Breaking News

ದಿ.ಉಮೇಶ ಕತ್ತಿ ಮನೆಗೆ ಭೀಮಶಿ ಜಾರಕಿಹೊಳಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.!

Spread the love

ದಿ.ಉಮೇಶ ಕತ್ತಿ ಮನೆಗೆ ಭೀಮಶಿ ಜಾರಕಿಹೊಳಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.!

ಗೋಕಾಕ: ದಿ.ಉಮೇಶ ಕತ್ತಿ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಭೀಮಶಿ ಜಾರಕಿಹೊಳಿ ಅವರು ಕತ್ತಿಯವರ ಬೆಲ್ಲದ ಬಾಗೇವಾಡಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಬುಧವಾರದಂದು ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ನಿವಾಸದಲ್ಲಿ ದಿ.ಉಮೇಶ ಕತ್ತಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಭೀಮಶಿ ಜಾರಕಿಹೊಳಿ ಅವರು ಮೃತ ಉಮೇಶ ಕತ್ತಿ ಸಹೋದರ ರಮೇಶ ಕತ್ತಿ, ಪುತ್ರ ನಿಖಿಲ ಕತ್ತಿ ಸೇರಿದಂತೆ ಕುಟುಂಬದವರಿಗೆ ಸಾಂತ್ವನ ಹೇಳಿ, ಮಾತನಾಡಿದರು.
ದಿ.ಉಮೇಶ ಕತ್ತಿಯವರು ಈ ನಾಡು ಕಂಡು ಪ್ರಬುದ್ಧ ರಾಜಕಾರಣಿ, ಉತ್ತರ ಕರ್ನಾಟಕದ ಬಗ್ಗೆ ಅವರಿಗಿದ್ದ ವಿಶೇಷ ಕಾಳಜಿಯಿಂದ ಉತ್ತರಕರ್ನಾಟಕ ಭಾಗದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು ಯಶಸ್ವಿಯಾಗಿವೆ. ಅವರು ನಮ್ಮನ್ನು ಅಗಲಿದ್ದರು ನಮ್ಮ ಮನಗಳಲ್ಲಿ ಸದಾ ನೆಲೆಯೂರಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಕತ್ತಿ ಕುಟುಂಬಸ್ತರು, ಬೆಂಬಲಿಗರು ಇದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

10 + four =