Breaking News

ದಿ.28ರಂದು ಗೋಕಾಕ ನಗರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ ಆಗಮನ.!

Spread the love

ದಿ.28 ರಂದು ಬಿಜೆಪಿ ಜನಸ್ಫಂಧನ ಕಾರ್ಯಕ್ರಮ ಗೋಕಾಕ ನಗರದಲ್ಲಿ.!


ಗೋಕಾಕ: ಬಿಜೆಪಿ ಪಕ್ಷ ರಾಜ್ಯದ ೧೫೦ ವಿಧಾನಸಭಾ ಕ್ಷೇತ್ರಗಳನ್ನು ಆಯ್ಕೆ ಮಾಡಿ, ಜನಸ್ಫಂಧನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದೆ ದಿ.28 ರಂದು ಗೋಕಾಕ ಮತಕ್ಷೇತ್ರದಲ್ಲಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ ಅವರ ನೇತ್ರತ್ವದಲ್ಲಿ ಜನಸ್ಫಂಧನ ಕಾರ್ಯಕ್ರಮ ಜರುಗಲಿದೆ ಎಂದು ಹಿಂದುಳಿದ ವರ್ಗಗಳ ರಾಷ್ಟಿçÃಯ ಕಾರ್ಯಕಾರಿಣಿ ಸಮಿತಿ ಸದಸ್ಯ ಲಕ್ಷö್ಮಣ ತಪಸಿ ಹೇಳಿದರು.
ಅವರು, ಸೋಮವಾರದಂದು ನಗರದ ನಗರಸಭೆ ಸಮುದಾಯ ಭವನದಲ್ಲಿ ಹಮ್ಮಿಕೊಂಡ ಬಿಜೆಪಿ ಜನಸ್ಫಂಧನ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರಕಾರ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಲು. ಜನಸ್ಫಂಧನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಕಾರ್ಯಕರ್ತರು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಶ್ರಮಿಸುವಂತೆ ಕರೆ ನೀಡಿದರು.
ಬಿಜೆಪಿ ಬೆಳಗಾವಿ ವಿಭಾಗೀಯ ಸಂಘಟನಾ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ ಸೇರಿ ರಾಜ್ಯದ ಪ್ರಮುಖ ನಾಯಕರು ಈ ಕಾರ್ಯಕ್ರಮಕ್ಕೆ ಆಗಮಿಸಲಿದ್ದು, ಪದಾಧಿಕಾರಿಗಳು ಬೂತ ಮಟ್ಟದ ಸಭೆಗಳನ್ನು ಜರುಗಿಸಿ, ಕ್ಷೇತ್ರದಲ್ಲಿ ಹಬ್ಬದ ವಾತಾವರಣ ನಿರ್ಮಿಸಬೇಕು. ಎಲ್ಲ ಪದಾಧಿಕಾರಿಗಳು ಕಾರ್ಯಕರ್ತರು ಶಿಸ್ತು ಬದ್ಧವಾಗಿ ಕಾರ್ಯಕ್ರಮ ನಡೆಸಿಕೊಡುವಂತೆ ವಿನಂತಿಸಿಕೊ0ಡರು.
ವೇದಿಕೆಯ ಮೇಲೆ ಗೋಕಾಕ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ ದೇಶಪಾಂಡೆ, ಸುಭಾಸ ಪಾಟೀಲ, ಜಿಲ್ಲಾ ಉಪಾಧ್ಯಕ್ಷ ಶ್ಯಾಮಾನಂದ ಪೂಜೇರಿ, ಕಾರ್ಯದರ್ಶಿ ಬಸವರಾಜ ಹಿರೇಮಠ, ಕೋಶಾಧ್ಯಕ್ಷ ಮಲ್ಲಿಕಾರ್ಜುನ ಮಾದಮ್ಮನವರ ಉಪಸ್ಥಿತರಿದ್ದರು.
ಯುವ ಮೋರ್ಚಾ ಅಧ್ಯಕ್ಷ ಮಂಜು ಪ್ರಭುನಟ್ಟಿ, ಓಬಿಸಿ ಮೋರ್ಚಾ ಅಧ್ಯಕ್ಷ ಲಕ್ಷö್ಮಣ ಖಡಕಭಾಂವಿ, ಎಸ್‌ಸಿ ಮೋರ್ಚಾ ಅಧ್ಯಕ್ಷ ಮಂಜುನಾಥ ಮಾವರಕರ, ಮುಖಂಡರುಗಳಾದ ಸುರೇಶ ಸನದಿ, ಹನಮಂತ ದುರ್ಗನ್ನವರ, ಲಕ್ಕಪ್ಪ ತಹಶೀಲದಾರ, ಅಬ್ಬಾಸ ದೇಸಾಯಿ, ಪುಂಡಲೀಕ ವಣ್ಣೂರ, ಸಿದ್ದಪ್ಪ ಹುಚ್ಚರಾಯಪ್ಪಗೋಳ, ಶಕೀಲ ಧಾರವಾಡ್ಕರ, ಜ್ಯೋತಿ ಕೋಲಾರ, ಸೇರಿದಂತೆ ಬೂತ ಅಧ್ಯಕ್ಷರು ನೂರಾರು ಕಾರ್ಯಕರ್ತರು ಇದ್ದರು.
ನಗರ ಮಂಡಲ ಉಪಾಧ್ಯಕ್ಷ ರಂಗಪ್ಪ ನಾಯ್ಕ ಸ್ವಾಗತಿಸಿದರು, ನ್ಯಾಯವಾದಿ ಲಕ್ಕಪ್ಪ ಬಂಡಿ ನಿರೂಪಿಸಿದರು. ಮಹಿಳಾ ಮೋರ್ಚಾ ಅಧ್ಯಕ್ಷೆ ರಾಜೇಶ್ವರಿ ಒಡೆಯರ ವಂದಿಸಿದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

20 − 18 =