ಡಾ.ಅಪ್ಪಾಸಾಹೇಬ್ ನಾಯ್ಕಲ್‌ಗೆ ಉತ್ತಮ ಗ್ರಂಥಪಾಲಕ ರಾಜ್ಯಪ್ರಶಸ್ತಿ ಪ್ರದಾನ
ಬೆಳಗಾವಿ: ಸಾರ್ವಜನಿಕ ಗ್ರಂಥಾಲಯ ಇಲಾಖೆಯು ಭಾರತ ಗ್ರಂಥಾಲಯ ವಿಜ್ಞಾನ ಪಿತಾಮಹರಾದ ಪದ್ಮಶ್ರೀ ಡಾ.ಎಸ್.ಆರ್.ರಂಗನಾಥನ್ ಅವರ ೧೩೧ನೇ ಜನ್ಮ ದಿನಾಚರಣೆ ಅಂಗವಾಗಿ ಶನಿವಾರ ಬೆಂಗಳೂರಿನ ಹಂಪಿನಗರದಲ್ಲಿ ನಡೆದ ಗ್ರಂಥಪಾಲಕರ ದಿನಾಚರಣೆಯಲ್ಲಿ ಗ್ರಂಥಾಲಯ ವಿಜ್ಞಾನಕ್ಕೆ ಮಹತ್ವದ ಕೊಡುಗೆ ಹಾಗೂ ಸಲ್ಲಿಸುತ್ತಿರುವ ಅನುಪಮ ಸೇವೆಯನ್ನು ಗುರುತಿಸಿ ೨೦೨೩ನೇ ಸಾಲಿನ ‘ಉತ್ತಮ ಗ್ರಂಥಪಾಲಕ ರಾಜ್ಯಪ್ರಶಸ್ತಿ’ ಯನ್ನು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜಮೆಂಟ್ ಕೋಜಿಕೋಡ್‌ನ ಮುಖ್ಯ ಗ್ರಂಥಾಲಯಾಧಿಕಾರಿ ಡಾ.ಅಪ್ಪಾಸಾಹೇಬ್ ನಾಯ್ಕಲ್ ಸೇರಿದಂತೆ ಇತರಿಗೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ. ಸತೀಶಕುಮಾರ ಎಸ್.ಹೊಸಮನಿ, ಸಾಹಿತಿ ಶೂದ್ರ ಶ್ರೀನಿವಾಸ್ ಸೇರಿದಂತೆ ಗಣ್ಯರು ಇದ್ದರು.
