Breaking News

ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ದೇಶದ ಆರ್ಥಿಕತೆಯನ್ನು ಗಟ್ಟಿಗೊಳಿಸುವತ್ತ ದಿಟ್ಟ ಹೆಜ್ಜೆ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ದೇಶದ ಆರ್ಥಿಕತೆಯನ್ನು ಗಟ್ಟಿಗೊಳಿಸುವತ್ತ ದಿಟ್ಟ ಹೆಜ್ಜೆ-ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ದೇಶದ ಆರ್ಥಿಕ ರಂಗಕ್ಕೆ ಆಧಾರಸ್ತಂಭವಾಗಿರುವ ಒಟ್ಟು ಆರು ಪ್ರಮುಖ ಅಂಶಗಳ ಮೇಲೆ ಬೆಳಕು ಚೆಲ್ಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಬಣ್ಣಿಸಿದ್ದಾರೆ.
ಕೃಷಿ, ಆರ್ಥಿಕ ಚಟುವಟಿಕೆ, ಪ್ರವಾಸೋದ್ಯಮ, ಸಾರಿಗೆ, ಆರೋಗ್ಯ ಮತ್ತು ವಸತಿ ಕ್ಷೇತ್ರಗಳತ್ತ ಹೆಚ್ಚು ಗಮನ ಕೇಂದ್ರಿಕರಿಸಿದ್ದಾರೆ. ಮಾತ್ರವಲ್ಲ, ಹೊಸ ಉದ್ಯೋಗ ಸೃಷ್ಟಿ, ಸಂಶೋಧನೆ, ಆವಿಷ್ಕಾರಕ್ಕೂ ಒತ್ತು ನೀಡಿದ್ದಾರೆ. ದೇಶದ ಬೆನ್ನೆಲುಬಾದ ರೈತರಿಗೆ ಡೈರಿ ಉದ್ಯಮದಲ್ಲಿರುವ ರೈತರಿಗೆ ನೆರವು, ರಾಸುಗಳಿಗೆ ಕಂಡುಬರುವ ಕಾಲುಬಾಯಿ ರೋಗ ತಡೆಗೆ ಕ್ರಮ, ೪ ಕೋಟಿ ರೈತರಿಗೆ ಬೆಳೆ ವಿಮೆ ಯೋಜನೆಯಂತಹ ಯೋಜನೆಗಳು ಮೆಚ್ಚುವಂತದ್ದಾಗಿದೆ. ಜತೆಗೆ ದೇಶದಲ್ಲಿರುವ ಪ್ರಮುಖ ಪ್ರವಾಸೋದ್ಯಮಗಳ ಅಭಿವೃದ್ಧಿಗೆ ಶೂನ್ಯ ಬಡ್ಡಿ ಸಾಲ ನೀಡುತ್ತಿರುವುದು ಕೂಡ ಪರೋಕ್ಷವಾಗಿ ಲಕ್ಷಾಂತರ ಉದ್ಯೋಗಗಳ ಸೃಷ್ಟಿಗೂ ಕಾರಣವಾಗಿದೆ. ದೇಶದ ಸಾರಿಗೆ ವ್ಯವಸ್ಥೆಯಲ್ಲಿ ಗಣನೀಯ ಸುಧಾರಣೆ ತರುವ ಉದ್ದೇಶ ಹೊಂದಿದೆ. ಇ- ವಾಹನಗಳಿಗೆ ಚಾರ್ಜಿಂಗ್ ಸ್ಟೇಷನ್ ಹೆಚ್ಚಿಸುವುದು, ದೇಶದ ನಾನಾ ನಗರಗಳಿಗೆ ಮೆಟ್ರೋ ರೈಲು ಮಾರ್ಗ ವಿಸ್ತರಣೆ, ಸಣ್ಣ ನಗರಿಗಳಿಗೂ ಉಡಾನ್ ಯೋಜನೆಯಡಿ ೫೧೭ ಹೊಸ ಮಾರ್ಗಗಳನ್ನು ರೂಪಿಸುತ್ತಿರುವುದು ದೇಶದ ಆರ್ಥಿಕತೆಯನ್ನು ಗಟ್ಟಿಗೊಳಿಸುವತ್ತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದಿಟ್ಟ ಹೆಜ್ಜೆ ಇಟ್ಟಿರುವುದು ಇದರಿಂದ ದೃಢಪಟ್ಟಿದೆ. ನವಭಾರತದ ಪರಿಕಲ್ಪನೆಯ ಸಾಕಾರದ ನಿಟ್ಟಿನಲ್ಲಿ, ದೇಶದ ಆರ್ಥಿಕತೆಯನ್ನು ಮತ್ತಷ್ಟು ಸದೃಢಗೊಳಿಸುವ, ಚುನಾವಣೆ ಪೂರ್ವ ಜನಪ್ರಿಯ ಘೋಷಣೆಗಳನ್ನು ಮಂಡಿಸದೆ, ಯುವಜನತೆ, ರೈತರು, ಮಹಿಳೆಯರು ಮತ್ತು ವಿಶೇಷವಾಗಿ ದುರ್ಬಲ ವರ್ಗದ ಜನರ ಜೀವನಮಟ್ಟ ಸುಧಾರಿಸುವ, ಹೊಸಭರವಸೆ, ಅವಕಾಶಗಳನ್ನು ಸೃಷ್ಟಿಸುವ ವಾಸ್ತವದ ಆಯವ್ಯಯವನ್ನು ಕೇಂದ್ರ ವಿತ್ತ ಸಚಿವೆ ಮಂಡಿಸಿದ್ದಾರೆ ಎಂದು ಕೆಎಮ್‌ಎಫ್ ಮಾಜಿ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.


Spread the love

About Yuva Bharatha

Check Also

ಮಿನಿ ಗೂಡ್ಸ್ ಮಾಲಕರ ಮತ್ತು ಚಾಲಕರ ಸಂಘದ ವತಿಯಿಂದ ಡಾ.ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ.!

Spread the loveಮಿನಿ ಗೂಡ್ಸ್ ಮಾಲಕರ ಮತ್ತು ಚಾಲಕರ ಸಂಘದ ವತಿಯಿಂದ ಡಾ.ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ.! ಗೋಕಾಕ: …

Leave a Reply

Your email address will not be published. Required fields are marked *

nineteen + eight =