Breaking News

ಗುರು ಆರೂಢರ ರಥೋತ್ಸವ!

Spread the love

ಗುರು ಆರೂಢರ ರಥೋತ್ಸವ!

ಬಸವನಬಾಗೇವಾಡಿ: ತಾಲೂಕಿನ ಆರೂಢನಂದಿಹಾಳ ಗ್ರಾಮದಲ್ಲಿ ಮಂಗಳವಾರ ಶ್ರೀಗುರು ಆರೂಢರ ೪೧ ನೇ ಜಾತ್ರಾಮಹೋತ್ಸವದಂಗವಾಗಿ ಅಪಾರ ಭಕ್ತರ ಜಯಘೋಷದೊಂದಿಗೆ ರಥೋತ್ಸವ ಸಂಭ್ರಮದಿಂದ ಜರುಗಿತು.

ಜಾತ್ರಾಮಹೋತ್ಸವದಂಗವಾಗಿ ಶ್ರೀಗುರು ಆರೂಢರ ಐಕ್ಯ ಮಂಟಪಕ್ಕೆ ವಿಶೇಷ ಪೂಜೆ, ಅಲಂಕಾರ ಮಾಡಲಾಗಿತ್ತು. ಅಭಿಷೇಕರ ನಂತರ ಕಳಸವನ್ನು ಗಂಗಾಸ್ಥಳಕ್ಕೆ ತೆಗೆದುಕೊಂಡುಪ ಹೋಗಿ ಪೂಜೆ ಸಲ್ಲಿಸಿ ವಾದ್ಯಮೇಳದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸುಮಂಗಲೆಯರ ಕುಂಭಮೇಳದೊಂದಿಗೆ ಪಲ್ಲಕ್ಕಿ ಉತ್ಸವ ಮೆರವಣಿಗೆ ಜರುಗಿದ ನಂತರ ಆರೂಢರು ಸಾಧನೆಗೈದ ಕೊಂಪಿಗೆ ಸಾಗಿ ಶ್ರೀಮಠಕ್ಕೆ ತಲುಪಿತು. ಗ್ರಾಮದ ಗುರುನಗೌಡ ಪಾಟೀಲ, ಬಸಯ್ಯ ಹಿರೇಮಠ, ರಾಮನಗೌಡ ಹಳ್ಳಿ, ಕೆಂಚು ವಾಲೀಕಾರ, ನಿಂಗಣ್ಣ ಮದರಿ ಅವರ ಮನೆಗಳಿಂದ ಕಳಸ, ಹಗ್ಗ, ಛತ್ರಿ ಛಾಮರಗಳನ್ನು ವಾದ್ಯ ವೈಭವದೊಂದಿಗೆ ತಂದ ನಂತರ ಕಡಕೋಳ ಹಿರೇಮಠದ ರಾಜಗುರು ಮಹಾಲಿಂಗ ಸ್ವಾಮೀಜಿಯವರು ಪೂಜೆ ಸಲ್ಲಿಸಿದ ನಂತರ ರಥೋತ್ಸವ ವಿವಿಧೆಡೆಗಳಿಂದ ಆಗಮಿಸಿದ್ದ ಭಕ್ತ ಸಮೂಹದ ಜಯಘೋಷದೊಂದಿಗೆ ಸಂಭ್ರಮದಿಂದ ಜರುಗಿತು.
ರಥೋತ್ಸವದಲ್ಲಿ ಶ್ರೀಮಠದ ಅಧ್ಯಕ್ಷ ಎಸ್.ವಿ.ಕನ್ನೂರ, ಗ್ರಾಪಂ ಸದಸ್ಯರಾದ ರಾಮಚಂದ್ರ ಸಾಸನೂರ, ಪಾರ್ವತಿ ಹಳ್ಳಿ ಸೇರಿದಂತೆ ಇತರರು ಭಾಗವಹಿಸಿದ್ದರು. ನಂತರ ಆಕರ್ಷಕವಾದ ಸಿಡಿಮದ್ದು ಸುಡಲಾಯಿತು. ರಾತ್ರಿ ಅಥಣಿ ತಾಲೂಕಿನ ಕರಕರಿ ಗ್ರಾಮದ ಅಜೇಶ್ವರಿ ನಾಟ್ಯ ಸಂಘದಿಂದ ಶಿವಭಕ್ತ ಮಾರ್ಕಂಡೇಯ ನಾಟಕ ಪ್ರದರ್ಶನವಾಯಿತು.


Spread the love

About Yuva Bharatha

Check Also

ಅಂಜಲಿ ಹತ್ಯೆ ಪ್ರಕರಣ ಖಂಡಿಸಿ ಆರೋಪಿಗೆ ಕಠೀಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಗೋಕಾಕನಲ್ಲಿ ಪ್ರತಿಭಟನೆ.!

Spread the loveಅಂಜಲಿ ಹತ್ಯೆ ಪ್ರಕರಣ ಖಂಡಿಸಿ ಆರೋಪಿಗೆ ಕಠೀಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಗೋಕಾಕನಲ್ಲಿ ಪ್ರತಿಭಟನೆ.! ಗೋಕಾಕ: ಹುಬ್ಬಳ್ಳಿಯಲ್ಲಿ …

Leave a Reply

Your email address will not be published. Required fields are marked *

15 + twelve =