ಕೃಷಿಯೊಂದಿಗೆ ಹೈನುಗಾರಿಕೆಗೂ ಹೆಚ್ಚಿನ ಮಹತ್ವ ನೀಡಿ-ಅಮರನಾಥ ಜಾರಕಿಹೊಳಿ.!
ಗೋಕಾಕ: ಸರಕಾರದ ಯೋಜನೆಗಳ ಸದುಪಯೋಗದಿಂದ ರೈತರು ಆರ್ಥಿಕವಾಗಿ ಸದೃಢರಾಗಿರೆಂದು ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಹೇಳಿದರು.ಅವರು, ಬುಧವಾರದಂದು ನಗರದ ಶಾಸಕ ರಮೇಶ ಜಾರಕಿಹೊಳಿ ಅವರ ಕಾರ್ಯಾಲಯದ ಆವರಣದಲ್ಲಿ ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದಿಂದ ಗೋಕಾಕ ಮತಕ್ಷೇತ್ರದ ೬೫ ಫಲಾನುಭವಿಗಳಿಗೆ ಪಂಪ ಸೇಟ್ಟಗಳನ್ನು ವಿತರಿಸಿ ಮಾತನಾಡಿದರು.
ರೈತರು ಕೃಷಿಯಲ್ಲಿ ಆಧುನಿಕತೆಯನ್ನು ಅಳವಡಿಸಿಕೊಳ್ಳಬೇಕು. ಶಾಸಕರು ಕ್ಷೇತ್ರವನ್ನು ಸಂಪೂರ್ಣ ನೀರಾವರಿ ಕ್ಷೇತ್ರವನ್ನಾಗಿ ಮಾಡಲು ಹಲವಾರು ಯೋಜನೆಗಳ ಮೂಲಕ ಕಾರ್ಯಪ್ರವೃತ್ತರಾಗಿದ್ದಾರೆ. ಇವರ ಸದುಪಯೋಗದಿಂದ ಆರ್ಥಿಕ ಪ್ರಗತಿಯನ್ನು ಸಾಧಿಸಿ. ಕೃಷಿಯೊಂದಿಗೆ ಹೈನುಗಾರಿಕೆಗೂ ಹೆಚ್ಚಿನ ಮಹತ್ವ ನೀಡಿ ಇದಕ್ಕೆ ಎಲ್ಲ ರೀತಿಯ ಸಹಕಾರವನ್ನು ಕೆಎಮ್‌ಎಫನಿಂದ ನೀಡಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಮಡ್ಡೆಪ್ಪ ತೋಳಿನವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಶಾಸಕರ ಆಪ್ತ ಸಹಾಯಕ ಸುರೇಶ ಸನದಿ, ಕೆಂಪಣ್ಣ ಮೈಲನ್ನವರ, ಬಿಜೆಪಿ ನಗರಾಧ್ಯಕ್ಷ ಭೀಮಶಿ ಭರಮನ್ನವರ, ನಿಗಮದ ಶಿವಾನಂದ ದೊಡ್ಡಮನಿ ಸೇರಿದಂತೆ ಅನೇಕರು ಇದ್ದರು.