ಪ್ರತಿಯೊಬ್ಬರೂ ಓದುವ ಹವ್ಯಾಸ ಬೆಳಸಿಕೊಳ್ಳಬೇಕು – ಬಸವರಾಜ ಪಣದಿ!
ಯುವ ಭಾರತ ಸುದ್ದಿ ಬೆಟಗೇರಿ: ಗ್ರಾಮೀಣ ವಲಯದ ಗ್ರಾಮ ಪಂಚಾಯತಿ ಗ್ರಂಥಾಲಯಗಳು ಮಕ್ಕಳ ಕಲಿಕೆಗೆ ಆಶಾಕಿರಣವಿದ್ದಂತೆ, ಪ್ರತಿಯೊಬ್ಬರೂ ಓದುವ ಹವ್ಯಾಸ ಬೆಳಸಿಕೊಳ್ಳಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕ ಬಸವರಾಜ ಪಣದಿ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಹಾಗೂ ಸ್ಥಳೀಯ ಗ್ರಾಪಂ ಗ್ರಂಥಾಲಯ ಸಹಯೋಗದಲ್ಲಿ ಓದುವ ಬೆಳಕು ಕಾರ್ಯಕ್ರಮದ ಪ್ರಯುಕ್ತ ಇಲ್ಲಿಯ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಗಳ ಮಕ್ಕಳ ಉಚಿತ ಸದಸ್ಯತ್ವ ನೊಂದಣಿ ಕಾರ್ಯಕ್ಕೆ ಡಿ.೧೪ರಂದು ಚಾಲನೆ ನೀಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಜ್ಞಾನ ಸಂಪತ್ತಿಗಿAತ ಇನ್ನೂಂದು ಸಂಪತ್ತಿಲ್ಲಾ, ನಾವು ಕಷ್ಟಪಟ್ಟು ಸಂಪಾದಿಸಿದ ಆಸ್ತಿ, ಅಂತಸ್ತು ನಶಿಸಿ ಹೋಗಬಹುದು, ಜ್ಞಾನ ಎಂದು ನಶಿಸಿ ಹೋಗುವುದಿಲ್ಲಾ, ವಿದ್ಯಾರ್ಥಿಗಳು ಶಾಲಾ ಬಿಡುವಿನ ವೇಳೆಯಲ್ಲಿ ಉತ್ತಮ ಪುಸ್ತಕಗಳು ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾಗುವ ಪುಸ್ತಕಗಳನ್ನು ಓದಬೇಕು ಎಂದು ಗ್ರಂಥಾಲಯ ಮೇಲ್ವಿಚಾರಕ ಬಸವರಾಜ ಪಣದಿ ಅಭಿಪ್ರಾಯಿಸಿದರು.
ಸ್ಥಳೀಯ ಸಹಿಪ್ರಾಕಗಂ ಶಾಲೆಯ ಮುಖ್ಯ ಶಿಕ್ಷಕ ವೈ.ಸಿ.ಶೀಗಿಹಳ್ಳಿ ಅಧ್ಯಕ್ಷತೆ ವಹಿಸಿದ್ದರು. ಸಹಿಪ್ರಾಕಹೆ ಶಾಲೆಯ ಮುಖ್ಯ ಶಿಕ್ಷಕ ಸಿದ್ದಣ್ಣ ಸನದಿ ಅವರು, ಗ್ರಂಥಾಲಯದ ಸದುಪಯೋಗದ ಕುರಿತು ಶಾಲಾ ಮಕ್ಕಳಿಗೆ ತಿಳಿಸಿದರು. ಡಿ.೧೪ರಂದು ಸುಮಾರು ಒಂದು ನೂರು ಹೆಚ್ಚು ಮಕ್ಕಳ ಉಚಿತ ನೊಂದಣಿ ಕಾರ್ಯ ಜರುಗಿತು.
ಆರ್.ಬಿ.ನಾಯ್ಕ, ಜಿ.ಎಮ್.ಕಮತ, ಎಮ್.ಬಿ.ಸೋಮನಟ್ಟಿ, ವಿದ್ಯಾಶ್ರೀ ಪತ್ತಾರ, ಎಮ್.ಎಸ್.ಪಾಟೀಲ, ಚೆನ್ನಮ್ಮ ಕೆ.ಎನ್., ನಿರ್ಮಲಾ ರಾಮದುರ್ಗ, ಸುರೇಶ ಬಾಣಸಿ, ವಿಠಲ ಚಂದರಗಿ, ಗ್ರಾಪಂ ಸಿಬ್ಬಂದಿ, ಗಣ್ಯರು, ಶಿಕ್ಷಣ ಪ್ರೇಮಿಗಳು, ಉಭಯ ಶಾಲಾ ಶಿಕ್ಷಕರು, ಮಕ್ಕಳು ಇದ್ದರು.