Breaking News

ಗೋಕಾಕ ಮಂಡಲದ ಬಿಜೆಪಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ!

Spread the love

ಗೋಕಾಕ ಮಂಡಲದ ಬಿಜೆಪಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ!

 

ಯುವ ಭಾರತ ಸುದ್ದಿ ಗೋಕಾಕ: ರೈತರಿಗೆ, ಬಡವರ ದೀನ ದಲಿತರಿಗೆ, ಮಹಿಳೆಯರಿಗೆ ಹಾಗೂ ಯುವ ಜನತೆಗಾಗಿ ರಾಜ್ಯ ಹಾಗೂ ಕೇಂದ್ರ ಸರಕಾರಗಳು ಜಾರಿಗೊಳಿಸಿರುವ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಯ ವರೆಗೆ ತಲುಪಿಸುವ ಕಾರ್ಯ ಕಾರ್ಯಕರ್ತರು ಮಾಡಬೇಕು ಎಂದು ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹೇಳಿದರು.
ಅವರು, ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲ ಬಿಜೆಪಿ ವತಿಯಿಂದ ಸೋಮವಾರದಂದು ಜರುಗಿದ ವಿಜಯ ಸಂಕಲ್ಪ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಗೋಕಾಕ: ಬಿಜೆಪಿ ವತಿಯಿಂದ ವಿಜಯ ಸಂಕಲ್ಪ ಅಭಿಯಾನದ ಪೂರ್ವಭಾವಿ ಸಭೆಯ ಚಿತ್ರ

ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಹಾಗೂ ಸಿಎಮ್ ಬಸವರಾಜ ಬೊಮ್ಮಾಯಿ ನೇತ್ರತ್ವದ ರಾಜ್ಯ ಸರಕಾರಗಳು ಸಾಧನೆಗಳನ್ನು ಜನರ ಮನೆ ಮನಗಳಿಗೆ ತಲುಪಿಸಿ ಬರುವ ೨೦೨೩ರ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪರ ಈಗಿನಿಂದಲೆ ಮತಯಾಚನೆ ನಡೆಸುವಂತೆ ಕರೆ ನೀಡಿದರು.
ಬೆಳಗಾವಿ ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ ದೇಶಪಾಂಡೆ ಪಕ್ಷ ಸಂಘಟನೆಯ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ವೇದಿಕೆಯ ಮೇಲೆ ಜಿಲ್ಲಾ ಉಪಾಧ್ಯಕ್ಷ ಬಸನಗೌಡ ಕೋಳದೂರ, ಶಾಮಾನಂದ ಪೂಜೇರಿ, ಜಿಲ್ಲಾ ಕಾರ್ಯದರ್ಶಿ ಬಸವರಾಜ ಹಿರೇಮಠ, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಕೋಲಾರ, ಸುರೇಶ ಸನದಿ, ಸುರೇಶ ಪಾಟೀಲ ಇದ್ದರು.


Spread the love

About Yuva Bharatha

Check Also

ಮಧ್ಯಪ್ರದೇಶನಲ್ಲಿ ಮೃತಪಟ್ಟಿದ್ದವರ ಗೋಕಾಕದಲ್ಲಿ ಅಂತ್ಯಸ0ಸ್ಕಾರ!

Spread the loveಮಧ್ಯಪ್ರದೇಶನಲ್ಲಿ ಮೃತಪಟ್ಟಿದ್ದವರ ಗೋಕಾಕದಲ್ಲಿ ಅಂತ್ಯಸ0ಸ್ಕಾರ! ಯುವ ಭಾರತ ಸುದ್ದಿ ಗೋಕಾಕ: ಪ್ರಯಾಗರಾಜನ ಕುಂಭಮೇಳದಲ್ಲಿ ಭಾಗವಹಿಸಿ ಮರಳಿ ಬರುತ್ತಿರುವಾಗ …

Leave a Reply

Your email address will not be published. Required fields are marked *

three × one =