Breaking News

ಹೊಸದುರ್ಗದ ಭಗೀರಥ ಪೀಠದಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ-ಪುರುಷೋತ್ತಮಾನಂದಪುರಿ ಸ್ವಾಮಿಜಿ.!

Spread the love


ಗೋಕಾಕ: ಜನರಲ್ಲಿ ಮಾನವೀಯ ಮೌಲ್ಯಗಳನ್ನು ಹೆಚ್ಚಿಸಿ, ಮೌಲ್ಯಾಧಾರಿತ ಸಮಾಜ ನಿರ್ಮಾಣಕ್ಕಾಗಿ ವ್ಯಕ್ತಿತ್ವ ವಿಕಸನ ಶಿಬಿರವನ್ನು ಇದೆ ದಿ.೨೮ ಮತ್ತು ೨೯ರಂದು ಹೊಸದುರ್ಗದ ಭಗೀರಥ ಪೀಠದಿಂದ ಆಯೋಜಿಸಲಾಗಿದೆ ಎಂದು ಹೊಸದುರ್ಗದ ಭಗೀರಥ ಪೀಠದ ಪೀಠಾಧಿಪತಿ ಶ್ರೀ ಪುರುಷೋತ್ತಮಾನಂದಪುರಿ ಮಹಾಸ್ವಾಮಿಜಿ ಹೇಳಿದರು.
ಅವರು, ನಗರದ ಉಪ್ಪಾರ ಗಲ್ಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತ, ಈ ಎರಡು ದಿನಗಳು ಮುಂಜಾನೆ ೬ಗಂಟೆಯಿAದ ಸಂಜೆ ೬ಗಂಟೆಯವರೆಗೆ ಅನೇಕ ತತ್ವಜ್ಞಾನಿಗಳಿಂದ ಚಿಂತನೆ, ಉಪನ್ಯಾಸ ಹಾಗೂ ಮಾರ್ಗದರ್ಶನ ನೀಡಲಾಗುವದು ಸಂಜೆ ೬ಗಂಟೆಯಿAದ ೯ಗಂಟೆಯವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುವವು.
ಜನರಲ್ಲಿ ವ್ಯಕ್ತಿತ್ವ ವಿಕಸನದೊಂದಿಗೆ ನಾಯಕತ್ವ ಬೆಳವಣಿಗೆಯ ಮಾರ್ಗದರ್ಶನವನ್ನು ನೀಡಲಾಗುವದು. ಎಲ್ಲ ಕ್ಷೇತ್ರಗಳಲ್ಲಿಯೂ ಮಾನವೀಯ ಮೌಲ್ಯಗಳೊಂದಿಗೆ ಕಾರ್ಯನಿರ್ವಹಿಸುವಂತಹ ತರಬೇತಿ ನೀಡಿ, ಉತ್ತಮ ಸಮಾಜ ನಿರ್ಮಾಣ ಮಾಡಲು ಸೂಕ್ತ ಮಾರ್ಗದರ್ಶನ ನೀಡಲಾಗುವದು ಎಂದರು.
ಈ ಶಿಬಿರದಲ್ಲಿ ಉಚ್ಛನ್ಯಾಯಾಲಯದ ವಿಶ್ರಾಂತ ನ್ಯಾಯಾಧೀಶರಾದ ಎಚ್ ಬಿಲ್ಲಪ್ಪ, ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮಿಳಾ ನಾಯ್ಡು, ಐಪಿಎಸ್ ಅಧಿಕಾರಿಗಳಾದ ರವಿ ಡಿ ಚನ್ನನವರ, ರಾಧಿಕಾ, ರಾಜಕೀಯ ಮುಖಂಡ ವೈಎಸ್‌ವಿ ದತ್ತಾ, ಕೆ ಎನ್ ಮೇತ್ರಿ ಸೇರಿದಂತೆ ಹಲವಾರು ಗಣ್ಯರು ಮಾರ್ಗದರ್ಶನ ನೀಡಲಿದ್ದಾರೆ. ಆಸಕ್ತರು ಈ ಶಿಬಿರದ ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಕನ್ನಡ ನಾಡು ನುಡಿಗಾಗಿ ಹೋರಾಡುತ್ತಿರುವ ಬಸವರಾಜ ಖಾನಪ್ಪನವರ ಅವರನ್ನು ಬೆಂಬಲಿಸಿ ಕಸಾಪ ಬೆಳಗಾವಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶಾಮಾನಂದ ಪೂಜಾರಿ, ಸದಾಶಿವ ಗುದಗಗೋಳ, ಭರಮಣ್ಣ ಉಪ್ಪಾರ, ಶಂಭುಲಿAಗ ಮುಕನ್ನವರ, ಕುಶಾಲ ಗುಡೆನ್ನವರ, ಶಿವಪುತ್ರ ಜಕಬಾಳ ಉಪಸ್ಥಿತರಿದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

twenty + 14 =