Breaking News

ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮೇಳನ್!

Spread the love

ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮೇಳನ್!

ಬೆಟಗೇರಿ ಗ್ರಾಮದ ತಾಪಂ ಮಾಜಿ ಸದಸ್ಯ ಈರಪ್ಪ ದೇಯಣ್ಣವರ, ಶಿಕ್ಷಣಪ್ರೇಮಿ ಬಸಪ್ಪ ಮೇಳೆಣ್ಣವರ ಜ್ಯೋತಿ ಬೆಳಗಿಸಿ ಸಮಾರಂಭ ಉದ್ಘಾಟಿಸಿದರು.

ಯುವ ಭಾರತ ಸುದ್ದಿ (ಗೋಕಾಕ) ಬೆಟಗೇರಿ:ಗ್ರಾಮದ ಚೈತನ್ಯ ಗ್ರುಪ್ಸ್ನ ಬೆಟಗೇರಿ ಕೃಷ್ಣಶರ್ಮ ಚೈತನ್ಯ ಕನ್ನಡ ಮಾಧ್ಯಮ ಮತ್ತು ಶ್ರೀಮತಿ ಸತ್ತೆವ್ವ ದೇಯಣ್ಣವರ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದಲ್ಲಿ ಉಭಯ ಮಾಧ್ಯಮ ಶಾಲೆಯ ೭ನೇ ತರಗತಿ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಬಿಳ್ಕೂಡುವ ಸಮಾರಂಭ ಫೆ.೪ರಂದು ನಡೆಯಿತು.

ಬೆಟಗೇರಿ ಶಾಲಾ ಮಕ್ಕಳಿಂದ ಸಾಂಸ್ಕೃತೀಕ ಮನರಂಜನೆಯ ಕಾರ್ಯಕ್ರಮಗಳು ನಡೆದವು

ಬೆಟಗೇರಿ ತಾಪಂ ಮಾಜಿ ಸದಸ್ಯ ಈರಪ್ಪ ದೇಯಣ್ಣವರ, ಶಿಕ್ಷಣಪ್ರೇಮಿ ಬಸಪ್ಪ ಮೇಳೆಣ್ಣವರ ಜ್ಯೋತಿ ಬೆಳಗಿಸಿ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಉಭಯ ಮಾಧ್ಯಮ ಶಾಲೆಗಳ ಆಡಳಿತಾಧಿಕಾರಿ ರವಿ ಭರಮನಾಯ್ಕ ಅಧ್ಯಕ್ಷತೆ ವಹಿಸಿದ್ದರು. ನಿಂಗಾಪೂರ ಸಹಿಪ್ರಾಕನ್ನಡ ಶಾಲೆಯ ಮುಖ್ಯಶಿಕ್ಷಕ ಎಸ್.ವೈ.ಪಾಟೀಲ ಉಪನ್ಯಾಸ ನೀಡಿದರು.ವಿವಿಧ ವಲಯದಲ್ಲಿ ಸಾಧನೆಗೈದ ಉಭಯ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ, ಗಣ್ಯರ ಸತ್ಕರಿಸಿದ ಬಳಿಕ ಉಭಯ ಮಾಧ್ಯಮ ಶಾಲಾ ಮಕ್ಕಳಿಂದ ಭಾಷಣ, ರೂಪಕಗಳ ವೇಷಭೂಷಣ ಹಾಗೂ ಸಾಂಸ್ಕೃತೀಕ ಮನರಂಜನೆಯ ಕಾರ್ಯಕ್ರಮಗಳು ಸಂಭ್ರಮದಿAದ ನಡೆದವು.

ಬೆಟಗೇರಿ ಶಾಲಾ ಮಕ್ಕಳಿಂದ ಸಾಂಸ್ಕೃತೀಕ ಮನರಂಜನೆಯ ಕಾರ್ಯಕ್ರಮಗಳು ನಡೆದವು

ಗ್ರಾಪಂ ಅಧ್ಯಕ್ಷೆ ಸಾಂವಕ್ಕಾ ಬಾಣಸಿ, ಬೆಟಗೇರಿ ವಲಯದ ಸಿಆರ್‌ಸಿ ಎಂ.ಬಿ.ನಾಯ್ಕರ, ಕನ್ನಡ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕಿ ಕಮಲಾಕ್ಷಿ ನಾಯ್ಕ, ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕ ಸಂಜೀವ ಮೆಳವಂಕಿ, ಉಭಯ ಮಾಧ್ಯಮ ಶಾಲೆಗಳ ಶಿಕ್ಷಕರು, ಪಾಲಕರು, ಶಿಕ್ಷಣ ಪ್ರೇಮಿಗಳು, ವಿದ್ಯಾರ್ಥಿಗಳು, ಇತರರು ಇದ್ದರು. ಸಂಕೇತ ಗೌಡರ ಸ್ವಾಗತಿಸಿದರು. ನಭೀಸಾಬ ನದಾಫ್ ಕಾರ್ಯಕ್ರಮ ನಿರೂಪಿಸಿದರು. ಶರೀಫ್‌ಸಾಬ ನದಾಫ್ ಕೊನೆಗೆ ವಂದಿಸಿದರು.


Spread the love

About Yuva Bharatha

Check Also

೭ನೇ ಬಾರಿಗೆ ಆಯ್ಕೆ ಮಾಡಿ ತಮ್ಮ ಸೇವೆ ಮಾಡಲು ಸಹಕರಿಸಿದ ಗೋಕಾಕ ಮತಕ್ಷೇತ್ರದ ಜನತೆಗೆ ನಾವು ಕೃತಜ್ಞರಾಗಿದ್ದೇವೆ-ಯುವ ಧುರೀಣ ಅಮರನಾಥ ಜಾರಕಿಹೊಳಿ.!

Spread the love೭ನೇ ಬಾರಿಗೆ ಆಯ್ಕೆ ಮಾಡಿ ತಮ್ಮ ಸೇವೆ ಮಾಡಲು ಸಹಕರಿಸಿದ ಗೋಕಾಕ ಮತಕ್ಷೇತ್ರದ ಜನತೆಗೆ ನಾವು ಕೃತಜ್ಞರಾಗಿದ್ದೇವೆ-ಯುವ …

Leave a Reply

Your email address will not be published. Required fields are marked *

17 − 6 =