Breaking News

ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಮಹತ್ವ ನೀಡಿ-ಶಾಸಕ ರಮೇಶ ಜಾರಕಿಹೊಳಿ.!

Spread the love

ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಮಹತ್ವ ನೀಡಿ-ಶಾಸಕ ರಮೇಶ ಜಾರಕಿಹೊಳಿ.!


ಗೋಕಾಕ: ಪರಸ್ಪರ ಹೊಂದಾಣಿಕೆಯಿAದ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಮಹತ್ವ ನೀಡುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಮಂಗಳವಾರದAದು ತಾಲೂಕಿನ ಮರಡಿಮಠ ಗ್ರಾಮದಲ್ಲಿರುವ ಕೊಣ್ಣೂರ ಪುರಸಭೆ ಆವರಣದಲ್ಲಿ ಕೊಣ್ಣೂರ ಪುರಸಭೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸತತವಾಗಿ ಮಳೆ ಬಿಳುತ್ತಿರುವ ಹಿನ್ನೆಲೆಯಲ್ಲಿ ಮಳೆಯಿಂದ ಹಾಗೂ ಪ್ರವಾಹದಿಂದ ಸಂಭವಿಸುವ ಅವಗಡಗಳಿಗೆ ಎಲ್ಲಾ ರೀತಿಯ ಪೂರ್ವ ಸಿದ್ದತೆ ಮಾಡಿಕೊಳ್ಳಬೇಕು. ಶುದ್ಧ ಕುಡಿಯುವ ನೀರು ಹಾಗೂ ಪಟ್ಟಣದ ಸ್ವಚ್ಛತೆಗೆ ಹೆಚ್ಚಿನ ಮಹತ್ವ ನೀಡಿ ಕಾರ್ಯನಿರ್ವಹಿಸಬೇಕು. ಪೌರ ಕಾರ್ಮಿಕರು ತಾವು ತಮ್ಮ ಕರ್ತವ್ಯದಲ್ಲಿ ನಿರತರಾಗಿ ನಿಮ್ಮ ಸಮಸ್ಯೆಗಳನ್ನು ಪರಿಹರಿಸಲು ನಾವು ಬದ್ಧರಾಗಿದ್ದೇವೆ. ಸದಸ್ಯರುಗಳು ತಮ್ಮ ವಾರ್ಡಗಳಲ್ಲಿಯ ಜನರ ಸಮಸ್ಯೆಗೆ ಸ್ವಂದಿಸಿ ಸರಕಾರದ ಯೋಜನೆಗಳ ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು.
ಇದೇ ಸಮಯದಲ್ಲಿ ಪುರಸಭೆ ಸದಸ್ಯರು ಶಾಸಕ ರಮೇಶ ಜಾರಕಿಹೊಳಿ ಅವರನ್ನು ಸತ್ಕರಿಸಿದರು.
ಈ ಸಂದರ್ಭದಲ್ಲಿ ಮಖ್ಯಾಧಿಕಾರಿ ಶಿವಾನಂದ ಹಿರೇಮಠ, ಪುರಸಭೆ ಅಧ್ಯಕ್ಷೆ ಶ್ರೀಮತಿ ಮಂಗಳಾ ತೇಲಿ, ಉಪಾಧ್ಯಕ್ಷ ಅಶೋಕ್ ಕುಮಾರ್ ನಾಯಿಕ , ಹಿರಿಯ ಸದಸ್ಯ ಪ್ರಕಾಶ ಕರನಿಂಗ್, ವಿನೋದ ಕರನಿಂಗ್ ಸೇರಿದಂತೆ ಸರ್ವ ಸದಸ್ಯರು ಉಪಸ್ಥಿತರಿದ್ದರು.


Spread the love

About Yuva Bharatha

Check Also

ಪತ್ರಿಕೋದ್ಯಮದ ಬೆಳವಣಿಗೆಯಲ್ಲಿ ಪತ್ರಿಕಾ ವಿತರಕರ ಪಾತ್ರ ಬಹಳ ದೊಡ್ಡದು.- ರಮೇಶ ಜಾರಕಿಹೊಳಿ.!

Spread the loveಪತ್ರಿಕೋದ್ಯಮದ ಬೆಳವಣಿಗೆಯಲ್ಲಿ ಪತ್ರಿಕಾ ವಿತರಕರ ಪಾತ್ರ ಬಹಳ ದೊಡ್ಡದು.- ರಮೇಶ ಜಾರಕಿಹೊಳಿ.! ಗೋಕಾಕ: ಪತ್ರಿಕೆಗಳನ್ನು ಮನೆಗಳಿಗೆ ಸರಿಯಾದ …

Leave a Reply

Your email address will not be published. Required fields are marked *

three × two =