Breaking News

ಅಪಘಾತವನ್ನು ತಡೆದು ಅಮೂಲ್ಯವಾದ ಜೀವಗಳನ್ನು ಉಳಿಸಿ-ಸಿಪಿಐ ಗೋಪಾಲ ರಾಠೋಡ ಸಲಹೆ.!

Spread the love

ಅಪಘಾತವನ್ನು ತಡೆದು ಅಮೂಲ್ಯವಾದ ಜೀವಗಳನ್ನು ಉಳಿಸಿ-ಸಿಪಿಐ ಗೋಪಾಲ ರಾಠೋಡ ಸಲಹೆ.!


ಗೋಕಾಕ: ರಸ್ತೆ ನಿಮಗಳನ್ನು ಪಾಲನೆ ಮಾಡುವ ಮೂಲಕ ಸಂಭವಿಸಬಹುದಾದ ಅಪಘಾತವನ್ನು ತಡೆದು ಅಮೂಲ್ಯವಾದ ಜೀವಗಳನ್ನು ಉಳಿಸುವಂತೆ ಸಿಪಿಐ ಗೋಪಾಲ ರಾಠೋಡ ಹೇಳಿದರು.
ಅವರು, ಬೆಳಗಾವಿ ಜಿಲ್ಲಾ ಪೋಲಿಸ್ ಇಲಾಖೆ ಮತ್ತು ಗೋಕಾಕ ಶಹರ ಪೋಲಿಸ ಠಾಣೆ ವತಯಿಂದ ರಸ್ತೆ ಸುರಕ್ಷತಾ ಸಪ್ತಾಹ ಜಾಥಾ ಕಾರ್ಯಕ್ರಮ ಅಂಗವಾಗಿ ನಗರದಲ್ಲಿ ವಾಹನ ಚಾಲಕರಿಗೆ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಮಾಹಿತಿ ನೀಡಿ ಮಾತನಾಡಿ, ವಾಹನ ಮಾಲೀಕರು ಹಾಗೂ ಚಾಲಕರು ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು ಎಂದರು.
ಅನೇಕ ಅಪಘಾತಗಳು ಮನುಷ್ಯನ ತಪ್ಪುಗಳಿಂದಲೇ ಆಗುತ್ತವೆ. ಜೀವ ಎಲ್ಲದಕ್ಕಿಂತಲೂ ಮುಖ್ಯ ಎಂಬುದನ್ನು ಅರಿತು, ಚಾಲಕರು ರಸ್ತೆ ನಿಯಮಗಳನ್ನು ಹಾಗೂ ಸಂಚಾರ ಚಿಹ್ನೆಗಳನ್ನು ಚೆನ್ನಾಗಿ ಅರಿತುಕೊಳ್ಳಬೇಕು. ಸಂಚಾರ ನಿಯಮಗಳನ್ನು ಪಾಲನೆ ಮಾಡಿದರೆ ಸಾಕಷ್ಟು ಅಪಘಾತಗಳನ್ನು ತಡೆಗಟ್ಟಬಹುದು ಎಂದು ತಿಳಿಸಿದರು.
ಪಿಎಸ್‌ಐ ಎಮ್ ಡಿ ಘೋರಿ ಸೇರಿದಂತೆ ಪೋಲಿಸ್ ಸಿಬ್ಬಂಧಿ, ವಾಹನ ಚಾಲಕರು ಉಪಸ್ಥಿತರಿದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

twelve − one =