ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೆ ಸಾವು.!

ಗೋಕಾಕ: ಬುಧವಾರದಂದು ರಾತ್ರಿ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿ ನಡೆದಿದೆ.
ಗೋಕಾಕ ನಗರದಿಂದ ಚಿಕ್ಕನಂದಿಗೆ ಹೋಗುತ್ತಿರುವ ಬೈಕ್ ಸವಾರ ಮತ್ತು ಉಡುಪಿಯಿಂದ ಗೋಕಾಕ ನಗರಕ್ಕೆ ತೆರಳುವ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದಾನೆ.
ಬೈಕ್ ಸವಾರ ಚಿಕ್ಕನಂದಿ ಗ್ರಾಮದ ರೇವಪ್ಪ ಬಣವಿ ೩೬ ಎಂದು ತಿಳಿದು ಬಂದಿದೆ. ಈ ಕುರಿತು ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
YuvaBharataha Latest Kannada News