Breaking News

ಪಂಡಿತ ಪುಟ್ಟರಾಜ ಗವಾಯಿಗಳ ಪುಣ್ಯಸ್ಮರಣೋತ್ಸವ ಅಂಗವಾಗಿ “ಸಂಗೀತ ಜಾತ್ರೆ”

Spread the love

ಪಂಡಿತ ಪುಟ್ಟರಾಜ ಗವಾಯಿಗಳ ಪುಣ್ಯಸ್ಮರಣೋತ್ಸವ ಅಂಗವಾಗಿ “ಸಂಗೀತ ಜಾತ್ರೆ”

ಗೋಕಾಕ: ಬೆಳಗಾವಿ ಜಿಲ್ಲಾ ಕಾಲವಿದರ ಬಳಗದಿಂದ ಪಂಚಾಕ್ಷರಿ ಡಾ|| ಪಂಡಿತ ಪುಟ್ಟರಾಜ ಗವಾಯಿಗಳ ಪುಣ್ಯಸ್ಮರಣೋತ್ಸವ ಅಂಗವಾಗಿ ೨ನೇ ವರ್ಷದ ಸಂಗೀತ ಜಾತ್ರೆ ಕಾರ್ಯಕ್ರಮವನ್ನು ಇದೆ ದಿ.೧೧ ರಿಂದ ೧೨ರ ವರೆಗೆ ಜರುಗಲಿದೆ ಎಂದು ಕಲಾವಿದ ಸಂಘದ ಜಿಲ್ಲಾಧ್ಯಕ್ಷ ಚನ್ನಬಸು ಮೆಳವಂಕಿ ಹೇಳಿದರು.
ಅವರು, ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವು ಗಾನಯೋಗಿ, ಪದ್ಮಭೂಷಣ ಡಾ|| ಪಂಡಿತ ಪಟ್ಟರಾಜ ಗವಾಯಿಗಳ ಪುಣ್ಯ ಸ್ಮರಣೆ ಕಾರ್ಯಕ್ರಕ್ಕೆ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳ ಕಲಾವಿದರು ಭಾಗವಹಿಸಲಿದ್ದಾರೆ ಎಂದರು.
ದಿ.೧೧ ರಂದು ಸಂಜೆ ೯ಗಂಟೆಗೆ ಎಲ್ಲ ಕಲಾವಿದರ ಬಳಗದಿಂದ ನಗರದ ಶ್ರೀ ಮಹಾಲಕ್ಷಿö್ಮÃ ಸಭಾ ಭವನದಲ್ಲಿ ಸಂಗೀತ ರಸಮಂಜರಿ ಕಾರ್ಯಕ್ರಮ, ದಿ.೧೨ ರಂದು ಬೆಳಿಗ್ಗೆ ನಗರದ ಶ್ರೀ ಕೊಳವಿ ಹನುಮಂತ ದೇವಸ್ಥಾನದಿಂದ ಮೆರಕನಟ್ಟಿ ಶ್ರೀ ಲಕ್ಷಿö್ಮÃ ದೇವಸ್ಥಾನದ ವರೆಗೆ ನಗರ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಯಲಿದೆ. ಭವ್ಯ ಮೆರವಣಿಗೆಯಲ್ಲಿ ಜಿಲ್ಲೆಯ ವಿವಿಧ ಕಲಾ ತಂಡಗಳು ಭಾಗವಹಿಸಲಿವೆ.
ಸಂಗೀತ ಜಾತ್ರೆ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜಿ, ಸಾನಿಧ್ಯವನ್ನು ಕುಂದರಗಿಯ ಶ್ರೀ ಅಮರಸಿದ್ಧೇಶ್ವರ ಮಹಾಸ್ವಾಮಿಜಿ, ಮರಡಿಮಠದ ಶ್ರೀ ಪವಾಡೇಶ್ವರ ಮಹಾಸ್ವಾಮಿಜಿ ವಹಿಸಿದುವರು. ಅಧ್ಯಕ್ಷತೆಯನ್ನು ಶಾಸಕ ರಮೇಶ ಜಾರಕಿಹೊಳಿ, ಉದ್ಘಾಟನೆಯನ್ನು ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಮುಖ್ಯತಿಥಿಗಳಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ, ವಿಧಾನ ಪರಿಷತ ಸದಸ್ಯ ಲಖನ ಜಾರಕಿಹೊಳಿ, ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ಯುವ ನಾಯಕ ಸರ್ವೋತ್ತಮ ಭೀಮಶಿ ಜಾರಕಿಹೊಳಿ ಆಗಮಿಸಲಿದ್ದಾರೆ. ನಾಡಿನ ಎಲ್ಲ ಕಲಾವಿದರು, ಸಂಗೀತ ಪ್ರೇಮಿಗಳು ಹಾಗೂ ಡಾ|| ಪಂಡಿತ ಪುಟ್ಟರಾಜ ಗವಾಯಿಯವರ ಸಕಲ ಸದ್ಭಕ್ತರು ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕೆಂದರು.
ಪತ್ರಿಕಾಗೋಷ್ಠಿಯಲ್ಲಿ ಕಲಾವಿದರಾದ ಬಸವರಾಜ ಮಮದಾಪೂರ, ಗೋಪಾಲ ಲಾಗವೆ, ಅನೀಲ ಲಾಗವೆ, ಜ್ಞಾನೇಶ್ವರ ಲಾಗವೆ ಸೇರಿದಂತೆ ಇತರರು ಇದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

3 × 4 =