ನೌಕರರ ಸಂಘದ ಬೇಡಿಕೆ ಪರಿಗಣಿಸುವಂತೆ ರಮೇಶ ಜಾರಕಿಹೊಳಿ ಅವರಿಗೆ ಮನವಿ.!
ಗೋಕಾಕ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ನ್ಯಾಯಯುತ ಬೇಡಿಕೆಗಳನ್ನು ಪರಿಗಣಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಮಂಗಳವಾರದAದು ಶಾಸಕ ರಮೇಶ ಜಾರಕಿಹೊಳಿ ಅವರ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.
ಕೇಂದ್ರ ಸರಕಾರಿ ನೌಕರರಿಗೆ ಸರಿಸಮನಾದ ವೇತನ ಭತ್ಯೆಗಳು, ರಾಜ್ಯ ಸರಕಾರಿ ನೌಕರರ ನೂತನ ಪಿಂಚಣಿ ಯೋಜನೆ ರದ್ದು ಪಡಿಸಿ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸಬೇಕು. ಸರಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ, ಪ್ರಾಥಮಿಕ, ಪ್ರೌಢಶಾಲಾ ಹಾಗೂ ಪದವಿ ಕಾಲೇಜುಗಳ ಉಪನ್ಯಾಸಕರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿಯಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಆಗ್ರಹಿಸಿದೆ.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಸವರಾಜ ಮುರಗೋಡ, ಉಪಾಧ್ಯಕ್ಷ ವಿಠ್ಠಲ ಭಂಗಿ, ಕಾರ್ಯದರ್ಶಿ ಕೃಷ್ಣಕುಮಾರ ಎಸ್.ಕೆ, ಬಿ ಎಮ್ ಮಾಲದಿನ್ನಿ, ಮಾರುತಿ ದಂಡಿನ, ಅಶೋಕ ಮೇಸ್ತಿç, ಸುಮನ ಜಾಧವ, ಎಸ್ ಬಿ ಕಟ್ಟಿಮನಿ, ಯಮನಪ್ಪ ಕೆಂಪನ್ನವರ, ಬಿ ಎಮ್ ಶಿವಾಪೂರ, ಎಮ್ ಜಿ ಗುರನ್ನವರ, ಮಾರುತಿ ಗದಾಡಿ, ವಾಯ್ ಎಮ್ ಸನದಿ, ಎಮ್ ಎಚ್ ಪಟೇಲ ಇದ್ದರು.