Breaking News
????????????????????????????????????

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪತ್ರಗಳನ್ನು ಬರೆದು ಆತ್ಮಸ್ಥೈರ್ಯ ತುಂಬಿಸುವ ಕಾರ್ಯ- ರಮೇಶ ಜಾರಕಿಹೊಳಿ!

Spread the love

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪತ್ರಗಳನ್ನು ಬರೆದು ಆತ್ಮಸ್ಥೈರ್ಯ ತುಂಬಿಸುವ ಕಾರ್ಯ- ರಮೇಶ ಜಾರಕಿಹೊಳಿ!

ಯುವ ಭಾರತ ವಿಶೇಷ ವರದಿ ಗೋಕಾಕ

ಯುವ ಭಾರತ ಸುದ್ದಿ ಗೋಕಾಕ: ಗೋಕಾಕ ಶೈಕ್ಷಣಿಕ ವಲಯದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿಗಳಿಗೆ ತಮ್ಮ ಪತ್ರದ ಮೂಲಕ ಹುರಿದುಂಬಿಸುತ್ತ ಬಂದಿರುವ ಶಾಸಕ ರಮೇಶ ಜಾರಕಿಹೊಳಿ ಅವರು ಈ ಬಾರಿಯೂ ಮಕ್ಕಳಿಗೆ ಪತ್ರಗಳನ್ನು ಬರೆದು ಅವರಿಗೆ  ಆತ್ಮಸ್ಥೈರ್ಯ ತುಂಬಿಸುವ ಕಾರ್ಯ ಮಾಡುತ್ತಿದ್ದಾರೆ.

 ಶಾಸಕ ರಮೇಶ ಜಾರಕಿಹೊಳಿ ಅವರು ಬರೆದ ಪತ್ರ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ವಿದ್ಯಾರ್ಥಿ ಜೀವನದ ಅತ್ಯಂತ ಮಹತ್ವದ ಘಟ್ಟ, ಈ ಪರೀಕ್ಷೆಯನ್ನು ಯಶಸ್ವಿಯಾಗಿಸಿಕೊಂಡು ಮುಂದೆ ಪಿಯೂಸಿ, ಪದವಿ ಹೀಗೆ ಉನ್ನತ ವ್ಯಾಸಾಂಗ ಮಾಡಿ ವಿದ್ಯಾರ್ಥಿಗಳು ತಮ್ಮ ಜೀವನ ರೂಪಿಸಿಕೊಳ್ಳಲು ಸಾಧ್ಯ ಹೀಗಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಯಶಸ್ಸಿಗಾಗಿ ಶಾಸಕ ರಮೇಶ ಜಾರಕಿಹೊಳಿ ಪತ್ರ ಬರೆದು ಶುಭಾಶೀರ್ವಾದ ತಿಳಿಸಿದ್ದಾರೆ.

ಗೋಕಾಕ ವಲಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುತ್ತ ಬಂದಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಗಾರ ಅವರ ನೇತ್ರತ್ವದಲ್ಲಿ ಗುರುಜಿ ಬಂದರು ಗುರುವಾರ, ದಿನಕ್ಕೊಂದು ವಿಜ್ಞಾನ ಚಿತ್ರ, ನಕ್ಷಾ ಸಪ್ತಾಹ, ಕಂಠಪಾಠ ಪಾಕ್ಷೀಕ, ಮಿಸ್‌ಕಾಲ್ ಮಾಡಿ ಉತ್ತರ ಪಡೆಯಿರಿ, ಓದುವ ಮನೆ, ಪಿಕ್‌ನಿಕ್ ಫಜಲ್, ರಂಗೋಲಿಯಲ್ಲಿ ವಿಜ್ಞಾನ ಚಿತ್ರ ಎಂಬ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳ ಸಾಧನೆಗೆ ಪೂರಕವಾಗಿ ಶಿಕ್ಷಕರೊಂದಿಗೆ ಕಾರ್ಯನಿರ್ವಹಿಸುತ್ತಿದ್ದಾರೆ.

ರಮೇಶ ಜಾರಕಿಹೊಳಿ ಶಾಸಕರು ಗೋಕಾಕ

ಗೋಕಾಕ ವಲಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಲು ಶಾಸಕ ರಮೇಶ ಜಾರಕಿಹೊಳಿ ಅವರ ಪಾಲು ಅಪಾರವಾಗಿದೆ. ಶಾಸಕ ರಮೇಶ ಜಾರಕಿಹೊಳಿ ಅವರು ಬರೆದ ಪತ್ರಗಳು ಈಗಾಗಲೇ ಎಲ್ಲ ೪೭೬೦ ವಿದ್ಯಾರ್ಥಿಗಳಿಗೆ ಮುಟ್ಟಿದ್ದು, ವಿದ್ಯಾರ್ಥಿಗಳು ನಮ್ಮ ಶಾಸಕರು ನಮಗೆ ಪತ್ರ ಬರೆದಿದ್ದಾರೆ ಎಂದು ತಮ್ಮ ಪಾಲಕರಲ್ಲಿ ಹರ್ಷವ್ಯಕ್ತಪಡಿಸಿದ್ದಾರೆ.

