ಶಾಸಕ ರಮೇಶ ಜಾರಕಿಹೊಳಿ ಪ್ರಯತ್ನದಿಂದಾಗಿ ಎಸ್‌ಟಿ ಮೀಸಲಾತಿ ಹೆಚ್ಚಳ-ಲಕ್ಷ್ಮಣ ತಪಸಿ.!
ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸತತ ಪ್ರಯತ್ನದಿಂದಾಗಿ ಎಸ್‌ಟಿ ಮೀಸಲಾತಿಯನ್ನು ಹೆಚ್ಚಿಸಿ ಸರಕಾರ ಜಾರಿಗೊಳಿಸಿದೆ ಎಂದು ರಾಷ್ಟ್ರೀಯ ಒಬಿಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ ತಪಸಿ ಹೇಳಿದರು.
ಅವರು, ನಗರದ ಶಾಸಕರ ಗೃಹ ಕಚೇರಿಯಲ್ಲಿ ಬಿಜೆಪಿ ನಗರ ಮತ್ತು ಗ್ರಾಮೀಣ ಮಂಡಲದಿಂದ ಹಮ್ಮಿಕೊಂಡ ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಮಹರ್ಷಿ ಶ್ರೀ ವಾಲ್ಮೀಕಿ ಪೂಜೆ ಸಲ್ಲಿಸಿ ಮಾತನಾಡಿದರು.
ಕಳೆದ ಹಲವು ವರ್ಷಗಳಿಂದ ಎಸ್‌ಟಿ ಮೀಸಲಾತಿ ಹೆಚ್ಚಳಕ್ಕಾಗಿ ಹೋರಾಟ ನಡೆಸಿದರು ಯಾವುದೇ ಪ್ರಯೋಜನವಾಗಿರಲಿಲ್ಲ. ಜಾರಕಿಹೊಳಿ ಸಹೋದರರ ಬೇಡಿಕೆಗೆ ಸ್ಫಂಧಿಸಿ ಬಿಜೆಪಿ ನೇತ್ರತ್ವದ ರಾಜ್ಯ ಸರಕಾರ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ ದಾಸ ಸಮಿತಿಯ ಆಯೋಗದ ವರದಿ ಅನುಷ್ಠಾಬಕ್ಕೆ ತಂದು ಮೀಸಲಾತಿಯನ್ನು ಹೆಚ್ಚಿಸಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ಜಿಪಂ ಮಾಜಿ ಸದಸ್ಯರುಗಳಾದ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ಮುಖಂಡರುಗಳಾದ ಶಶಿಧರ ದೇಮಶೆಟ್ಟಿ, ಲಕ್ಕಪ್ಪ ತಹಶೀಲದಾರ, ಲಕ್ಷ್ಮಣ ತಳ್ಳಿ, ಪ್ರಮೋದ ಜೋಶಿ, ಕಾಂತು ಎತ್ತಿನಮನಿ, ಅಶೋಕ ಗೋಣಿ, ಸದರಜೋಶಿ, ವಿವಿಧ ಮೋರ್ಚಾ ಪದಾಧಿಕಾರಿಗಳಾದ ಲಕ್ಷ್ಮಣ ಖಡಕಭಾಂವಿ, ಮಲ್ಲಿಕಜಾನ ತಳವಾರ, ರಾಜೇಶ್ವರಿ ಒಡೆಯರ, ಶಕೀಲ ಧಾರವಾಡಕರ, ರಂಗಪ್ಪ ನಾಯ್ಕ, ಸುರೇಶ ಪತ್ತಾರ, ವಿರೇಂದ್ರ ಎಕ್ಕೇರಿಮಠ ಸೇರಿದಂತೆ ನಗರಸಭೆ ಸದಸ್ಯರುಗಳು, ಬಿಜೆಪಿ ಕಾಂiÀiðಕರ್ತರು ಉಪಸ್ಥಿತರಿದ್ದರು.