Breaking News

ರೈತರ ಬದುಕಿನಲ್ಲಿ ಜಾನುವಾರುಗಳ ಪಾತ್ರ ಮಹತ್ವದ್ದಾಗಿದೆ.- ರಮೇಶ ಜಾರಕಿಹೊಳಿ.!

Spread the love

ರೈತರ ಬದುಕಿನಲ್ಲಿ ಜಾನುವಾರುಗಳ ಪಾತ್ರ ಮಹತ್ವದ್ದಾಗಿದೆ.- ರಮೇಶ ಜಾರಕಿಹೊಳಿ.!


ಗೋಕಾಕ: ರೈತರ ಜಾನುವಾರುಗಳ ಆರೋಗ್ಯ ರಕ್ಷಣೆಗಾಗಿ ಸರಕಾರ ಸಂಚಾರಿ ಪಶುಚಿಕಿತ್ಸಾ ವಾಹನಗಳನ್ನು ಪ್ರಾರಂಭಿಸಿದ್ದು, ಇದರ ಉಪಯೋಗ ಪಡೆದುಕೊಳ್ಳುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅವರು, ಶುಕ್ರವಾರದಂದು ನಗರದ ಶಾಸಕರ ಕಚೇರಿ ಆವರಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕೇಂದ್ರ ಪುರಸ್ಕೃತ ಯೋಜನೆಯಾದ ಸಂಚಾರಿ ತುರ್ತು ಪಶು ಚಿಕಿತ್ಸಾ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದರು.
ರೈತರ ಬದುಕಿನಲ್ಲಿ ಜಾನುವಾರುಗಳ ಪಾತ್ರ ಮಹತ್ವದ್ದಾಗಿದೆ. ಅವುಗಳ ಆರೋಗ್ಯ ರಕ್ಷಣೆಗಾಗಿ ಈ ಯೋಜನೆ ಜಾರಿಗೊಳಿಸಲಾಗಿದ್ದು, ರೈತರು ೧೯೬೨ ಸಹಾಯವಾಣಿಗೆ ಕರೆ ಮಾಡಿದರೆ ಜಾನುವಾರುಗಳು ಇದ್ದಲ್ಲಿಯೇ ವೈದ್ಯರು ಸಿಬ್ಬಂಧಿ ಹಾಗೂ ಚಿಕಿತ್ಸಾ ಸಲಕರಣೆಗಳೊಂದಿಗೆ ಸುಸಜ್ಜಿತವಾದ ಈ ವಾಹನಗಳು ಆಗಮಿಸಿ ಚಿಕಿತ್ಸೆ ನೀಡುತ್ತವೆ. ಈ ವ್ಯವಸ್ಥೆಯ ಉಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು.
ಇದೇ ಸಂದರ್ಭದಲ್ಲಿ ೨೦೨೧-೨೨ನೇಯ ಸಾಲಿನ ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿಯಲ್ಲಿ ರೈತರಿಗೆ ಹೈನು ರಾಸು ಘಟಕ ಸ್ಥಾಪಿಸಲು ತಾಲೂಕಿನ ೧೨ ಫಲಾನುಭವಿಗಳಿಗೆ ೧.೯೬.೩೩೦ ರೂಗಳ ಸಹಾಯ ಧನ ಚೇಕ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಪಶು ಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಮೋಹನ ಕಮತ, ಡಾ. ಶಶಿಕಾಂತ ಕೌಜಲಗಿ, ಡಾ. ಪ್ರವೀಣ ಒಡೆಯರ, ಡಾ. ಧರೆಪ್ಪ ಹೊಸಮನಿ, ಡಾ. ಸುರೇಶ ಗೊಂಡೆ, ಮಾಜಿ ಜಿಪಂ ಸದಸ್ಯ ಟಿ ಆರ್ ಕಾಗಲ, ಶಾಸಕರ ಆಪ್ತಸಹಾಯಕರಾದ ಭೀಮಗೌಡ ಪೋಲಿಸಗೌಡರ, ಕಾಂತು ಎತ್ತಿನಮನಿ, ಮುಖಂಡರುಗಳಾದ ಅಶೋಕ ಗೋಣಿ, ಭೀಮಶಿ ಭರಮನ್ನವರ, ಈಶ್ವರ ಬಾಗೋಜಿ, ಪ್ರಮೋದ ಜೋಶಿ ಸೇರಿದಂತೆ ಅನೇಕರು ಇದ್ದರು.


Spread the love

About Yuva Bharatha

Check Also

ಬೋರಗಾಂವ ಪಟ್ಟಣದ ಶ್ರೀ ಅರಿಹಂತ ಕೋ,ಆಪ್ ಸೌಹಾರ್ಧ ಸಹಕಾರಿ ಬ್ಯಾಂಕ ವಿರುದ್ಧ ರೈತರ ಪ್ರತಿಭಟನೆ ಬ್ಯಾಂಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಕೆ.!

Spread the loveಬೋರಗಾಂವ ಪಟ್ಟಣದ ಶ್ರೀ ಅರಿಹಂತ ಕೋ,ಆಪ್ ಸೌಹಾರ್ಧ ಸಹಕಾರಿ ಬ್ಯಾಂಕ ವಿರುದ್ಧ ರೈತರ ಪ್ರತಿಭಟನೆ ಬ್ಯಾಂಕ ವ್ಯವಸ್ಥಾಪಕರಿಗೆ …

Leave a Reply

Your email address will not be published. Required fields are marked *

5 × three =