದ ಅವರು, ಮೂಡಲಗಿ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜನೇವರಿ ತಿಂಗಳಲ್ಲಿ ಏರ್ಪಡಿಸಲು ಈಗಾಗಲೇ ನಿಶ್ಚಯ ಮಾಡಲಾಗಿದೆ ಎಂದು ತಿಳಿಸಿದರು.


ಸಮ್ಮೇಳನದ ದಿವ್ಯ ಸಾನಿಧ್ಯವನ್ನು ಗೋಕಾಕದ ಮುರುಘರಾಜೇಂದ್ರ ಮಹಾಸ್ವಾಮಿಗಳು ಹಾಗೂ ಸುಣಧೋಳಿಯ ಶಿವಾನಂದ ಮಹಾಸ್ವಾಮಿಗಳು ವಹಿಸಿದ್ದರು.
ನಿಕಟಪೂರ್ವ ಸರ್ವಾಧ್ಯಕ್ಷ ಡಾ.ಸಿ.ಕೆ. ನಾವಲಗಿ ಅವರು ೬ನೇ ಸಮ್ಮೇಳನಾಧ್ಯಕ್ಷ ಈಶ್ವರಚಂದ್ರ ಬೆಟಗೇರಿ ಅವರಿಗೆ ಧ್ವಜ ಹಸ್ತಾಂತರಿಸಿದರು.
ವೇದಿಕೆಯಲ್ಲಿ ಗೋಕಾಕ ತಾಲೂಕು ಕಸಾಪ ಅಧ್ಯಕ್ಷೆ ಭಾರತಿ ಮದಭಾವಿ, ನಿಕಟಪೂರ್ವ ಕಸಾಪ ಅಧ್ಯಕ್ಷ ಮಹಾಂತೇಶ ತಾಂವಶಿ, ಗೋಕಾಕ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಬೆಟಗೇರಿ ಗ್ರಾಪಂ ಅಧ್ಯಕ್ಷೆ ಸಾಂವಕ್ಕಾ ಬಾನಸಿ, ಉಪಾಧ್ಯಕ್ಷ ಶಿವನಪ್ಪ ಮಾಳೇದ, ಮಾಜಿ ಗ್ರಾಪಂ ಅಧ್ಯಕ್ಷರಾದ ಬಸವಂತ ಕೋಣಿ, ಪರಮಾನಂದ ಕೋಣಿ, ಲಕ್ಷö್ಮಣ ಚಂದರಗಿ, ಕೆಎಲ್‌ಇ ನಿರ್ದೇಶಕ ಜಯಾನಂದ ಮುನವಳ್ಳಿ, ಶ್ಯಾಮಾನಂದ ಪೂಜೇರಿ, ಪ.ಪೂ. ಶಿಕ್ಷಣ ಇಲಾಖೆಯ ನಿವೃತ್ತ ಉಪನಿರ್ದೇಶಕ ಈರಪ್ಪ ದೇಯನ್ನವರ, ತಾಪಂ ಮಾಜಿ ಸದಸ್ಯ ಲಕ್ಷö್ಮಣ ನೀಲನ್ನವರ, ನ್ಯಾಯವಾದಿ ಎಂ.ಐ. ನೀಲನ್ನವರ, ಈರಯ್ಯ ಹಿರೇಮಠ, ಎಸ್‌ಡಿಎಂಸಿ ಅಧ್ಯಕ್ಷ ಕುತುಬುದ್ದಿನ ಮಿರ್ಜಾನಾಯ್ಕ, ಸಾಹಿತಿಗಳಾದ ಪ್ರೋ. ಚಂದ್ರಶೇಖರ ಅಕ್ಕಿ, ಮಹಾಲಿಂಗ ಮಂಗಿ, ತಾಪಂ ಇಓ ಮುರಳೀಧರ ದೇಶಪಾಂಡೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅಜೀತ ಮನ್ನಿಕೇರಿ, ಜಿ.ಬಿ. ಬಳಗಾರ, ಕನ್ನಡ ಪರ ಸಂಘಟನೆಗಳ ಮುಖಂಡರು, ವಿವಿಧ ತಾಲೂಕು ಘಟಕಗಳ ಕಸಾಪ ಅಧ್ಯಕ್ಷರುಗಳು, ಗೋಕಾಕ ಕಸಾಪದ ಸುರೇಶ ಮುದ್ದಾರ, ಡಾ.ಮಹಾನಂದಾ ಪಾಟೀಲ, ಆರ್.