Breaking News

ಅತಿವೃಷ್ಟಿ ಮತ್ತು ಪ್ರವಾಹ ನಿಯಂತ್ರಣದ ಬಗ್ಗೆ ಪೂರ್ವಭಾವಿ ಸಭೆ.!

Spread the love

ಅತಿವೃಷ್ಟಿ ಮತ್ತು ಪ್ರವಾಹ ನಿಯಂತ್ರಣದ ಬಗ್ಗೆ ಪೂರ್ವಭಾವಿ ಸಭೆ.!


ಗೋಕಾಕ: ನಿರಂತರ ಮಳೆ ಹಾಗೂ ಮುಂದೆ ಬರಬಹುದಾದ ಪ್ರವಾಹ ಭೀತಿಯನ್ನು ಎದುರಿಸುವ ಸಲುವಾಗಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ತಾಲೂಕಾ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪರಿಶಿಷ್ಟ ಪಂಗಡ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು, ಗುರುವಾರದಂದು ನಗರದ ತಹಶೀಲ್ದಾರ ಕಛೇರಿಯಲ್ಲಿ ಅತಿವೃಷ್ಟಿ ಮತ್ತು ಪ್ರವಾಹ ನಿಯಂತ್ರಣದ ಬಗ್ಗೆ ಕರೆಯಲಾದ ಪೂರ್ವಭಾವಿ ಸಭೆಯಲ್ಲಿ ಪಂಚಾಯತ ಮಟ್ಟದ ನೋಡಲ್ ಅಧಿಕಾರಿಗಳು ಮತ್ತು ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳ ಉದ್ದೇಶಿಸಿ ಮಾತನಾಡಿದರು.
ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದಲ್ಲದೆ ಕಾಳಜಿ ಕೇಂದ್ರಗಳಿಗಾಗಿ ಕಟ್ಟಡಗಳನ್ನು ಗುರುತಿಸಿ ಜನರ ಸ್ಥಳಾಂತರಕ್ಕಾಗಿ ಕ್ರಮವಹಿಸುವುದು ಮತ್ತು ರೋಗ ರುಜಿನಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸುವುದು, ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಇತ್ಯಾದಿಗಳನ್ನು ಮಾಡಿಕೊಳ್ಳಲು ಸೂಚನೆ ನೀಡಿದರು.
ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಮಾತನಾಡಿ, ತಾಲೂಕು ಕಛೇರಿಯಲ್ಲಿ ೨೪/೭ ಕಂಟ್ರೋಲ್ ರೂಮ್ ತೆರೆಯಲಾಗಿದ್ದು, ಸಹಾಯವಾಣಿ ಸಂಖ್ಯೆ ೦೮೩೩೨-೨೨೫೦೭೩ ಇರುತ್ತದೆ. ಪ್ರವಾಹ ಪೀಡಿತವಾಗುವ ಸಂಭಾವ್ಯ ಗ್ರಾಮಗಳಿಗೆ ತಾಲೂಕು ಮಟ್ಟದ ಅಧಿಕಾರಿಗಳನ್ನು ನೂಡಲ್ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿದೆ ಮತ್ತು ಯಾವುದೇ ರೀತಿಯ ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ತಕ್ಷಣ ಸ್ಪಂದಿಸಲು ತಾಲೂಕು ಆಡಳಿತದಿಂದ ಸಂಪೂರ್ಣ ಸಿಧ್ದತೆಯನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ನಗರಸಭೆ ಪೌರಾಯುಕ್ತ ಶಿವಾನಂದ ಹಿರೇಮಠ, ತಾಲೂಕ ಪಂಚಾಯತ ಕಾರ್ಯ ನಿರ್ವಹಣಾಧಿಕಾರಿ ಮುರಳಿ ದೇಶಪಾಂಡೆ, ತೋಟಗಾರಿಕೆ ಇಲಾಖೆಯ ಜನಮಟ್ಟಿ, ಬಿಇಒ ಜಿ ಬಿ ಬಳಿಗಾರ, ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಎಸ್ ಪಿ ವರಾಳೆ, ಪಶು ವೈದ್ಯಕೀಯ ಇಲಾಖೆಯ ಮೋಹನ ಕಮತ, ಪಿಎಸ್‌ಐ ತೌಸೀಫ್ ಘೋರಿ, ಜಿಆರ್‌ಬಿಸಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವಿ ಸಿ ಪತ್ತಾರ ಹಾಗೂ ಕಂದಾಯ ನಿರೀಕ್ಷಕರು ಉಪಸ್ಥಿತರಿದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

18 − 2 =