ಕಾಶ್ಮೀರದಲ್ಲಿ 5.4 ತೀವ್ರತೆಯ ಭೂಕಂಪ, ದೆಹಲಿಯಲ್ಲೂ ಕಂಪನ

ದೆಹಲಿ:
ಜಮ್ಮು ಮತ್ತು ಕಾಶ್ಮೀರದಲ್ಲಿ 5.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ದೆಹಲಿ ಹಾಗೂ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಭೂಕಂಪನದ ಅನುಭವವಾಗಿದೆ.
ಸೋಮವಾರ ಮಧ್ಯಾಹ್ನ 1.33ಕ್ಕೆ ಈ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.4 ರಷ್ಚು ತೀವ್ರತೆ ದಾಖಲಾಗಿದೆ ಎಂದು ಎನ್ ಸಿಎಸ್ ಟ್ವೀಟ್ ಮಾಡಿದೆ.
ದೆಹಲಿ ಮತ್ತು ಉತ್ತರ ಭಾರತದ ಕೆಲವು ಭಾಗಗಳಲ್ಲಿಯೂ ಭೂಕಂಪನದ ಅನುಭವವಾಗಿದೆ. ಆದರೆ ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ತಕ್ಷಣಕ್ಕೆ ವರದಿಯಾಗಿಲ್ಲ.
YuvaBharataha Latest Kannada News