ಎಲ್. ಮಿರ್ಜಿ, ಶಕುಂತಲಾ ಹಿರೇಮಠ, ರಾಜಶ್ರೀ ತೋಟಗಿ, ಎ.ಬಿ. ಚೌಗಲಾ, ಬಸವರಾಜ ಮುರಗೋಡ, ಶೈಲಾ ಕೊಕ್ಕರಿ, ಲಕ್ಷö್ಮಣ ಸೊಂಟಕ್ಕಿ, ರಾಜೇಶ್ವರಿ ಕಳಸದ, ಜಿ.ಆರ್. ಸನದಿ, ಅಡಿವೆಪ್ಪ ಭಜಂತ್ರಿ, ಬೆಟಗೇರಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಪ್ರಮುಖರು, ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲಾ ಕಸಾಪ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಹಾಗೂ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಅವರು ಮಾತನಾಡಿದರು.
ಬೆಟಗೇರಿ(ಡಾ.ಬೆಟಗೇರಿ ಕೃಷ್ಣಶರ್ಮ ವೇದಿಕೆ): ಕಡ್ಡಾಯವಾಗಿ ನಮ್ಮ ಶಿಕ್ಷಣ ಕ್ರಮವು ಮಾತೃ ಭಾಷೆಯಾದ ಕನ್ನಡದಲ್ಲಿಯೇ ಆಗಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಉದ್ಯೋಗ ನೇಮಕಾತಿ ಅರ್ಹತಾ ಪರೀಕ್ಷೆಗಳು ಕನ್ನಡ ಭಾಷೆಯಲ್ಲಿಯೇ ನಡೆಸುವಂತಾಗಬೇಕು ಎಂದು ೬ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಈಶ್ವರಚಂದ್ರ ಬೆಟಗೇರಿ ಅವರು ಸರ್ಕಾರವನ್ನು ಒತ್ತಾಯಿಸಿದರು.
ಬೆಟಗೇರಿಯಲ್ಲಿ ನಡೆಯುತ್ತಿರುವ ಗೋಕಾಕ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ನಾಡಿನಲ್ಲಿ ಗ್ರಾಮೀಣ ಕಲೆಗಳ ಕಲಿಕಾ ಕೇಂದ್ರ ಗುರುಕುಲ ಶೀಘ್ರ ಪ್ರಾರಂಭವಾಗಬೇಕು. ಸಾಹಿತಿ ದಿಗ್ಗಜ ಡಾ.ಬೆಟಗೇರಿ ಕೃಷ್ಣಶರ್ಮ ಅವರ ಸ್ಮಾರಕ ಭವನವನ್ನು ಭವ್ಯವಾಗಿ ನಿರ್ಮಾಣ ಮಾಡುವಂತೆ ಸರ್ಕಾರವನ್ನು ಕೋರಿದರು.
