ನಮ್ಮ ಸಂಸ್ಥೆಯು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಜತೆಗೆ ವಿದ್ಯಾರ್ಥಿ ವೇತನವನ್ನು ನೀಡಿ ಪ್ರೋತ್ಸಾಹಿಸಲಾಗುತ್ತಿದೆ-ಸನತ್ ಜಾರಕಿಹೊಳಿ
ಗೋಕಾಕ: ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರ ಉಜ್ವಲ ಭವಿಷ್ಯಕ್ಕಾಗಿ ಕಳೆದ ೩೫ ವರ್ಷಗಳಿಂದ ಲಕ್ಷಿö್ಮÃ ಎಜುಕೇಷನ್ ಟ್ರಸ್ಟ್ ಶ್ರಮಿಸುತ್ತಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸನತ್ ಜಾರಕಿಹೊಳಿ ಹೇಳಿದರು.

ನಗರದ ಪ್ರತಿಷ್ಠಿತ ಲಕ್ಷಿö್ಮÃ ಎಜುಕೇಷನ್ ಟ್ರಸ್ಟ್ ವಿವಿಧ ಮಹಾವಿದ್ಯಾಲಯಗಳ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮಾತನಾಡಿದ ಅವರು, ನಮ್ಮ ಸಂಸ್ಥೆಯಲ್ಲಿ ಐದರಿಂದ ಆರು ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಶಿಕ್ಷಣ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ರಾಜ್ಯ ಮತ್ತು ರಾಷ್ಟçಮಟ್ಟದಲ್ಲಿ ಸಾಧನೆ ಮಾಡಿ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಅಲ್ಲದೇ ಉನ್ನತ ಹುದ್ದೆಗಳನ್ನು ಅಲಂಕರಿಸಿ ತಮ್ಮ ಬದುಕನ್ನು ರೂಪಿಸಿಕೊಂಡು ವೈದ್ಯಕೀಯ, ಭಾರತೀಯ ಸೇನೆ, ಐಎಎಸ್, ಐಪಿಎಸ್‌ನಂತಹ ಕ್ಷೇತ್ರಗಳಲ್ಲಿ ಮಾದರಿಯಾಗಿ ಕರ‍್ಯನಿರ್ವಹಿಸುತ್ತಿದ್ದಾರೆ ಎಂದವರು ಹೇಳಿದರು.
ನಮ್ಮ ಸಂಸ್ಥೆಯು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಜತೆಗೆ ವಿದ್ಯಾರ್ಥಿ ವೇತನವನ್ನು ನೀಡಿ ಪ್ರೋತ್ಸಾಹಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ವಸತಿ ಶಾಲೆಯನ್ನು ಪ್ರಾರಂಭಿಸಲಾಗುದ್ದರಿAದ ಸಂಸ್ಥೆಗೆ ನಿಮ್ಮೆಲ್ಲರ ಸಹಕಾರ ಸದಾ ಇರಲಿ ಎಂದು ಹೇಳಿದ ಅವರು, ತಾಯಿಯವರ ಆಶಯದಂತೆ ಕಡಿಮೆ ಬೆಲೆಯಲ್ಲಿ ಉತ್ತಮ ಮಟ್ಟದ ಶಿಕ್ಷಣವನ್ನು ಕೊಡುವುದಾಗಿದೆ.ಅವರ ಮಾರ್ಗದರ್ಶನದಂತೆ ಮುಂದಿನ ದಿನಗಳಲ್ಲಿ ಸಂಸ್ಥೆಯನ್ನು ಇನ್ನೂ ಉತ್ತಮವಾಗಿ ಮುನ್ನಡೆಸುತ್ತೇನೆ. ಪ್ರತಿಭಾನ್ವಿತ ಬಡ ಮಕ್ಕಳ ಜೀವನದ ಕನಸು ನನಸಾಗಿಸಲು ಪ್ರತಿ ವರ್ಷ ಹತ್ತು ಲಕ್ಷಕ್ಕಿಂತಲೂ ಹೆಚ್ಚು ಹಣವನ್ನು ತಾಯಿಯ ಹೆಸರಿನಲ್ಲಿ ಸ್ಕಾಲರಶಿಪ್ ನೀಡಲಾಗುತ್ತಿದೆ ಎಂದು ಹೇಳಿದರು.
ಅಲ್ಲದೇ ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಸಂಸ್ಥೆಯು ಅತ್ಯಂತ ಕಡಿಮೆ ಶುಲ್ಕದಲ್ಲಿ ಪ್ರವೇಶ ನೀಡಲಾಗುತ್ತಿದ್ದು, ಸಂಸ್ಥೆಯು ಉತ್ತಮ ರಾಜ್ಯಮಟ್ಟದಲ್ಲಿ ಖ್ಯಾತಿ ಹೊಂದಿರುವAತಹ ಶಿಕ್ಷಕರನ್ನು ಹೊಂದಿದೆ ಎಂದು ಹೇಳಿದರು. ಶಿಕ್ಷಣವೇ ಜೀವನ ಜ್ಯೋತಿ ಎಂಬ ಧ್ಯೇಯ ವಾಕ್ಯದೊಂದಿಗೆ ನಿಮ್ಮ ಶಿಕ್ಷಣದ ಕನಸುಗಳನ್ನು ನನಸಾಗಿಸುವುದೇ ನಮ್ಮ ಗುರಿಯಾಗಿದೆ ಎಂದು ಸನತ್ ಜಾರಕಿಹೊಳಿ ಹೇಳಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ವೈಸ್ ಚೇರಮನ್ ಶ್ರೀಮತಿ ಸುವರ್ಣಾ ಜಾರಕಿಹೊಳಿ, ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿ, ಸಂಸ್ಥೆಯ ಎಲ್ಲ ವಿಭಾಗಗಳ ಮುಖ್ಯಸ್ಥರಾದ ಅರುಣ ಪೂಜೇರ, ಈಶ್ವರ್ ಪವಾರ, ಎ ಬಿ ಪಾಟೀಲ್, ಎಚ್ ಎಸ್ ಅಡಿಬಟ್ಟಿ, ಜಿ ಆರ್ ನಿಡೋಣಿ, ಪಿ ವಿ ಕಂಡ್ರಟ್ಟಿ, ಎಚ್ ವಿ ಫಾಗ್ನಿಸ್, ಪಿ ವಿ ಚಚಡಿ, ಎ ಎಸ್ ಸರಕಾವಸ್ ಉಪಸ್ಥಿತರಿದ್ದರು.
YuvaBharataha Latest Kannada News