Breaking News

ಶೀಘ್ರದಲ್ಲೇ ಮಹಾರಾಷ್ಟ್ರದಲ್ಲಿ ಬಿಜೆಪಿ ಸರಕಾರ ಅಸ್ಥಿತ್ವಕ್ಕೆ- ರಾಯಬಹದ್ದೂರ ಕದಮ.!

Spread the love

ಶೀಘ್ರದಲ್ಲೇ ಮಹಾರಾಷ್ಟ್ರದಲ್ಲಿ ಬಿಜೆಪಿ ಸರಕಾರ ಅಸ್ಥಿತ್ವಕ್ಕೆ- ರಾಯಬಹದ್ದೂರ ಕದಮ.!


ಗೋಕಾಕ: ಮಹಾರಾಷ್ಟ್ರದ ಅಘಾಡಿ ಸರಕಾರದಲ್ಲಿ ಅಸಮಾಧಾನ ಬುಗಿಲೆದ್ದಿದ್ದು ಶೀಘ್ರದಲ್ಲೇ ಮಹಾರಾಷ್ಟçದಲ್ಲಿ ಬಿಜೆಪಿ ಸರಕಾರ ಅಸ್ಥಿತ್ವಕ್ಕೆ ಬರಲಿದೆ ಎಂದು ಬಿಜೆಪಿ ಎಸ್‌ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಯಬಹದ್ದೂರ ಕದಮ ಹೇಳಿದರು.
ಅವರು, ಶನಿವಾರದಂದು ಇಲ್ಲಿಯ ಜೆಆರ್‌ಬಿಸಿ ಕಾಲೋನಿಯ ಸರಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತ್ರತ್ವದ ಕೇಂದ್ರ ಸರಕಾರ ೮ವರ್ಷಗಳನ್ನು ಪೂರೈಸಿದ ಹಿನ್ನಲೆಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲಗಳ ಎಸ್‌ಸಿ ಮೋರ್ಚಾ ವತಿಯಿಂದ ಸಸಿ ನೆಟ್ಟು, ಮಕ್ಕಳಿಗೆ ಸಿಹಿ ಹಂಚಿ ಸಂಭ್ರಮಿಸಿ ಮಾತನಾಡಿದರು.
ಬಿಜೆಪಿ ಪಕ್ಷದ ಕಾರ್ಯಕರ್ತರು ರಾಜ್ಯದಲ್ಲಿ ಮುಂಬರುವ ವಿಧಾನ ಸಭೆ ಚುನಾವಣೆಯ ಹಿನ್ನಲೆ ರಾಜ್ಯ ಹಾಗೂ ಕೇಂದ್ರ ಸರಕಾರಗಳ ಜನಪರಯೋಜನೆಗಳನ್ನು ಜನರ ಮನೆ ಮನಗಳಿಗೆ ತಲುಪಿಸುವ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರಕಾರವನ್ನು ತರಲು ತನು ಮನ ಧನದಿಂದ ಶ್ರಮಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಎಸ್‌ಸಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಪೃಥ್ವಿಸಿಂಗ, ಜಿಲ್ಲಾ ಸಂಚಾಲಕ ರಮೇಶ ಹರಿಜನ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ತವನರಾಜ ಬೆನ್ನಾಡಿ, ಸುರೇಶ ಸನದಿ, ಶಶಿಧರ ದೇಮಶೆಟ್ಟಿ, ಚಿದಾನಂದ ದೇಮಶೆಟ್ಟಿ, ಲಕ್ಕಪ್ಪ ತಹಶೀಲ್ದಾರ, ನಗರ ಹಾಗೂ ಗ್ರಾಮೀಣ ಎಸ್‌ಸಿ ಮೋರ್ಚಾ ಅಧ್ಯಕ್ಷರುಗಳಾದ ಮಂಜುನಾಥ ಮಾವರಕರ, ವೀರಭದ್ರ ಗಡ್ಡವ್ವಗೋಳ ಮತ್ತು ನಟರಾಜ ಶೆಟ್ಟೆನ್ನವರ, ಸುರೇಶ ಬೀರನಗಡ್ಡಿ, ಲಕ್ಷö್ಮಣ ತಳ್ಳಿ, ಶಕೀಲ ಧಾರವಾಡ್ಕರ, ನಾಗರಾಜ ಮರೆಪ್ಪಗೋಳ, ಹನಮಂತ ಸೊಂಡಿ, ಶೇಖರ ದೊಡಮನಿ, ಮಲ್ಲಪ್ಪ ಅಮ್ಮನಗಿ, ಯಲ್ಲಪ್ಪ ಹೊಸಮನಿ, ರವಿ ಕಡಕೋಳ, ಬಸವರಾಜ ಮೇಸ್ತಿç, ವಿನಾಯಕ ಮಾವರಕರ, ಸಂಜು ಗಾಡಿವಡ್ಡರ ಸೇರಿದಂತೆ ಅನೇಕರು ಇದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

six + nine =