Breaking News

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳನ್ನು ವೃದ್ಧಿಸಿಕೊಂಡು ಉತ್ತಮ ನಾಗರಿಕರಾಗಿ-ಸಾಹಿತಿ ಪ್ರೊ.ಚಂದ್ರಶೇಖರ ಅಕ್ಕಿ.!

Spread the love

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳನ್ನು ವೃದ್ಧಿಸಿಕೊಂಡು ಉತ್ತಮ ನಾಗರಿಕರಾಗಿ-ಸಾಹಿತಿ ಪ್ರೊ.ಚಂದ್ರಶೇಖರ ಅಕ್ಕಿ.!

ಗೋಕಾಕ: ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳನ್ನು ವೃದ್ಧಿಸಿಕೊಂಡು ಉತ್ತಮ ನಾಗರಿಕರಾಗಿರೆಂದು ಸಾಹಿತಿ ಪ್ರೊ.ಚಂದ್ರಶೇಖರ ಅಕ್ಕಿ ಹೇಳಿದರು.
ಅವರು, ಗುರುವಾರದಂದು ನಗರದ ಗೋಕಾಕ ಶಿಕ್ಷಣ ಸಂಸ್ಥೆಯ ಜ್ಞಾನ ದೀಪ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತಿದ್ದರು.
ವಿದ್ಯಾರ್ಥಿಗಳು ಸಾಹಿತ್ಯವನ್ನು ಓದಬೇಕು. ಸಾಹಿತ್ಯ ಮನುಷ್ಯನನ್ನು ಪರಿಪೂರ್ಣ ವ್ಯಕ್ತಿಯನ್ನಾಗಿಸಲು ಸಹಕಾರಿಯಾಗುತ್ತದೆ. ಯುವ ಪೀಳಿಗೆ ತಮ್ಮಲ್ಲಿರುವ ಅಘಾದವಾದ ಯುವ ಶಕ್ತಿಯ ಸದುಪಯೋಗದಿಂದ ಸಾಧಕರಾಗಿ ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳುವದರೊಂದಿಗೆ ಉತ್ತಮ ಸಮಾಜ ನಿರ್ಮಿಸುವಂತೆ ಕರೆ ನೀಡಿದರು.
ವೇದಿಕೆ ಮೇಲೆ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ವಿಶ್ವನಾಥ ಕಡಕೋಳ, ಪ್ರಾಚಾರ್ಯ ಆರ್ ಜಿ ಭರಭರಿ, ಉಪನ್ಯಾಸಕರುಗಳಾದ ಗಂಗಾಧರ ಮಳಗಿ, ಐ ಎಮ್ ಸರಕಾರ, ವಿದ್ಯಾರ್ಥಿ ಪ್ರತಿನಿಧಿ ಸ್ಮೀತಲ ಸಾತಪುತೆ ಇದ್ದರು.
ಉಪನ್ಯಾಸಕಿ ಜಯಶ್ರೀ ಕರಿಗಾರ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಮೇಘಾ ನಿರೂಪಿಸಿದರು, ಅನುಷಾ ವಂದಿಸಿದರು.


Spread the love

About Yuva Bharatha

Check Also

ಅಕ್ಕಾ ಅಂದ್ರೆ ಅವರೇ ಅಂತ ಯಾಕೆ ತಿಳ್ಕೊತೀರಿ, ಪೆಗ್ ಅಂದ್ರೆ ಎನರ್ಜಿ ಡ್ರಿಂಕ್-ಮಾಜಿ ಶಾಸಕ ಸಂಜಯ ಪಾಟೀಲ.!

Spread the loveನಾನು ಭಾಷಣದಲ್ಲಿ ಹೆಬ್ಬಾಳಕರ ಹೆಸರನ್ನೆ ತಗೊಂಡಿಲ್ಲ. -ಮಾಜಿ ಶಾಸಕ ಸಂಜಯ ಪಾಟೀಲ.! ಯುವಭಾರತ ಸುದ್ದಿ ಬೆಳಗಾವಿ: ನಾನು …

Leave a Reply

Your email address will not be published. Required fields are marked *

1 × 2 =