ದಾಖಲೆಯಿಲ್ಲದ 50 ಲಕ್ಷ ರೂ. ವಶ
ಯುವ ಭಾರತ ಸುದ್ದಿ ಬೆಳಗಾವಿ :
ಸದಲಗಾ ದತ್ತವಾಡ ಚೆಕ್ ಪೋಸ್ಟ್ ನಲ್ಲಿ ಮಂಗಳವಾರ ದಾಖಲೆ ಇಲ್ಲದ 50 ಲಕ್ಷ ರೂಪಾಯಿ ಹಣವನ್ನು ಪೊಲೀಸರು, ಎಸ್ ಎಫ್ ಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ತಪಾಸಣೆ ವೇಳೆ ಯಾವುದೇ ದಾಖಲೆ ಇಲ್ಲದೆ ಹಣ ಒಯ್ಯುತ್ತಿದ್ದಾಗ ವ್ಯಕ್ತಿ ಸಿಕ್ಕಿಬಿದ್ದಿದ್ದು ಪೊಲೀಸರು ಹಣ ವಶಪಡಿಸಿಕೊಂಡಿರುವುದಾಗಿ ಎಸ್‌ಪಿ ಡಾ.ಸಂಜೀವ ಪಾಟೀಲ ತಿಳಿಸಿದ್ದಾರೆ.