ಪತ್ರದಲ್ಲೇನಿದೆ: ಹತ್ತನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ನಮ್ಮ ಗೋಕಾಕ ಶೈಕ್ಷಣಿಕ ವಲಯದ ನಿಮ್ಮೆಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಕಳೆದ ಹತ್ತು ವರ್ಷಗಳಿಂದ ನಮ್ಮ ತಾಲೂಕಿನ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಇದಕ್ಕೆ ಪೂರಕವಾಗಿ ವಲಯದ ನುರಿತ-ಉತ್ಸಾಹಿ ಗುರು ಬಳಗ ಅತ್ಯಂತ ಕ್ರೀಯಾಶೀಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗಾಗಲೇ ನಿಮ್ಮ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದೆ. ಈಗ ಇರುವ ಸಮಯವನ್ನು ಸರಿಯಾಗಿ ಉಪಯೋಗಿಸಿಕೊಂಡು ಚೆನ್ನಾಗಿ ಅಭ್ಯಾಸ ಮಾಡಿ, ಒಳ್ಳೆಯ ಅಂಕಗಳೊAದಿಗೆ ಉತ್ತೀರ್ಣರಾಗಿ ನಿಮ್ಮ ತಂದೆ ತಾಯಿ ಕನಸನ್ನು ನನಸು ಮಾಡಿ, ಗುರುಗಳಿಗೆ ಮತ್ತು ನಮ್ಮ ತಾಲೂಕಿಗೆ ಕೀರ್ತಿ ತರುವಂತಹ ಸಾಧನೆ ಮಾಡುತ್ತಿರೆಂಬ ವಿಶ್ವಾಸ ನನಗಿದೆ. ದಿನ ನಿತ್ಯದ ಅಭ್ಯಾಸದ ಜೊತೆಗೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನಹರಿಸಿ, ಉತ್ತಮ ಸಾಧನೆಗೆ ನಿರಂತರ ಅಭ್ಯಾಸದಲ್ಲಿ ತೊಡಗಿ, ನಿಮ್ಮ ಭವಿಷ್ಯ ಉಜ್ವಲವಾಗಲಿ. ಮನೆಯಲ್ಲಿ ಅಪ್ಪ, ಅಮ್ಮ ಹಾಗೂ ಹಿರಿಯರಿಗೆ ಹೊಸ ವರ್ಷದ ಶುಭಾಶಯಗಳೊಂದಿಗೆ ನನ್ನ ನಮಸ್ಕಾರ. ನಿಮಗೆ ಶುಭವಾಗಲಿ. ತಮ್ಮ ಪ್ರೀತಿಯ ಶಾಸಕ ರಮೇಶ ಜಾರಕಿಹೊಳಿ.

“ನನಗೆ ಹಾಗೂ ನಮ್ಮ ವಲಯದ ಎಲ್ಲ ಗುರು ಬಳಗಕ್ಕೆ ಮಕ್ಕಳ ಶಿಕ್ಷಣಕ್ಕಾಗಿ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಪ್ರೋತ್ಸಾಹಿಸಿ, ವಲಯದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸುತ್ತಿರುವ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ತುಂಬು ಹ್ಲದಯದ ಧನ್ಯವಾದ”-ಜಿ ಬಿ ಬಳಗಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಗೋಕಾಕ.

“ಎಸ್‌ಎಸ್‌ಎಲ್‌ಸಿ ಮಕ್ಕಳು ನಿರಂತರವಾಗಿ ಕಲಿಕೆಯಲ್ಲಿ ತೊಡಗಿಸಿಕೊಂಡು ಧೈರ್ಯದಿಂದ ಪರೀಕ್ಷೆ ಎದುರಿಸಲು ಮಾರ್ಗದರ್ಶನ ಮಾಡಿ ಸ್ಫೂರ್ತಿ ತುಂಬಿದ ಶಾಸಕರ ಕಾರ್ಯ ಮಾದರಿಯಾಗಿದೆ”-ಎಸ್ ಎ ಕೇರಿ, ಮುಖ್ಯೋಪಾಧ್ಯಾಯರು ಸರಕಾರಿ ಪ್ರೌಢ ಶಾಲೆ ಹೀರೆನಂದಿ

“ಶಾಸಕ ರಮೇಶ ಜಾರಕಿಹೊಳಿ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತಯಾರಿ ನಡೆಸುವಂತೆ ಅಕ್ಕರೆಯ ಪತ್ರವನ್ನು ಬರೆದು ನಮ್ಮ ಶಿಕ್ಷಣದ ಬಗ್ಗೆ ಕಾಳಜಿ ವಹಿಸುತ್ತಿರುವದು ನಮ್ಮ ಹೆಮ್ಮೆ. ತಮ್ಮ ಅಕ್ಕರೆಯ ಸಂದೇಶದ0ತೆ ಉತ್ತಮ ಫಲಿತಾಂಶ ಪಡೆದು ನಿಮ್ಮ ಮತ್ತು ನಮ್ಮ ತಂದೆ ತಾಯಿ, ಗುರುಬಳದ ಕೀರ್ತಿಯನ್ನು ಹೆಚ್ಚಿಸುವ ಕೆಲಸ ಮಾಡುತ್ತೆವೆ”-ಕು.ತಂಜೀಲಾ ಪೈಲ್ವಾನ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಸಪಪೂಮ ಗೋಕಾಕ.

 


Spread the love

About Yuva Bharatha

Check Also

ಪತ್ರಿಕೋದ್ಯಮದ ಬೆಳವಣಿಗೆಯಲ್ಲಿ ಪತ್ರಿಕಾ ವಿತರಕರ ಪಾತ್ರ ಬಹಳ ದೊಡ್ಡದು.- ರಮೇಶ ಜಾರಕಿಹೊಳಿ.!

Spread the loveಪತ್ರಿಕೋದ್ಯಮದ ಬೆಳವಣಿಗೆಯಲ್ಲಿ ಪತ್ರಿಕಾ ವಿತರಕರ ಪಾತ್ರ ಬಹಳ ದೊಡ್ಡದು.- ರಮೇಶ ಜಾರಕಿಹೊಳಿ.! ಗೋಕಾಕ: ಪತ್ರಿಕೆಗಳನ್ನು ಮನೆಗಳಿಗೆ ಸರಿಯಾದ …

Leave a Reply

Your email address will not be published. Required fields are marked *

6 − five =