ಗೋಕಾವಿ ಪರಿಸರದ ಶ್ರೇಷ್ಠ ಸಾಹಿತಿಗಳು, ಕವಿಗಳು, ಕಲಾವಿಧರ ಹೆಸರುಗಳನ್ನು ನಗರದ ಮುಖ್ಯ ಬೀದಿ, ವೃತ್ತಗಳಿಗೆ ನಾಮಕರಣ ಮಾಡುವುದಾಗಬೇಕು. ಯಕ್ಷಗಾಣಕ್ಕೆ ಸೀಮಿತವಾದಂತೆ ಪ್ರತಿಷ್ಠಿತ ಸಾಧನೆಗೆ ಪಾರ್ತಿಸುಬ್ಬ ಹೆಸರಿನ ರಾಜ್ಯ ಪ್ರಶಸ್ತಿ ನೀಡುವಂತೆಯೇ ಉತ್ತರ ಕರ್ನಾಟಕದ ಬೈಲಾಟ ಕಲೆಗಳ ಹಿರಿಯ ಸಾಧಕರಿಗೆ ಪಾರಿಜಾತ ಪಿತಾಮಹ ಕುಲಗೋಡ ತಮ್ಮಣ್ಣ ಹಾಗೂ ಕೌಜಲಗಿ ನಿಂಗಮ್ಮ ಅವರ ಹೆಸರಿನಲ್ಲಿ ಪ್ರತಿಷ್ಠಿತ ರಾಜ್ಯ ಪ್ರಶಸ್ತಿಗಳನ್ನು ನೀಡುವಂತೆ ಬೆಟಗೇರಿಯವರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡರು.
ಗೋಕಾವಿ ಪರಿಸರವು ಸಾಹಿತಿಗಳ ಸ್ವರ್ಗ. ಕಲಾವಿಧರ ನೆಲೆವಿಡು. ಸಂಸ್ಕೃತಿ ವಿದ್ವತ್ ಪರಂಪರೆಗೆ ಸಾಕ್ಷಿಯಾಗಿದೆ. ಸ್ವಾತಂತ್ರö್ಯ ಹೋರಾಟಕ್ಕೆ ಕುಂದರನಾಡಿನ ಕೊಡುಗೆ ಅಪಾರವಾಗಿದೆ. ಪಂಚ ಪುಣ್ಯ ಧರ್ಮ ಪೀಠಗಳ ಸಂಗಮ ತಾಣವಾಗಿದೆ. ಸುಂದರ ನಿಸರ್ಗ ರಮಣೀಯ ಪಶು ಪಕ್ಷಿಗಳ ಪರಂಧಾಮ. ಗೋಕಾವಿ ನಾಡಿನ ಭೌಗೋಳಿಕ, ಐತಿಹಾಸಿಕ ಹಿನ್ನೆಲೆ ಅಪಾರವಾಗಿದೆ. ಗೋಕಾವಿ ನಾಡು ಸುಂದರ ನೈಸರ್ಗಿಕ ಪರಿಸರದಲ್ಲಿ ನೆಲೆಗೊಂಡಿದ್ದು, ಗೋಕಾಕ ಸ್ವತಂತ್ರ ಜಿಲ್ಲೆಯಾಗುವ ಎಲ್ಲ ಅರ್ಹತೆಗಳನ್ನು ಪಡೆದುಕೊಂಡಿದೆ ಎಂದು ಸರ್ವಾಧ್ಯಕ್ಷ ಈಶ್ವರಚಂದ್ರ ಬೆಟಗೇರಿ ಅವರು ಅಭಿಪ್ರಾಯ ಪಟ್ಟರು.


Spread the love

About Yuva Bharatha

Check Also

ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ ಪರಮ ಪೀಠಾಚಾರ್ಯರಾದ ಶ್ರೀ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರರ ಸಾನ್ನಿಧ್ಯದಲ್ಲಿ ಜಾತ್ರಾ ಮಹೋತ್ಸವ

Spread the loveಸಾಮಾಜಿಕ ಸೌಹಾರ್ದತೆ ಸಾರುವ ಶ್ರೀ ಉಜ್ಜಯಿನಿ ಮರುಳಸಿದ್ಧೇಶ್ವರ ಜಾತ್ರಾ ಮಹೋತ್ಸವ.! ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ …

Leave a Reply

Your email address will not be published. Required fields are marked *

nine + 16 =