Breaking News

ಮೋದಿ ಕೈಬಲಪಡಿಸಲು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ-ಕಾನೂನು ಸಚಿವ ಮಾಧುಸ್ವಾಮಿ

Spread the love

ಮೋದಿ ಕೈಬಲಪಡಿಸಲು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ-ಕಾನೂನು ಸಚಿವ ಮಾಧುಸ್ವಾಮಿ


ಗೋಕಾಕ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಲ್ಲರನ್ನೂ ಜೊತೆಗೆ ಕೊಂಡೊಯ್ಯುವ ನಾಯಕತ್ವ ಗುಣವಿದೆ ಅಂತಹ ಅಪ್ರತಿಮ ನಾಯಕನ ಕೈ ಬಲಪಡಿಸಲು ಬಿಜೆಪಿ ಅಭ್ಯರ್ಥಿಗಳಿಗೆ ಪ್ರಥಮ ಪ್ರಾಶಸ್ತö್ಯದ ಮತ ನೀಡುವಂತೆ ಕಾನೂನು ಸಂಸದೀಯ ಹಾಗೂ ಸಣ್ಣ ನೀರಾವರಿ ಸಚಿವ ಜೆ ಸಿ ಮಾಧುಸ್ವಾಮಿ ಹೇಳಿದರು.
ಅವರು, ನಗರದ ನ್ಯಾಯಾಲಯ ಆವರಣದ ನ್ಯಾಯವಾದಿಗಳ ಸಂಘದ ಭವನದಲ್ಲಿ ವಾಯವ್ಯ ಪದವಿದರ ಕ್ಷೇತ್ರ ಮತ್ತು ವಾಯವ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳ ಪರ ಮತಯಾಚನೆ ನಡೆಸಿ ಮಾತನಾಡಿದರು.
ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಬೊಮ್ಮಾಯಿ ಅವರ ನೇತ್ರತ್ವದಲ್ಲಿ ಬಿಜೆಪಿ ಸರಕಾರ ಅಭಿವೃದ್ಧಿ ಪರವಾದ ಅನೇಕ ಯೋಜನೆ ಜಾರಗಿದೆ ತಂದಿವೆ. ಪದವಿದರರು ಮತ್ತು ಶಿಕ್ಷಕರು ಹೊಟ್ಟೆಪಾಡಿಗೆ ರಾಜಕಾರಣ ಮಾಡುವವರನ್ನು ಬದಿಗಿಟ್ಟು, ಸಮಾಜಕ್ಕಾಗಿ ಸೇವೆ ನೀಡುವ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿ, ದೇಶದ ಅಬಿವೃದ್ಧಿಗೆ ಬಿಜೆಪಿ ಪಕ್ಷ ಶ್ರಮಿಸುತ್ತ ಬಂದಿದೆ. ಸಾಮಾಜಿಕ ನ್ಯಾಯದ ಮೂಲಕ ಎಲ್ಲರನ್ನೂ ಒಗ್ಗೂಡಿಸಿಕೊಂಡು ದೇಶದ ಅಭಿವೃದ್ಧಿಗೆ ಶ್ರಮಿಸೋಣ ಎಂದರು.
ಬೆಳಗಾವಿ ಬಿಟ್ಟರೆ ರಾಜ್ಯದಲ್ಲಿ ೧೮ ಜನ ಶಾಸಕರನ್ನ ಹೊಂದಿರುವ ಜಿಲ್ಲೆ ಕರ್ನಾಟಕದಲ್ಲಿ ಇಲ್ಲ. ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗೆ ನಮ್ಮ ಸರಕಾರ ಶ್ರಮಿಸುತ್ತಿದ್ದು, ತಮ್ಮ ಧ್ವನಿಯಾಗಿ ಸದನದಲ್ಲಿ ಧ್ವನಿಯೆತ್ತಲು ವಾಯವ್ಯ ಶಿಕ್ಷಕರ ಕ್ಷೇತ್ರ ಅಭ್ಯರ್ಥಿ ಅರುಣ ಶಾಹಪೂರ, ವಾಯವ್ಯ ಪದವಿದರ ಕ್ಷೇತ್ರದ ಅಭ್ಯರ್ಥಿ ಹನುಮಂತ ನಿರಾಣಿ ಅವರಿಗೆ ಮತನೀಡುವಂತೆ ವಿನಂತಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ ಸದಸ್ಯ ವಾಯ್ ಎ ನಾರಾಯಣಸ್ವಾಮಿ, ಮಾಜಿ ವಿಧಾನ ಪರಿಷತ ಸದಸ್ಯ ಜಗದೀಶ ಕವಟಗಿಮಠ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಸಿ ಡಿ ಹುಕ್ಕೇರಿ, ಬಿಜೆಪಿ ಮುಖಂಡರಾದ ಲಕ್ಷö್ಮಣ ತಪಸಿ, ಎಮ್ ಬಿ ಜಿರಲಿ, ಮುತಾಲಿಕ ದೇಸಾಯಿ, ಶಶಿಧರ ದೇಮಶೆಟ್ಟಿ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಸೇರಿದಂತೆ ನ್ಯಾಯವಾದಿಗಳ ಸಂಘದ ಸದಸ್ಯರು ಇತರರು ಇದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

4 × five =